ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಉನ್ನತ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ 


Team Udayavani, Jan 19, 2019, 3:51 PM IST

99.jpg

ನವಿ ಮುಂಬಯಿ: ಶಿಕ್ಷಣ ರಂಗದಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಲು ಬಂಟ ಸಮಾಜವು ಪ್ರಾಮುಖ್ಯತೆ ನೀಡುತ್ತಿದ್ದು,  ಈ ನಿಟ್ಟಿನಲ್ಲಿ  ಬೋಂಬೆ ಬಂಟ್ಸ್‌ ಅಸೋ. ಇದರ ಉನ್ನತ ಶಿಕ್ಷಣ ಸಂಸ್ಥೆಯು ಶ್ರಮಿಸುತ್ತಿದೆ. ಇದರ ಪ್ರಯೋಜನವನ್ನು ಪರಿಸರದ ವಿದ್ಯಾರ್ಥಿಗಳು ಜಾತಿ, ಮತ, ಧರ್ಮವನ್ನು ಮರೆತು ಪಡೆದುಕೊಳ್ಳಬೇಕು. ಇಂದು  ನಾವು ನಿಷ್ಠೆ, ಶ್ರದ್ಧೆ, ಪರಿಶ್ರ ಮದಿಂದ ಪಡೆಯುವ ವಿದ್ಯೆಯು ನಮ್ಮ ಬದುಕಿಗೆ ದಾರಿದೀಪವಾಗಿರುತ್ತದೆ ಎಂಬುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಪ್ರಸಿದ್ಧ ಮಕ್ಕಳ ತಜ್ಞ ಡಾ| ಸತ್ಯಪ್ರಕಾಶ್‌ ಶೆಟ್ಟಿ ಅವರು ನುಡಿದರು.

ಜ. 12ರಂದು ಜೂಯಿನಗರದ ಬಂಟ್ಸ್‌ ಸೆಂಟ ರ್‌ನಲ್ಲಿ ನಡೆದ ಬೋಂಬೆ ಬಂಟ್ಸ್‌ ಅಸೋ. ಇದರ ಉನ್ನತ ಶಿಕ್ಷಣ ಸಂಸ್ಥೆಯ ಬಂಟ್ಸ್‌ ತರಂಗ-ದಿ ಯೂತ್‌ ವೇವ್‌ ವಾರ್ಷಿಕೋತ್ಸವ ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತ ನಾಡಿದ ಅವರು, ಎಲ್ಲಾ ಮಕ್ಕಳಲ್ಲೂ ವಿವಿಧ ಬಗೆಯ ಪ್ರತಿಭೆಗಳು ಅಡಕವಾಗಿರುತ್ತವೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅದು ಬೆಳೆಯಲು ಸಾಧ್ಯ. ಮಕ್ಕಳಲ್ಲಿರುವ ಅಭಿರುಚಿಯನ್ನು ಅರಿತು ಕೊಂಡು ಹೆತ್ತವರು ಅವರನ್ನು ಬೆಳೆಸಿದಾಗ ಆದರ್ಶ ಪ್ರಜೆಗಳಾಗುವುದರಲ್ಲಿ ಸಂಶಯವಿಲ್ಲ  ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬೋಂಬೆ ಬಂಟ್ಸ್‌ ಅಸೋ. ಅಧ್ಯಕ್ಷ ನ್ಯಾಯವಾದಿ ಸುಭಾಷ್‌ ಶೆಟ್ಟಿ ಅವರು ಮಾತನಾಡಿ, ನಮ್ಮ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ  ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನನುಕೂಲಗಳಾಗದಂತೆ ನೋಡಿಕೊಳ್ಳಲಾಗುತ್ತಿದೆ. ಮಕ್ಕಳು ಶಿಕ್ಷಣವನ್ನು ವಿವಿಧ ಸಮಸ್ಯೆಗಳಿಂದ ಅರ್ಧಕ್ಕೆ ಮೊಟಕುಗೊಳಿ ಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಸಂಸ್ಥೆಯ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಪಡೆದುಕೊಂಡು ಅಸೋ. ಮತ್ತು ಶಿಕ್ಷಣ ಸಂಸ್ಥೆಗೆ ಉತ್ತಮ ಹೆಸರು ತರುವಂತೆ ವಿನಂತಿಸಿ ಶುಭಹಾರೈಸಿದರು.

ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯ ವಾದಿ ರತ್ನಾಕರ ವಿ. ಶೆಟ್ಟಿ ಅವರು ಮಾತನಾಡಿ, ಬೋಂಬೆ ಬಂಟ್ಸ್‌ ಅಸೋ. ನಡೆಸುತ್ತಿರುವ ಶಿಕ್ಷಣ ಸಂಸ್ಥೆಯು ಇಂದು ಅಭಿವೃದ್ಧಿಯ ಪಥದತ್ತ ಸಾಗುತ್ತಿದ್ದು, ಗುಣಮಟ್ಟದ ಶಿಕ್ಷಣವನ್ನು ಧಾರೆ ಎರೆಯುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಮ್ಮಡಿಗೊಳ್ಳುತ್ತಿದ್ದು, ಸಂಸ್ಥೆಯ ಅಭಿವೃದ್ಧಿಯ ಧೊÂàತಕವಾಗಿದೆ. ಭವಿಷ್ಯದಲ್ಲೂ ಈ ಸಂಸ್ಥೆ ಯಿಂದ ಗುಣಮಟ್ಟದ ಶಿಕ್ಷಣಕ್ಕೆ ಮತ್ತಷ್ಟು ಒತ್ತು ನೀಡಿ ರಾಷ್ಟÅ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಸ್ಥೆಯನ್ನು ಬೆಳೆಸಲು ಮುಂದಾಗಲಿದ್ದೇವೆ. ಇದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದರು.

ಉನ್ನತ ಶಿಕ್ಷಣ ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಅಶೋಕ್‌ ಡಿ. ಶೆಟ್ಟಿ ಅವರು ಮಾತನಾಡಿ, ಬೋಂಬೆ ಬಂಟ್ಸ್‌ ಅಸೋ. ಶಿಕ್ಷಣ ಸಂಸ್ಥೆಯು ನವಿಮುಂಬಯಿಯಲ್ಲಿ ಇಂದು ಬಹಳಷ್ಟು ಹೆಸರನ್ನು ಪಡೆದಿದೆ. ಇಲ್ಲಿ ವೈವಿಧ್ಯಮಯ ಕೋರ್ಸ್‌ಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಆಕರ್ಷಿತರಾಗುತ್ತಿದ್ದಾರೆ. ಪ್ರತೀ ವರ್ಷ ಉತ್ತಮ ಫಲಿತಾಂಶವು ಬರುತ್ತಿದ್ದು, ಉತ್ತಮ ಶಿಕ್ಷಕವೃಂದವನ್ನು ಹೊಂದಲಾಗಿದೆ. ನಮ್ಮ ಈ ಶಿಕ್ಷಣ ಸೇವೆಗೆ ದಾನಿಗಳು, ಸಮಾಜ ಬಾಂಧವರ ಪ್ರೋತ್ಸಾಹ ಸದಾಯಿರಲಿ ಎಂದು ನುಡಿದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಬೋಂಬೆ ಬಂಟ್ಸ್‌ ಅಸೋ. ಉಪಾಧ್ಯಕ್ಷ ಮುರಳಿ ಕೆ. ಶೆಟ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮದಿಂದ ಶಿಕ್ಷಣವನ್ನು ಪಡೆದು ಅದರೊಂದಿಗೆ ಸುಸಂಸ್ಕೃತರಾಗಿ ಬೆಳೆಯಬೇಕು ಎಂದು ನುಡಿದರು. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಡಾ| ರಶ್ಮಿ ಡಿ. ಚಿತ್ಲಾಂಗ ಅವರು ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವರಿಸಿ ವಾರ್ಷಿಕ ವರದಿ ವಾಚಿಸಿದರು. ವೇದಿಕೆಯಲ್ಲಿ ಬೋಂಬೆ ಬಂಟ್ಸ್‌ ಅಸೋ. ಕೋಶಾಧಿಕಾರಿ ಸಿಎ ವಿಶ್ವನಾಥ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಶ್ರೀಧರ ಕೆ. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋ. ಯುವ ವಿಭಾಗದ ಕಾರ್ಯಾಧ್ಯಕ್ಷ ಚರಣ್‌ ಆರ್‌. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧಕ್ಷೆ ಶಾರದಾ ಎಸ್‌. ಶೆಟ್ಟಿ ಅವರು ಉಪಸ್ಥಿತರಿದ್ದರು.

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಿಕ್ಷಣ ಸಂಸ್ಥೆಯ ವಾರ್ಷಿಕ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಗಣ್ಯರು ಬಹುಮಾನ ವಿತರಿಸಿದರು. ಅಲ್ಲದೆ ಪ್ರತಿ ಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿ ತು. ಅತಿಥಿ-ಗಣ್ಯರುಗಳನ್ನು ಸಂಸ್ಥೆಯ ವತಿಯಿಂದ ಸತ್ಕರಿಸಲಾಯಿತು.

ಶಿಕ್ಷಣ ಸಂಸ್ಥೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಶಿಕ್ಷಕೇತರ ಸಿಬಂದಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಬೋಂಬೆ ಬಂಟ್ಸ್‌ ಅಸೋ. ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಉನ್ನತ ಶಿಕ್ಷಣ ಸಮಿತಿಯ ಪದಾಧಿಕಾರಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.