ಬಂಟರ ಸಂಘ ಪಿಂಪ್ರಿ-ಚಿಂಚ್ವಾಡ್:ವಾರ್ಷಿಕೋತ್ಸವ ಸಂಭ್ರಮಕ್ಕೆ ಚಾಲನೆ
Team Udayavani, Feb 10, 2019, 5:41 PM IST
ಪುಣೆ: ಪಿಂಪ್ರಿ-ಚಿಂಚ್ವಾಡ್ ಬಂಟರ ಸಂಘದ 24ನೇ ವಾರ್ಷಿ ಕೋತ್ಸವ ಸಮಾರಂಭವು ಫೆ. 9 ರಂದು ಚಿಂಚ್ವಾಡ್ ಅನ್ನಪೂರ್ಣಾ ಹೊಟೇಲ್ ಸಮೀಪದ ರಾಮಕೃಷ್ಣ ಮೋರೆ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಸಂಘದ ಅಧ್ಯಕ್ಷರಾದ ವಿಜಯ್ ಎಸ್. ಶೆಟ್ಟಿ ಕಟ್ಟಣಿಗೆ ಮನೆ ಬೋರ್ಕಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭವಾನಿ ಫೌಂಡೇಶನ್ ಮುಂಬಯಿ ಇದರ ಸ್ಥಾಪಕಾಧ್ಯಕ್ಷರಾದ ಕುಸುಮೋಧರ ಡಿ. ಶೆಟ್ಟಿ ಹಾಗೂ ಗೌರವ ಅತಿಥಿಗಳಾಗಿ ಆಗಮಿಸಿದ ಮುಂಬಯಿಯ ಕವಿ ಹಾಗೂ ಲೇಖಕ ಪೇತ್ರಿ ವಿಶ್ವನಾಥ ಶೆಟ್ಟಿ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ವಿ. ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಇವರುಗಳು ದೀಪ ಪ್ರಜ್ವಲಿಸಿ ಚಾಲನೆಯಿತ್ತರು.
ವೇದಿಕೆಯಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಡಿ. ಶೆಟ್ಟಿ, ಎರ್ಮಾಳ್ ಸೀತರಾಮ ಶೆಟ್ಟಿ, ಎರ್ಮಾಳ್ ನಾರಾಯಣ ಕೆ. ಶೆಟ್ಟಿ, ಎರ್ಮಾಳ್ ವಿಶ್ವನಾಥ ಶೆಟ್ಟಿ, ಕೆ. ಪದ್ಮನಾಭ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ಹೆಗ್ಡೆ ಕಟ್ಟಿಂಗೇರಿಮನೆ, ಪ್ರಧಾನ ಕಾರ್ಯ ದರ್ಶಿ ಅರುಣ್ ಶೆಟ್ಟಿ ವಿಜಯಾ ಬ್ಯಾಂಕ್, ಉಪಾಧ್ಯಕ್ಷ ರಾಕೇಶ್ ಶೆಟ್ಟಿ ಬೆಳ್ಳಾರೆ, ಕೋಶಾಧಿಕಾರಿ ಸುಧಾಕರ ಶೆಟ್ಟಿ ಪೆಲತ್ತೂರು, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಧ್ಯಕ್ಷ ವಿಶ್ವನಾಥ ಕೆ. ಶೆಟ್ಟಿ, ಕ್ರೀಡಾ ಸಮಿತಿ ಕಾರ್ಯಾಧ್ಯಕ್ಷ ದಿನೇಶ್ ಶೆಟ್ಟಿ ಉಜಿರೆ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ಡಾ| ಸಮಿತ್ ಚೌಟ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಪ್ರಿಯಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಆಕಾಶ್ ಜೆ. ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ,ವರದಿ :ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್.ಅಶೋಕ್
Delhi Elections: ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ
Kudremukh National Park: ವನ್ಯಜೀವಿ ಬೇಟೆಗೆ ಯತ್ನ; ಆರೋಪಿ ಬಂಧನ
ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.