ಬೊರಿವಲಿ ಮಹಿಷಮರ್ದಿನಿ ದೇಗುಲ: ಉತ್ಸವ
Team Udayavani, Jun 5, 2018, 11:21 AM IST
ಮುಂಬಯಿ: ಬೊರಿವಲಿ ಪಶ್ಚಿಮದ ಜೈರಾಜ್ ನಗರದ ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಇದರ 28ನೇ ವಾರ್ಷಿಕ ಮಹೋತ್ಸವವು ಮೇ 30 ರಂದು ಪ್ರಾರಂಭಗೊಂಡು ಜೂ. 3 ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.
ಜೂ. 3 ರಂದು ಶ್ರೀ ಕ್ಷೇತ್ರದ ಸ್ಥಾಪಕ ಮೊಕ್ತೇಸರ ವಂಶಸ್ಥರಾದ ಜಯರಾಜ ಶ್ರೀಧರ ಶೆಟ್ಟಿ ಕಲ್ಲಮುಂಡ್ಕೂರು ಹರಿಯಾಳಗುತ್ತು, ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ. ಶೆಟ್ಟಿ, ಮೊಕ್ತೇಸರ ಜಯಪಾಲಿ ಅಶೋಕ್ ಶೆಟ್ಟಿ ದಂಪತಿಗಳ ನೇತೃತ್ವದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದ ಕುಮಾರ ತಂತ್ರಿ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ ಧಾರ್ಮಿಕ ಕಾರ್ಯಕ್ರಮವಾಗಿ ಕವಾಟೋದ್ಘಾಟನೆ, ಪಂಚಾಮೃತ ಅಭಿಷೇಕ, ಪ್ರಸನ್ನ ಪೂಜೆ, ತುಲಾಭಾರ ಸೇವೆ, ಶ್ರೀ ಮಹಿಷಮರ್ದಿನಿ ಭಜನ ಮಂಡಳಿಯವರಿಂದ ಭಜನೆ, ಅಪರಾಹ್ನ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು. ಸಂಜೆ ಯಾತ್ರಾ ಹೋಮ, ಉತ್ಸವ ಬಲಿ, ಪಲ್ಲಕಿ ಉತ್ಸವ, ವಿಶೇಷ ಉತ್ಸವವು ವಿಜೃಂಭಣೆಯ ಮೆರವಣಿಗೆಯ ಮೂಲಕ ಅವಭೃಥ ಯಾತ್ರಾ ಮಹೋತ್ಸವ, ಧರ್ಮದೈವ ಕೊಡಮಣಿತ್ತಾಯ ದರ್ಶನದೊಂದಿಗೆ ದೇವರ ಭೇಟಿ, ಹರಿವಾಣ ಕಾಣಿಕೆ, ಕಟ್ಟೆಪೂಜೆ ನೆರವೇರಿತು.
ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿ, ಆರ್ಚಕ ವೃಂದ, ಶ್ರೀ ಮಹಿಷಮರ್ದಿನಿ ಭಜನ ಮಂಡಳಿ, ಪರಿಸರದ ಭಕ್ತಾದಿಗಳು, ಹಿತೈಷಿಗಳು, ರಾಜಕೀಯ ನೇತಾರರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ದಾನಿಗಳು, ಅಸಂಖ್ಯಾತ ಭಕ್ತಾದಿಗಳು ಉತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಶ್ರೀ ಕ್ಷೇತ್ರದಲ್ಲಿ ಮೇ 31 ರಂದು ಬೆಳಗ್ಗೆ 6 ರಿಂದ ದೀಪಬಲಿ, ಮಹಾಪೂಜೆ, ಸಂಜೆ 6 ರಿಂದ ಕೃಷ್ಣ ಕಲಾ ಡಾನ್ಸ್ ಅಕಾಡೆಮಿ ದಹಿಸರ್ ಇವರಿಂದ ಭರತನಾಟ್ಯ, ಸಂಜೆ 7 ರಿಂದ ಉತ್ಸವ ಬಲಿ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ನಿತ್ಯ ಬಲಿ ನಡೆಯಿತು. ಜೂ. 1 ರಂದು ಬೆಳಗ್ಗೆ 6 ರಿಂದ ದೀಪ ಬಲಿ, ಮಹಾಪೂಜೆ, ಬೆಳಗ್ಗೆ 9.30 ರಿಂದ ಚಂಡಿಕಾ ಹೋಮ, ಅನ್ನಸಂತರ್ಪಣೆ, ರಾತ್ರಿ 7 ರಿಂದ ಉತ್ಸವ ಬಲಿ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ 9.30 ರಿಂದ ಸಾರ್ವಜನಿಕ ಮಹಾ ರಂಗಪೂಜೆ, ಪ್ರಸಾದ ವಿತರಣೆ ನೆರವೇರಿತು.
ಜೂ. 2 ರಂದು ಮುಂಜಾನೆ 6 ರಿಂದ ದೀಪ ಬಲಿ, ಮಹಾಪೂಜೆ, ಬೆಳಗ್ಗೆ 9.30 ರಿಂದ ವಾಯುಸ್ತುತಿಪುರಶ್ಚರಣೆ ಹೋಮ, ಮಹಾಪೂಜೆ, ನಿತ್ಯಬಲಿ, ಸಂಜೆ 5.30 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7 ರಿಂದ ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ 9.30 ರಿಂದ ಮಹಾಭೂತ ಬಲಿ, ಶಯ್ನಾಕಲ್ವನಂ ಕವಾಟ ಬಂಧನ ಜರಗಿತು.
ಉಪನಗರ ಬೊರಿವಲಿ ಪರಿಸರದಲ್ಲಿ ಆಧ್ಯಾತ್ಮಿಕ, ಧಾರ್ಮಿಕ, ಸಂಸ್ಕಾರ, ಸಂಸ್ಕೃತಿಯನ್ನು ಬಿಂಬಿಸುವ ಶ್ರೀ ಮಹಿಷಾಮರ್ದಿನಿ ದೇವಸ್ಥಾನವು ತವರೂರ ಜನತೆಯ ಪೂಜೆ, ಪುನಸ್ಕಾರಗಳ ತಾಣವಾಗಿದೆ. ಪ್ರತಿನಿತ್ಯ ಯಜ್ಞ ಯಾಗಾಧಿಗಳು, ವಿವಾಹ ಮೊದಲಾದ ಶುಭ ಮಂಗಳ ಕಾರ್ಯಕ್ರಮಗಳು ನಡೆಯುತ್ತಿವೆ. ಶ್ರೀ ಮಹಾಗಣಪತಿ ಮತ್ತು ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ, ವಂಶಸ್ಥರು ನಂಬಿಕೊಂಡು ಬಂದಿರುವ ಕೊಡಮಣಿತ್ತಾಯ ದೈವದ ಆರಾಧನೆ ಇಲ್ಲಿ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿರುವುದು ವಿಶೇಷತೆಯಾಗಿದೆ. ಉಡುಪಿ ಪರ್ಯಾಯ ಶ್ರೀಗಳು, ಒಡಿಯೂರು ಶ್ರೀಗಳು, ಅನೇಕ ಗಣ್ಯರು ದೇವಸಾœನಕ್ಕೆ ಭೇಟಿ ನೀಡಿ ಕಾರಣಿಕ ಕ್ಷೇತ್ರವೆಂದು ಬಣ್ಣಿಸಿರುವುದು ಶ್ರೀಕ್ಷೇತ್ರದ ಹೆಗ್ಗಳಿಕೆಯಾಗಿದೆ.
ಚಿತ್ರ-ವರದಿ : ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.