ಬಿಲ್ಲವ ಭವನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತ್ಯುತ್ಸವ
ಬಿಲ್ಲವರ ಅಸೋಸಿಯೇಶನ್ ಮುಂಬಯಿ
Team Udayavani, Aug 24, 2021, 2:24 PM IST
ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತಿ ಆಚರಣೆಯು ಆ. 23ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ. 23ರಂದು ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದಲ್ಲಿ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಯಿಂದ ಗಣಪತಿ ಹೋಮ, ನವಕ ಪ್ರಧಾನ ಕಲಶಾಭಿಷೇಕ, ಓಂ ನಮೋ ನಾರಾಯಣಾಯಃ ಜಪಯಜ್ಞ, ಭಜನೆ, ಮಹಾಪೂಜೆ, ಮಂಗಳಾರತಿ ಇನ್ನಿತರ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು.
ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜಿ. ಅಮೀನ್ ಅಧ್ಯಕ್ಷತೆಯಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್‌ನ ಕಾರ್ಯಧ್ಯಕ್ಷ ಯು. ಎಸ್. ಪೂಜಾರಿ, ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ತೀಯಾ ಸಮಾಜ ಮುಂಬಯಿ ಇದರ ಮಾಜಿ ಅಧ್ಯಕ್ಷ ಚಂದ್ರಶೇಖರ ಬೆಳ್ಚಡ, ಹಿರಿಯ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ ಉಪಸ್ಥಿತರಿದ್ದರು.
ಇದನ್ನೂ ಓದಿ:ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ
ಸಾಧಕರಿಗೆ ಸಮ್ಮಾನ
ಇದೇ ಸಂದರ್ಭದಲ್ಲಿ ನವಿಮುಂಬಯಿ ಸಮಾಜ ಸೇವಕ ಡಾ| ಹರೀಶ್ ಎಸ್. ಪೂಜಾರಿ ಹಾಗೂ ಬಿಲ್ಲವರ ಅಸೋಸಿಯೇಶನ್ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್ ಜಿ. ಪೂಜಾರಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು.
ಬಿಲ್ಲವ ಅಸೋಸಿಯೇಶನ್ ಉಪಾಧ್ಯಕ್ಷರಾದ ಶಂಕರ ಡಿ. ಪೂಜಾರಿ, ದಯಾನಂದ್ ಆರ್. ಪೂಜಾರಿ, ಶ್ರೀನಿವಾಸ್ ಆರ್. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿ ಧನಂಜಯ ಎಸ್. ಶಾಂತಿ, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್ ಜಿ. ಪೂಜಾರಿ, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯ ಗೌರವ ಕಾರ್ಯದರ್ಶಿ ಕೇಶವ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಧಾರ್ಮಿಕ ಪೂಜಾ ವಿಧಿ ವಿಧಾನಗಳನ್ನು ಧನಂಜಯ ಶಾಂತಿ, ಶೇಖರ ಶಾಂತಿ ಮತ್ತಿತರರು ನೆರವೇರಿಸಿದರು.
ಅಸೋಸಿಯೇಶನ್‌ನ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗ ಇನ್ನಿತರ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಪ್ರಾದೇಶಿಕ, ಸ್ಥಳೀಯ ಕಚೇರಿಗಳ ಪ್ರತಿನಿಧಿಗಳು, ಭಾರತ್ ಬ್ಯಾಂಕ್‌ನ ನಿರ್ದೇಶಕರು, ಇತರ ಅಧಿಕಾರಿಗಳು, ಸದಸ್ಯ ಬಾಂಧವರು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಗುರುದೇವರ ಅನುಗ್ರಹಕ್ಕೆ ಪಾತ್ರರಾದರು.
ಚಿತ್ರ-ವರದಿ: ಸುಭಾಷ್ ಶಿರಿಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.