ಬೊರಿವಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ  ತಾಳಮದ್ದಳೆ, ಸಮ್ಮಾನ 


Team Udayavani, Jul 15, 2017, 4:22 PM IST

14-Mum05b.jpg

ಮುಂಬಯಿ: ಒಲಿದ ಕಲೆಯನ್ನು ಸಮರ್ಥವಾಗಿ ಬೆಳೆಸುವುದು ಕಲೆಯೇ ಆಗಿದೆ. ಲಯ, ಜ್ಞಾನ, ಸಾಹಿತ್ಯ ಇಂಪಾದ ಕಂಠ, ಸ್ವರದಲ್ಲಿನ ಏರಿಳಿತಗಳ ಮೂಲಕ ಯಕ್ಷಗಾನ ಕ್ಷೇತ್ರದ ಭಾಗವತಿಕೆಯಲ್ಲಿ ಮಿಂಚುವ ಅಪರೂಪದ ತಾರೆ ಕಾವ್ಯಶ್ರೀ ಅಜೇರು. ರಾಗಗಳ ಆರೋಹಣ, ಅವರೋಹಣ, ಸಂಗೀತ ಶಾಸ್ತÅದ ಜ್ಞಾನದ ತಾಳ, ಒಂದೇ ತಾಳದಲ್ಲಿ ವಿವಿಧ ಮಟ್ಟುಗಳು ಹಾಗೂ ಪದ್ಯಗಳಲ್ಲಿನ ನಡೆ ಬದಲಾವಣೆ ಅವರ ವೈಶಿಷ್ಟÂವಾಗಿದೆ. ವಾಟ್ಸಾಪ್‌, ಫೇಸ್‌ಬುಕ್‌ ತಂತ್ರಜ್ಞಾನಗಳ ಇಂದಿನ ಯುಗದಲ್ಲಿ ಯಕ್ಷಗಾನ ಸಂಪ್ರದಾಯಬದ್ಧ ಹಾಡುಗಾರಿಕೆಯಲ್ಲಿ ಅವರು ಪ್ರಗತಿ ಸಾಧಿಸುತ್ತಿರುವುದು ಪುರಾತನ ಸಂಸ್ಕೃತಿಗೆ ಸಂದ ಗೌರವ ಎಂದು ಬೊರಿವಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರದೀಪ್‌ ಸಿ. ಶೆಟ್ಟಿ ಅವರು ಅಭಿಪ್ರಾಯಿಸಿದರು.

ಜು. 13 ರಂದು ಬೊರಿವಲಿ ಪೂರ್ವದ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿರುವ ಮುಂಬಯಿ ಅಜೆಕಾರು ಕಲಾಭಿಮಾನಿ ಬಳಗದ ತವರೂರ ತಂಡದ ಯಕ್ಷಗಾನ ತಾಳಮದ್ದಳೆ, ಸಮ್ಮಾನ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿವಿಧ ಕಲಾಪ್ರಕಾರಗಳಲ್ಲಿ ಪ್ರಾವೀಣ್ಯತೆ ಪಡೆದ ಕಲಾವಿದರು ಅದರ ಗುಣಮಮಟ್ಟ ಮತ್ತು ಮೌಲ್ಯತೆಯನ್ನು ಕಾಪಾಡಬೇಕು. ತಾನು ಬೆಳೆಯುತ್ತಿರುವಂತೆ ಇನ್ನೊಬ್ಬರ ಬೆಳವಣಿಗೆಗೆ ಶ್ರಮಿಸಬೇಕು. ಕಲಾವಿದರಲ್ಲಿ ಹೊಂದಾಣಿಕೆ, ಕೊಂಡುಕೊಳ್ಳುವಿಕೆ ಅತೀ ಮುಖ್ಯವಾಗಿರಬೇಕು ಎಂದು ಹೇಳಿದರು.

ದೇವಸ್ಥಾನದ ಪ್ರಬಂಧಕ ವೆಂಕಟರಮಣ ತಂತ್ರಿ ಅವರು ಮಾತನಾಡಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ನಮ್ಮ ಮೂಲ ಸಂಸ್ಕೃತಿಯನ್ನು ಅಜೆಕಾರು ಕಲಾಭಿಮಾನಿ ಬಳಗ ಉಳಿಸಲು ಬಹಳಷ್ಟು ಶ್ರಮಿಸುತ್ತಿದೆ. ಅವರ ಪ್ರತಿಯೊಂದು ಯೋಜನೆಗಳು ಸಾಕಾರಗೊಳ್ಳಲಿ. ಭಾಗವತಿಕೆಯ ಯುವ ಪ್ರತಿಭೆ ಕಾವ್ಯಶ್ರೀ ಅಜೇರು ಅವರ ಸುಶ್ರಾವ್ಯ ಹಾಡುಗಾರಿಕೆ ಯಕ್ಷಗಾನದ ಶ್ರೇಷ್ಠತೆಯನ್ನು ಹೆಚ್ಚಿಸಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಾಯೋಜಕರಾದ ಕಮಲಾಕ್ಷ ಕಾಮತ್‌ ದಂಪತಿ, ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಉದ್ಯಮಿಗಳಾದ ಶಿವರಾಮ ಶೆಟ್ಟಿ ದಂಪತಿ, ರವೀಂದ್ರ ಶೆಟ್ಟಿ, ಸದಾಶಿವ ಶೆಟ್ಟಿ, ಪೇಟೆಮನೆ ಪ್ರಕಾಶ್‌ ಶೆಟ್ಟಿ, ಅಜೆಕಾರು ಬಾಲಕೃಷ್ಣ ಶೆಟ್ಟಿ, ಸಿಎ ಶ್ರೀನಿವಾಸ ಪುತ್ರನ್‌ ಹಾಗೂ ಯುವ ಪ್ರತಿಭೆ ಕಾವ್ಯಶ್ರೀ ಅವರನ್ನು ದೇವಸ್ಥಾನದ ಮೊಕ್ತೇಸರ ಜಯರಾಜ್‌ ಸಿ. ಶೆಟ್ಟಿ, ಆಡಳಿತ ಮೊಕ್ತೇಸರ ಪ್ರದೀಪ್‌ ಸಿ. ಶೆಟ್ಟಿ, ಪ್ರಬಂಧಕ ವೆಂಕಟರಮಣ ತಂತ್ರಿ ಅವರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಿದರು.

ಯಕ್ಷಗಾನ ಕಲಾವಿದ ವೇಣುಗೋಪಾಲ್‌ ಭಟ್‌ ಶೇಣಿ ಅವರು ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ನಡೆದ ಶ್ರೀಕೃಷ್ಣ ರಾಯಭಾಯ ತಾಳಮದ್ದಳೆಯಲ್ಲಿ ಭಾಗವತಿಕೆಯಲ್ಲಿ  ಕಾವ್ಯಶ್ರೀ     ಅಜೇರು, ಮದ್ದಳೆ ಯಲ್ಲಿ ಪ್ರಶಾಂತ್‌ ಶೆಟ್ಟಿ ವಗೆನಾಡು, ಚೆಂಡೆಯಲ್ಲಿ ಶ್ರೀಪತಿ ನಾಯಕ್‌ ಅಜೇರು, ಅರ್ಥದಾರಿಗಳಾಗಿ ಪೆರ್ಮುದೆ ಜಯಪ್ರಕಾಶ್‌ ಶೆಟ್ಟಿ, ದಿನೇಶ್‌ ಶೆಟ್ಟಿ ಕಾವಳಕಟ್ಟೆ, ಹರೀಶ್‌ ಬೊಳಂತಮೊಗರು, ಶ್ಯಾಮ್‌ ಭಟ್‌ ಶೇಣಿ, ವೇಣುಗೋಪಾಲ್‌ ಭಟ್‌ ಅವರು ಸಹಕರಿಸಿದರು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 

  ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

7(1

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.