ಬಂಟರ ಸಂಘ ಕುರ್ಲಾ-ಭಾಂಡೂಪ್ : ವೈದ್ಯಕೀಯ ಶಿಬಿರ
Team Udayavani, Jul 4, 2019, 4:25 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯು ಆರಂಭದಿಂದಲೇ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಸಮಾಜ ಬಾಂಧವರ ಪ್ರೀತಿಗೆ ಪಾತ್ರವಾಗಿದೆ. ಪ್ರಸ್ತುತ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ಸಮಿತಿಯ ಪದಾಧಿಕಾರಿಗಳ ಸಹಕಾರದೊಂದಿಗೆ ಉಚಿತ ಕ್ಯಾನ್ಸರ್ ತಪಾಸಣೆ, ಚರ್ಮ ರೋಗ, ಕಣ್ಣು, ಕೂದಲು ಉದುರುವಿಕೆ ಇತ್ಯಾದಿ ಸ್ತ್ರೀ ಸಂಬಂಧಿ ರೋಗಗಳ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು ಸ್ತುತ್ಯರ್ಹ. ಕ್ಯಾನ್ಸರ್ ಇನ್ನಿತರ ರೋಗಗಳ ಬಗ್ಗೆ ತಪಾಸಣೆ ನಡೆಸುವುದಕ್ಕೆ ಸ್ತ್ರೀಯರು ನಿರ್ಲಕ್ಷÂ ವಹಿಸುತ್ತಾರೆ. ಆದರೆ ಇಂತಹ ಬೇಜವಾಬ್ದಾರಿ ಎಂದಿಗೂ ಮಾಡದೆ ಸಂಶಯವಿದ್ದಲ್ಲಿ ನಿಯಮಿತವಾಗಿ ತಜ್ಞ ವೈದ್ಯರ ಬಳಿ ತೆರಳಿ ಸಂಕೋಚಪಡದೆ ತಪಾಸಣೆಗೈದು ಸೂಕ್ತ ಚಿಕಿತ್ಸೆ ಮಾಡಿಸಿಕೊಳ್ಳಬೇಕು. ಕ್ಯಾನ್ಸರ್‌ನಂತಹ ಮಾರಣಾಂತಿಕ ರೋಗಗಳ ಬಗ್ಗೆ ನಿರ್ಲಕ್ಷÂ ಸಲ್ಲದು. ಇದರ ಮುಂಜಾಗ್ರತೆ ಅತ್ಯಗತ್ಯವಾಗಿದೆ ಎಂದು ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್. ಹೆಗ್ಡೆ ನುಡಿದರು.
ಜೂ. 30 ರಂದು ವಿಕ್ರೋಲಿ ಪೂರ್ವದ ವಿಕೇಸ್ ಇಂಗ್ಲಿಷ್ ಹೈಸ್ಕೂಲ್ ಸಭಾಗೃಹದಲ್ಲಿ ಬಂಟರ ಸಂಘ ಮುಂಬಯಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕ್ಯಾನ್ಸರ್ ಮತ್ತು ಸ್ತ್ರೀ ಸಂಬಂಧಿ ರೋಗಗಳ ಬಗ್ಗೆ ಜಾಗೃತಿ ಹಾಗೂ ಮಾಹಿತಿ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಳೀಯ ಸಮಿತಿಯ ಕಾರ್ಯವೈಖರಿಯನ್ನು ಅಭಿನಂದಿಸಿದರು.
ಪ್ರಾರಂಭದಲ್ಲಿ ಬಂಟರ ಸಂಘ ಮುಂಬಯಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಇಂದಿನ ವೈಜ್ಞಾನಿಕ ಯುಗದಲ್ಲಿ ನೆಮ್ಮದಿಯ ಜೀವನ ನಡೆಸಬೇಕಾದರೆ, ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮಾತ್ರವಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಗಮನ ನೀಡಬೇಕು. ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ನಾವು ಕೇವಲ ಅನಾರೋಗ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ತೆರಳಿ ತಪಾಸಣೆಯೊಂದಿಗೆ ಚಿಕಿತ್ಸೆ ಮಾಡುವ ಬದಲು ಸಮಯ ಸಮಯಕ್ಕೆ ಸರಿಯಾಗಿ ಸ್ತ್ರೀ ಸಂಬಂಧಿ ರೋಗಗಳ ಬಗ್ಗೆ ತಜ್ಞ ವೈದ್ಯರ ಬಳಿ ತೆರಳಿ ತಪಾಸಣೆಗೈದು ಮಾಹಿತಿ ಪಡೆಯಬೇಕು. ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಇಂತಹ ಶಿಬಿರವನ್ನು ಆಯೋಜಿಸಿದ್ದೇವೆ. ಸಮಿತಿಯ ಸರ್ವರ ಸಹಕಾರ, ಪ್ರೋತ್ಸಾಹದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸ್ಫೂರ್ತಿಯಾಗುತ್ತದೆ. ಸಮಾಜ ಬಾಂಧವರೆಲ್ಲರೂ ಇದರ ಸದುಪಯೋಗವನ್ನು ಪಡೆಯಬೇಕು ಎಂದರು.
ಕಾರ್ಯಕ್ರಮವು ವಿಕ್ರೋಲಿ ಪಶ್ಚಿಮ ಕೈಲಾಸ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 25 ವರ್ಷಗಳಿಂದ ಜನಪರ ಕಾರ್ಯಗಳ ಮುಖೇನ ಜನಮನ್ನಣೆ ಪಡೆದಿರುವ ವಸಂತ ಮೆಮೋರಿಯಲ್ ಟ್ರಸ್ಟ್ ಆಶ್ರಯದಲ್ಲಿ ಟ್ರಸ್ಟ್‌ನ ಸಂಚಾಲಕಿ ಜಯಲಕ್ಷ್ಮೀ ಕೃಷ್ಣನ್ ಇವರು ವಿವಿಧ ರೋಗಗಳ ಬಗ್ಗೆ ನ್ಯೂನತೆ ಮತ್ತು ಚಿಕಿತ್ಸೆಯ ವಿಧಾನಗಳನ್ನು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಸಿದ್ಧ ವೈದ್ಯೆ ಡಾ| ಗೀತಾಂಜಲಿ ಅಮೀನ್ ಅವರು ಕ್ಯಾನ್ಸರ್ ಇನ್ನಿತರ ರೋಗಗಳ ಬಗ್ಗೆ ವಿಶೇಷ ಮಾಹಿತಿ ಮತ್ತು ಚಿಕಿತ್ಸೆಗಳ ಬಗ್ಗೆ ಉಪನ್ಯಾಸ ನೀಡಿದರು. ಚರ್ಮ, ಕಣ್ಣು, ಕೂದಲು ಉದುರುವಿಕೆ ಮತ್ತು ಕ್ಯಾನ್ಸರ್ ಜಾಗೃತಿ ಶಿಬಿರದಲ್ಲಿ ಡಾ| ವರ್ದಿತ್ ಹೆಗ್ಡೆ, ಡಾ| ಸೌಮ್ಯಾ ವರ್ದಿತ್ ಹೆಗ್ಡೆ, ಡಾ| ಪೂಜಾ ಹೆಗ್ಡೆ, ಡಾ| ಪಲ್ಲವಿ ಶೆಟ್ಟಿ, ಡಾ| ಗೀತಾಂಜಲಿ ಅಮೀನ್, ಡಾ| ಪ್ರಜಕ್ತಾ ರಾವ್ ಮೊದಲಾದವರು ಸಹಕರಿಸಿದರು.
ವೇದಿಕೆಯಲ್ಲಿ ಬಂಟರ ಸಂಘ ಮಹಿಳಾ ವಿಭಾಗದ ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ, ಬಂಟರ ಸಂಘ ಮುಂಬಯಿ ಕುರ್ಲಾ-ಭಾಂಡೂಪ್ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಸಂಗೀತಾ ಸಿ. ಶೆಟ್ಟಿ, ಸೇರಿದಂತೆ ಪದಾಧಿಕಾರಿಳಾದ ಅಮೃತಾ ಶೆಟ್ಟಿ, ಡಾ| ಪಲ್ಲವಿ ಶೆಟ್ಟಿ, ವೀಣಾ ಶೆಟ್ಟಿ, ಸರೋಜಿನಿ ಶೆಟ್ಟಿ, ವಿಜೇಂದ್ರ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೆಳ್ಳಂಪಳ್ಳಿ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಸರೋಜಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ತಾರಾನಾಥ ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಕೃಷಿ¡ ಎಂ. ಶೆಟ್ಟಿ, ಭರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉದಯ್ ಶೆಟ್ಟಿ ಪೇಜಾವರ, ನವೀನ್ ಶೆಟ್ಟಿ ಇನ್ನಬಾಳಿಕೆ, ಸೀತಾರಾಮ್ ಶೆಟ್ಟಿ, ಹರೀಶ್ ಶೆಟ್ಟಿ, ಪ್ರವೀಣ್ ಕೆ. ಶೆಟ್ಟಿ, ಶರಣ್ ಯು. ಶೆಟ್ಟಿ, ಕುಸುಮಾ ಚಂದ್ರಶೇಖರ್ ಪಾಲೆತ್ತಾಡಿ, ವಿನುತಾ ಶೆಟ್ಟಿ, ಮಲ್ಲಿಕಾ ಶೆಟ್ಟಿ, ಜ್ಯೋತಿ ಶೆಟ್ಟಿ, ಸರಿತಾ ಶೆಟ್ಟಿ, ಯಶೋದಾ ಶೆಟ್ಟಿ, ಶಾಂತಾ ಎನ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು. ರಂಗನಿರ್ದೇಶಕ ನಾರಾಯಣ ಶೆಟ್ಟಿ ನಂದಳಿಕೆ ನಿರ್ವಹಿಸಿದರು. ಸಂಗೀತಾ ಎ. ಶೆಟ್ಟಿ ವಂದಿಸಿದರು.
ವಿಕ್ರೋಲಿ ಪರಿಸರದ ನಮ್ಮ ಸಂಘದಲ್ಲಿ ತುಳು-ಕನ್ನಡಿಗರಿಗಾಗಿ ಉತ್ತಮ ಕಾರ್ಯಗಳು ನಿರಂತರ ನಡೆಯುತ್ತಿರಲಿ. ನಮ್ಮ ಸಹಕಾರ, ಪ್ರೋತ್ಸಾಹ ಸದಾಯಿರಲಿ. ರೋಗಮುಕ್ತ ಆರೋಗ್ಯವಂತ ಸಮಾಜ ನಮ್ಮದಾಗಲಿ. ನಾಗರಿಕರಿಗೆ ರಕ್ಷಣೆ ನೀಡುವುದು ದೇಶ ಆಳುವವರ ಕರ್ತವ್ಯವೂ ಹೌದು. ಮಹಿಳೆಯರು ಆರೋಗ್ಯದೆಡೆಗೆ ಹೆಚ್ಚಿನ ಗಮನ ಹರಿಸಬೇಕು. ಸಂಸ್ಕೃತಿ-ಸಂಸ್ಕಾರಗಳ ಉಳಿವಿನೊಂದಿಗೆ ಮಹಿಳೆಯರು ಕುಟುಂಬ ಸದಸ್ಯರ ಆರೋಗ್ಯದೊಂದಿಗೆ ತಮ್ಮ ಆರೋಗ್ಯ ಕಾಪಾಡುವತ್ತ ಮುಂದಾಗಬೇಕು
– ಶ್ಯಾಮ್‌ಸುಂದರ್ ಶೆಟ್ಟಿ (ಅಧ್ಯಕ್ಷರು: ವಿಕ್ರೋಲಿ ಕನ್ನಡ ಸಂಘ).
ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಾಜಪರ ಉತ್ತಮ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿಯೊಂದು ಕಾರ್ಯಕ್ರಮಕ್ಕೂ ಎಲ್ಲರ ಸಹಕಾರ ಅಗತ್ಯ. ಪ್ರತಿಯೊಬ್ಬರೂ ತಮ್ಮಲ್ಲಿ ಯಾವುದೇ ಕಾಯಿಲೆಗಳ ಮುನ್ಸೂಚನೆ ಕಂಡು ಬಂದಲ್ಲಿ ಅದನ್ನು ನಿರ್ಲಕ್ಷಿಸದೆ ಕೂಡಲೇ ಸಂಬಂಧಿತ ತಜ್ಞ ವೈದ್ಯರನ್ನು ಭೇಟಿಯಾಗಿ ಚಿಕಿತ್ಸೆ ಪಡೆಯಬೇಕು
– ಸಿಎ ವಿಶ್ವನಾಥ ಶೆಟ್ಟಿ (ಕಾರ್ಯಾಧ್ಯಕ್ಷರು: ಬಂಟರ ಸಂಘ ಕುರ್ಲಾ-ಭಾಂಡೂಪ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.