ಬಂಟರ ಸಂಘ ಮುಂಬಯಿ ಇದರ 89 ನೇ ವಾರ್ಷಿಕ ಮಹಾಸಭೆ
Team Udayavani, Oct 31, 2017, 4:32 PM IST
ಮುಂಬಯಿ: ನಗರದ ಪ್ರತಿಷ್ಠಿತ ಸಂಘ- ಸಂಸ್ಥೆಗಳಲ್ಲಿ ಒಂದಾದ ಬಂಟರ ಸಂಘ ಮುಂಬಯಿ ಇದರ 89ನೇ ವಾರ್ಷಿಕ ಮಹಾಸಭೆ ಅ. 30ರಂದು ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿತು.
ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರು ದೀಪಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಲಾಯಿತು. ಸಂಘದ ಉಪಾಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ, ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಜಯರಾಮ ಎನ್. ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್ ವಿ. ಶೆಟ್ಟಿ ಅವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಘದ ನೂತನ ಅಧ್ಯಕ್ಷರನ್ನಾಗಿ ಪದ್ಮನಾಭ ಎಸ್. ಪಯ್ಯಡೆ ಅವರನ್ನು ಅವಿರೋಧವಾಗಿ ನೇಮಿಸಲಾಯಿತು. ನೂತನ ಅಧ್ಯಕ್ಷರನ್ನು ನಿರ್ಗಮನ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಅವರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು. ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ರಂಜನಿ ಸುಧಾಕರ ಹೆಗ್ಡೆ ಅವರು ಆಯ್ಕೆಯಾದರು. ನೂತನ ಕಾರ್ಯಾಧ್ಯಕ್ಷೆಯನ್ನು ನಿರ್ಗಮನ ಕಾರ್ಯಾಧ್ಯಕ್ಷೆ ಲತಾ ಜಯರಾಮ ಶೆಟ್ಟಿ ಅವರು ಪುಷ್ಪಗುಚ್ಚವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು. ಯುವ ವಿಭಾಗದ ನೂತನ ಕಾರ್ಯಾಧ್ಯಕ್ಷರಾಗಿ ಶರತ್ ಶೆಟ್ಟಿ ಅವರನ್ನು ನೇಮಿಸಲಾಯಿತು. ನೂತನ ಕಾರ್ಯಾಧ್ಯಕ್ಷರನ್ನು ನಿರ್ಗಮನ ಕಾರ್ಯಾಧ್ಯಕ್ಷ ವಿವೇಕ್ ವಿ. ಶೆಟ್ಟಿ ಅವರು ಪುಷ್ಪಗುಚ್ಚವನ್ನಿತ್ತು ಅಭಿನಂದಿಸಿ ಗೌರವಿಸಿದರು.
ಅಧ್ಯಕ್ಷರಾಗಿ ಪದ್ಮನಾಭ ಎಸ್. ಪಯ್ಯಡೆ ಆಯ್ಕೆ
ಸುಮಾರು 90 ವರ್ಷಗಳ ಇತಿಹಾಸವನ್ನು ಹೊಂದಿರುವ ಮುಂಬಯಿ ಬಂಟರ ಪ್ರತಿಷ್ಠಿತ ಸಂಸ್ಥೆಯಾಗಿರುವ ಬಂಟರ ಸಂಘ ಮುಂಬಯಿ ಇದರ 2017-2020 ನೇ ಸಾಲಿನ 29 ನೇ ಅಧ್ಯಕ್ಷರಾಗಿ ನಗರದ ಹೆಸರಾಂತ ಹೊಟೇಲ್ ಉದ್ಯಮಿ, ಸಮಾಜ ಚಿಂತಕ, ಸಂಘದ ಹಿರಿಯ ಸಕ್ರಿಯ ಪದಾಧಿಕಾರಿ, ಮಹಾದಾನಿ ಪದ್ಮನಾಭ ಎಸ್. ಪಯ್ಯಡೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹಾಸಭೆಯಲ್ಲಿ ಚುನಾವಣಾ ಸಮಿತಿಯ ಪರವಾಗಿ ಚುನಾವಣಾ ಅಧಿಕಾರಿ ನ್ಯಾಯವಾದಿ ಡಿ. ಕೆ. ಶೆಟ್ಟಿ ಅವರು ಪದ್ಮನಾಭ ಎಸ್. ಪಯ್ಯಡೆ ಅವರು ಅವಿರೋಧವಾಗಿ ಆಯ್ಕೆಯಾಗಿರುವುದನ್ನು ಘೋಷಿಸಿದರು. ಸರ್ವ ಸದಸ್ಯರು ಒಕ್ಕೂರಲಿನಿಂದ ಸ್ವಾಗತಿಸಿದರು. ಸಂಘದ ಮುಂದಿನ ಕಾರ್ಯಕಾರಿ ಸಮಿತಿ, ವಿಶ್ವಸ್ತರು, ಮಾಜಿ ಅಧ್ಯಕ್ಷರ ಜಂಟಿ ಸಭೆಯಲ್ಲಿ ಅಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ ಪದ್ಮನಾಭ ಎಸ್. ಪಯ್ಯಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದ ಬಳಿಕ ಅವರು ಸಂಘದ ಅಧ್ಯಕ್ಷರಾಗಿ ಪದಗ್ರಹಣ ಕೈಗೊಳ್ಳಲಿದ್ದಾರೆ.
ಸಾಧನೆಗಳ ಹರಿಕಾರ ಪದ್ಮನಾಭ ಎಸ್. ಪಯ್ಯಡೆ…
ಹೊಟೇಲ್ ಉದ್ಯಮಿಯಾಗಿ, ಸಮಾಜ ಸೇವಕರಾಗಿ, ಕೊಡುಗೈದಾನಿಯಾಗಿ ಚಿರಪರಿಚಿತರಾಗಿರುವ ಪದ್ಮನಾಭ ಎಸ್. ಪಯ್ಯಡೆ ಅವರು ಮುಂಬಯಿ ಮಹಾನಗರದಲ್ಲಿ ಓರ್ವ ಪ್ರತಿಷ್ಠಿತ ವ್ಯಕ್ತಿಯಾಗಿ ಗುರುತಿಸಿಕೊಂಡವರು. ಬಂಟ್ವಾಳ ಕುರಿಯಾಳಗುತ್ತು ಗಿರಿಜಾ ಪಯ್ಯಡೆ ಮತ್ತು ಪಂಜ ಮೂಡುಮನೆ ಶೀನ ಪಯ್ಯಡೆ ದಂಪತಿಯ ಪುತ್ರರಾಗಿ ಕುರಿಯಾಳಗುತ್ತುವಿನಲ್ಲಿ ಜನಿಸಿದ ಇವರು ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟಿದೂರಿನಲ್ಲಿ ಮುಗಿಸಿ, ಮುಂಬಯಿ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ಪದವಿಯನ್ನು ಪಡೆದರು. ಬಳಿಕ ಬ್ಯಾಂಕಿಂಗ್ ಹುದ್ದೆಗೆ ಸೇರಿ, ಹುದ್ದೆಗಿಂತ ಉದ್ಯಮವೇ ಬದುಕಿನ ಯಶಸ್ಸಿಗೆ ದಾರಿದೀಪವಾಗುತ್ತದೆ ಎಂಬುವುದನ್ನು ಅರಿತು, ಹೊಟೇಲ್ ಉದ್ಯಮದತ್ತ ಆಸಕ್ತರಾದರು. ತನ್ನ ಕಿರಿಯ ಸಹೋದರ ದಿ| ರಮಾನಾಥ ಪಯ್ಯಡೆ ಅವರ ಪ್ರೋತ್ಸಾಹದೊಂದಿಗೆ ಹೊಟೇಲ್ ಆರಂಭಿಸಿದರು.
ಹೊಟೇಲ್ ಉದ್ಯಮದಲ್ಲಿ ಯಶಸ್ಸು…
ಅವರು ಸ್ಥಾಪಿಸಿದ ಹೊಟೇಲ್ ಸಂಪೂರ್ಣ ಪ್ರೈವೇಟ್ ಲಿಮಿಟೆಡ್, ಹೊಟೇಲ್ ಸಪ್ನಾ, ಪಯ್ಯಡೆ ರೆಸಿಡೆನ್ಸಿ, ಪಯ್ಯಡೇಸ್ ಕುಬೇರ ಹೊಟೇಲ್, ಪಯ್ಯಡೆ ಗ್ರಾÂಂಡ್ ಬೆಂಗಳೂರು ಇತ್ಯಾದಿ ಹೊಟೇಲ್‌ಗಳ ಮೂಲಕ ಪಯ್ಯಡೆ ಗ್ರೂಪ್ ಆಫ್ ಹೊಟೇಲ್ಸ್ ಸ್ಥಾಪಿಸುವಲ್ಲಿ ಯಶಸ್ವಿಯಾದರು. ಪದ್ಮನಾಭ ಎಸ್. ಪಯ್ಯಡೆ ಅವರು ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕರಾಗಿ ಬ್ಯಾಂಕಿಂಗ್ ಉದ್ಯಮಲ್ಲೂ ಮನೆಮತಾಗಿದ್ದರು. ಪ್ರಾಮಾಣಿ ಕತೆ, ಪರೋಪಕಾರ ಗುಣ, ಸರಳ ಸಜ್ಜನಿಕೆಯ ವ್ಯಕ್ತಿಯಾಗಿ ಸಮಾಜ ಸೇವೆಯಲ್ಲಿ ಹೆಸರು ಪಡೆದಿರುವ ಅವರು ಸಮಾಜಪರ ಕಾರ್ಯಗಳಲ್ಲೂ ಆತ್ಮತೃಪ್ತಿ ಕಂಡುಕೊಂಡವರು.
ಸಮಾಜ ಸೇವಕರಾಗಿ ಪ್ರಸಿದ್ಧಿ…
ಬಂಟರ ಸಂಘದ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಪ್ರಥಮ ಕಾರ್ಯಾಧ್ಯಕ್ಷರಾಗಿ ಅವರ ಸೇವೆ ಅಭಿನಂದನೀಯ. ಸಂಘದ ಉನ್ನತ ಶಿಕ್ಷಣ ಸಮಿತಿಯ ಉಪ ಕಾರ್ಯಾಧ್ಯಕ್ಷರಾಗಿ, ಸಂಘದ ವಿಶ್ವಸ್ಥರಾಗಿ ಸೇವೆ ಸಲ್ಲಿಸಿರುವುದಲ್ಲದೆ, ಬಂಟ್ಸ್ ನ್ಯಾಯ ಮಂಡಳಿಯ ಕಾರ್ಯಾಧ್ಯಕ್ಷರಾಗಿ ಶ್ರಮಿಸಿದ್ದಾರೆ. ಮಲಾಡ್ ಕನ್ನಡ ಸಂಘದ ಗೌರವಾಧ್ಯಕ್ಷರಾಗಿಯೂ ಅವರ ಸೇವೆ ಗಮನೀಯವಾಗಿದೆ. ಪ್ರಸ್ತುತ ಪ್ರತಿಷ್ಠಿತ ಬಂಟರ ಸಂಘದ ಅಧ್ಯಕ್ಷರಾಗಿ ಆಯ್ಕೆ ಯಾಗಿರುವುದು ಹೆಮ್ಮೆಯ ವಿಷಯವಾಗಿದೆ. ಪತ್ನಿ ಮಾಲಿನಿ ಪಯ್ಯಡೆ, ಪುತ್ರಿಯರಾದ ದಿವ್ಯಾ ಪ್ರಭಾ ಶೆಟ್ಟಿ, ದೀಕ್ಷಾ ಆದಿತ್ಯಾ ಶೆಟ್ಟಿ ಅವರೊಂದಿಗೆ ನಗರದಲ್ಲಿ ನೆಲೆಸಿದ್ದಾರೆ.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.