ಬಿಎಸ್‌ಕೆಬಿ ಅಸೋಸಿಯೇಶನ್ ಗೋಕುಲದಿಂದ ಸಂಕ್ರಾಂತಿ ಸಂಭ್ರಮ
Team Udayavani, Jan 17, 2018, 2:29 PM IST
ಮುಂಬಯಿ: ಬಿಎಸ್‌ಕೆಬಿ ಅಸೋಸಿಯೇಶನ್ ಮುಂಬಯಿ ಗೋಕುಲ ಮತ್ತು ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜ. 14 ರಂದು ಅಂಧೇರಿ ಪಶ್ಚಿಮದ ಇರ್ಲಾದ ಶ್ರೀ ಅದಮಾರು ಮಠದಲ್ಲಿ ಮಕರ ಸಂಕ್ರಾಂತಿ ಸಂಭ್ರಮವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು. ಆಚರಿಸಿತು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಸಹನಾ ಭಾರದ್ವಾಜ್ ಬಳಗದಿಂದ ನೃತ್ಯಾರ್ಪಣೆ ಹಾಗೂ ಅಸೋಸಿಯೇಶನ್‌ನ ಸದಸ್ಯೆಯರು ಸಂಕ್ರಾಂತಿ ನೃತ್ಯಗಳನ್ನು ಪ್ರದರ್ಶಿಸಿ ಮನರಂಜನೆ ನೀಡಿದರು. ಸೇರಿದ್ದ ನೂರಾರು ಮಹಿಳೆಯರು ಬಳೆ, ಅಡಿಕೆ-ವೀಳ್ಯದೆಲೆ, ಎಳ್ಳುಂಡೆ ನೀಡಿ ಪರಸ್ಪರ ಹಣೆಗೆ ಅರಸಿನ ಕುಂಕುಮವನ್ನು ಹಚ್ಚಿಕೊಂಡು ಅರಸಿನ ಕುಂಕುಮ ಕಾರ್ಯಕ್ರಮ ನಡೆಸಿಕೊಟ್ಟರು. ಬಿಎಸ್‌ಕೆಬಿಎ ಅಧ್ಯಕ್ಷ ಡಾ| ಸುರೇಶ್ ಎಸ್. ರಾವ್ ಕಟೀಲು ಮತ್ತು ಉಭಯ ಸಂಸ್ಥೆಗಳ ಪದಾಧಿಕಾರಿಗಳ ಸಾರಥ್ಯದಲ್ಲಿ ನಡೆಸಲ್ಪಟ್ಟ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗಧ್ಯಕ್ಷೆ ಐ. ಕೆ. ಪ್ರೇಮಾ ಎಸ್. ರಾವ್ ಕಾರ್ಯಕ್ರಮ ನಿರೂಪಿಸಿದರು. ಆಶಾ ಎಚ್. ಭಟ್ ಮತ್ತು ಡಾ| ಸಹನಾ ಎ. ಪೋತಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಪಿ. ಸಿ. ಎನ್. ರಾವ್ ವಂದಿಸಿದರು.
ಚಿತ್ರ-ವರದಿ:ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.