ಬಿಲ್ಲವರ ಅಸೋಸಿಯೇಶನ್‌ ನವಿಮುಂಬಯಿ: ಅರಸಿನ ಕುಂಕುಮ


Team Udayavani, Feb 23, 2017, 5:14 PM IST

21-Mum05a.jpg

ನವಿಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ನವಿಮುಂಬಯಿಯ ಸ್ಥಳೀಯ ಸಮಿತಿ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮವು ಇತ್ತೀಚೆಗೆ ಸಮಿತಿಯ ಕಾರ್ಯಾಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನೆರೂಲ್‌ ಶ್ರೀ ಶನೀಶ್ವರ ಮಂದಿರದ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಪ್ರಾರಂಭದಲ್ಲಿ ಮಹಿಳಾ ವಿಭಾಗದ ಸದಸ್ಯೆಯರಿಂದ ಭಜನ ಕಾರ್ಯಕ್ರಮ ನಡೆಯಿತು. ಆನಂತರ ವಿದ್ಯಾ ಅಂಚನ್‌ ಮತ್ತು ರಾಧಾ ಪೂಜಾರಿ ಅವರ ಪ್ರಾರ್ಥನೆಯೊಂದಿಗೆ, ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ  ಮಹಿಳಾ ವಿಭಾಗದ ಕಾರ್ಯದರ್ಶಿ ಸುಮಿತ್ರಾ ಬಂಗೇರ, ಡಾ| ಗೀತಾಂಜಲಿ, ಅನಿತಾ ಪಿ. ಪೂಜಾರಿ ತಾಕೊಡೆ, ಸ್ಥಳೀಯ ನಗರ ಸೇವಕಿ ಮೀರಾತಾಯಿ ಪಾಟೀಲ್‌, ಆಶಾ ಅಂಚನ್‌, ಸಾವಿತ್ರಿ ಪೂಜಾರಿ, ಸ್ಥಳೀಯ ಕಚೇರಿಯ ಉಪ ಕಾರ್ಯಾಧ್ಯಕ್ಷ ವಿಶ್ವನಾಥ ಕೆ. ಪೂಜಾರಿ, ಜಯಂತಿ ಕೋಟ್ಯಾನ್‌ ಅವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕೋಟಿ-ಚೆನ್ನಯ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟು ಗಳನ್ನು ಗೌರವಿಸಲಾಯಿತು. ಸ್ಥಳೀಯ ಸಮಿತಿಯ ಸಕ್ರಿಯ ಕಾರ್ಯಕರ್ತರಾದ ನಿಕಟ ಪೂರ್ವ ಕೋಶಾಧಿಕಾರಿ ಲಲಿತಾ ಕೋಟ್ಯಾನ್‌,
ಕಾರ್ಯಕಾರಿ ಸಮಿತಿಯ ಸದಸ್ಯ ವಿಶ್ವನಾಥ ಕೋಟ್ಯಾನ್‌ ದಂಪತಿಯನ್ನು ಸಮ್ಮಾನಿ ಸಲಾಯಿತು. ಕಾರ್ಯಕ್ರಮದಲ್ಲಿ ಗೆಜ್ಜೆಗಿರಿ ನಂದನ ಬಿತ್ತ್ಲ್‌ ಮಹಿಮೆಯನ್ನು ಸಾರುವ ಸಿಡಿಯನ್ನು ನಿರ್ಮಾಪಕ ರಮೇಶ್‌ ಸಾಲ್ಯಾನ್‌ ಬಜಗೋಳಿ ಅವರ ನೇತೃತ್ವದಲ್ಲಿ ಬಿಡುಗಡೆ ಗೊಳಿಸಲಾಯಿತು. ನೆರೆದ ಸಮಾಜ ಬಾಂಧವ ರಿಗೆ ನಾರಾಯಣ ಗುರುಗಳ ಸ್ಟಿಕ್ಕರ್‌ನ್ನು ಹಂಚಲಾಯಿತು.

ಅನಿತಾ ಪಿ. ಪೂಜಾರಿ ತಾಕೊಡೆ ಅವರು ಮಾತನಾಡಿ, ಮಹಿಳೆಯರು ಅಡುಗೆ ಮನೆಯಿಂದ ಹೊರಬಂದು ಸಮಾಜ ಮುಖೀ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿ
ಕೊಳ್ಳಬೇಕು. ಅರಸಿನ ಕುಂಕುಮ ಎಂಬುದು ಮಹಿಳೆಯರಿಗೆ ಆಭರಣವಿದ್ದಂತೆ ಎಂದರು.

ಸುಮಿತ್ರಾ ಬಂಗೇರ ಅವರು ಮಾತನಾಡಿ, ಮಹಿಳೆಯರು ಕುಟುಂಬ ನಿರ್ವಹಣೆ ಯೊಂದಿಗೆ ಸಮಾಜಪರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ಸಮಾಜ ಸುಧಾರಣೆಯಾಗಲು ಸಾಧ್ಯವಿದೆ ಎಂದರು.

ಸಂಘ-ಸಂಸ್ಥೆಗಳ ಮುಖಾಂತರ ಒಗ್ಗಟ್ಟಾಗಿ ಸಮಾಜವನ್ನು ಮುಂದುವರಿಸುವ ಕೆಲಸ ಮಹಿಳೆಯರಿಂದ ಆಗಬೇಕಾಗಿದೆ ಎಂದು ಡಾ| ಗೀತಾಂಜಲಿ ನುಡಿದರು. ಸ್ಥಳೀಯ ನಗರ ಸೇವಕಿ ಮೀರಾತಾಯಿ ಪಾಟೀಲ್‌ ಮಾತನಾಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ತುಂಬಾ ಸಂತೋಷವಾಗುತ್ತದೆ.  ಬಿಲ್ಲವ ಸಮಾಜ ಬಾಂಧವರು ನನ್ನನ್ನು ಪ್ರೀತಿಯಿಂದ, ಗೌರವದಿಂದ ಕಾಣುತ್ತಿದ್ದು, ಅಭಿಮಾನ ವೆನಿಸುತ್ತಿದೆ. ನಾನು ಸದಾ ನಿಮ್ಮ ಸಮಾಜ  ಸೇವೆಗಳಿಗೆ ಸಹಕರಿಸಲು ಸಿದ್ಧ ಎಂದರು.

ಜಯಂತಿ ಕೋಟ್ಯಾನ್‌ ಅವರು ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು. ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು ಮಾತನಾಡಿ, ನಾವು ಉತ್ತಮ ಮನಸ್ಸಿನಿಂದ ಯಾವುದೇ ಕಾರ್ಯಗಳನ್ನು ಮಾಡಬೇಕು. ಗುರು ಸೇವೆಯಿಂದ ಮಾನಸಿಕ ನೆಮ್ಮದಿ ಸಾಧ್ಯ. ಸಮಾಜ ಬಾಂಧವರನ್ನು ಗುರುತಿಸಿ ಗೌರವಿಸುವ ಕಾರ್ಯ ನಮ್ಮಿಂದಾಗಬೇಕು ಎಂದರು. ಜಯಂತಿ ಕೋಟ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು. ಮೋಹಿನಿ ಪೂಜಾರಿ ಕಾಮೋಟೆ ವಂದಿಸಿದರು. ದಿಘಾದಿಂದ ಪನ್ವೇಲ್‌ವರೆಗಿನ ಸಮಾಜದ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ಪರಸ್ಪರ ಅರಸಿನ ಕುಂಕುಮ ಹಚ್ಚಿ ಶುಭ ಹಾರೈಸಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.