ಬಂಟರ ಸಂಘ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ: ಆರ್ಥಿಕ ನೆರವು ವಿತರಣೆ
Team Udayavani, Jun 18, 2017, 1:29 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ ಸಮಾಜದ ಸ್ಥಳೀಯ ಮಕ್ಕಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ವಿತರಣೆಯು ಜೂ. 11 ರಂದು ಅಸ್ಮಿತಾ ಕ್ಲಬ್ ಇದರ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಅತಿಥಿಯಾಗಿ ಪಾಲ್ಗೊಂಡ ಸಮನ್ವಯ ಸಮಿತಿಯ ಕಾರ್ಯಾಧ್ಯಕ್ಷ ಮುಂಡಪ್ಪ ಪಯ್ಯಡೆ ಅವರು ಮಾತನಾಡಿ, ಮಕ್ಕಳಿಗೆ ಕೊಡಲ್ಪಡುವ ಅನುದಾನದ ಮಹತ್ವವನ್ನು ಮಕ್ಕಳಿಗೆ ಮನವರಿಕೆ ಮಾಡುವುದು ನಮ್ಮ ಕರ್ತವ್ಯವಾಗಿದೆ. ಮಕ್ಕಳನ್ನು ಅಧುನಿಕ ಜಗತ್ತಿನ ಗುಂಗಿನಲ್ಲಿ ಸಂಸ್ಕೃತಿ ಮತ್ತು ಸಂಸ್ಕಾರದೊಂದಿಗೆ ಬೆಳೆಸಬೇಕು. ಶಿಕ್ಷಣವು ಜೀವನದ ಕಣ್ಣಿದ್ದಂತೆ. ಮಕ್ಕಳನ್ನು ಪೋಷಿಸಿ, ಬೆಳೆಸುವುದರೊಂದಿಗೆ ಆದರ್ಶ ಪ್ರಜೆಗಳಾಗಿ ಸಮಾಜಕ್ಕೆ ಅರ್ಪಿಸುವುದು ನಮ್ಮ ಎಲ್ಲರ ಕರ್ತವ್ಯವಾಗಿದೆ ಎಂದರು.
ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜಯರಾಮ್ ಶೆಟ್ಟಿ ಅವರು ಮಾತನಾಡಿ, ಶಿಕ್ಷಣದ ಮಹತ್ವವನ್ನು ತಿಳಿಸುವುದರೊಂದಿಗೆ ಪಾಲಕರು ಮಕ್ಕಳ ದೈನಂದಿನ ಇತರ ಚಟುವಟಿಕೆಗಳಲ್ಲೂ ಗಮನ ಹರಿಸಬೇಕು ಎಂದು ನುಡಿದರು.
ಸಂಘದ ಸಮಾಜ ಕಲ್ಯಾಣ ಮತ್ತು ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರು ಮಾತನಾಡಿ, ಬಂಟರ ಸಂಘವು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಮಹತ್ವಗಳ ತಿರುಗಳುಗಳನ್ನು ವಿವರಿಸಿದರು. ಪ್ರಸ್ತುತ ವರ್ಷ ಸಂಘವು ಸುಮಾರು 1.36 ಕೋ. ರೂ. ಗಳ ಅನುದಾನದಲ್ಲಿ ಮೀರಾ-ಭಾಯಂದರ್ ಕ್ಷೇತ್ರಕ್ಕೆ ಸುಮಾರು 15 ಲಕ್ಷ ರೂ. ಗಳನ್ನು ನೀಡುತ್ತಿದೆ. ಸಂಘದಿಂದ ನೆರವು ಪಡೆದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಘದ ಮಹತ್ವದ ಬಗ್ಗೆ ಅರಿವನ್ನು ಪಡೆಯುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.
ಸಂಘದ ಕೋಶಾಧಿಕಾರಿ ಐ. ಆರ್. ಶೆಟ್ಟಿ ಅವರು ಮಾತನಾಡಿ, ಸಮಾಜದ ವತಿಯಿಂದ ನಡೆಸಲ್ಪಡುವ ವಿವಿಧ ಶಿಕ್ಷಣ ಸಮೂಹ ಕ್ಷೇತ್ರಗಳ ಬಗ್ಗೆ ವಿವರಿಸಿ, ಪಾಲಕರು ಮಕ್ಕಳ ಆಸಕ್ತಿಗೆ ತಕ್ಕಂತೆ ಶಿಕ್ಷಣವನ್ನು ನೀಡುತ್ತಿರಬೇಕು. ಅದರಲ್ಲಿ ಅನಗತ್ಯವಾಗಿ ಮಕ್ಕಳಿಗೆ ಹೊರೆಯನ್ನು ನೀಡದೆ ಮಕ್ಕಳನ್ನು ಯೋಗ್ಯ ಬದುಕಿನತ್ತ ಸಾಗುವಲ್ಲಿ ಸಹಕಾರಿಯಾಗಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ಉಪಾಧ್ಯಕ್ಷ ಪದ್ಮನಾಭ ಪಯ್ಯಡೆ ಅವರು ಮಾತನಾಡಿ, ಸಂಘ ಇರುವುದು ಸಮಾಜಕ್ಕಾಗಿ. ನಮ್ಮ ಪೂರ್ವಜರು ಕಟ್ಟಿ ಬೆಳೆಸಿದಂತಹ ನಮ್ಮಿà ಸಮಾಜದ ಸಂಸ್ಥೆ ಇಂದು ನಮಗಾಗಿ ಬೆಳೆದು ನಿಂತಿದೆ. ನಾವು ಸಂಘದಲ್ಲಿ ಸಹಭಾಗಿಯಾಗಿ ಯಾಗುವುದರೊಂದಿಗೆ ನಮ್ಮಲ್ಲಿ ಸಮನ್ವತೆಯ ಪ್ರಜ್ಞೆಯನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಮಕ್ಕಳು-ಪಾಲಕರಲ್ಲಿ ಪಡೆದುಕೊಡುವ ಮನೋಭಾವ ಬೆಳೆದು ಬಂದು ರಾಷ್ಟÅ ನಿರ್ಮಾಣದಲ್ಲಿ ಜವಾಬ್ದಾರಿ ವಹಿಸಬೇಕು. ಜೀವನದಲ್ಲಿ ಪ್ರಯತ್ನದ ಛಲವಿದ್ದಲ್ಲಿ ಫಲ ಖಂಡಿತವಾಗಿಯೂ ಸಿಗುತ್ತದೆ. ಬಂಟರ ಸಂಘಕ್ಕೆ ಸುಮಾರು 90 ವರ್ಷಗಳ ಇತಿಹಾಸವಿದೆ. ನಮ್ಮ ಪೂರ್ವಜರು ಕಟ್ಟಿ ಬೆಳೆಸಿದಂತಹ ನಮ್ಮ ಸಮಾಜದ ಸಂಸ್ಥೆಯು ಹೆಚ್ಚಿನ ಯಶಸ್ಸನ್ನು ಕಾಣುವಲ್ಲಿ ನಾವೆಲ್ಲರು ಒಂದಾಗಿ ಶ್ರಮಿಸೋಣ ಎಂದರು.
ಪ್ರಾರಂಭದಲ್ಲಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಬಿಳಿಯೂರುಗುತ್ತು ಅರುಣೋದಯ ರೈ ಅವರು ಸ್ವಾಗತಿಸಿದರು. ಅನುಷಾ ಶೆಟ್ಟಿ ಪ್ರಾರ್ಥನೆಗೈದರು. ನಗರ ಸೇವಕ ಪ್ರಮೋದ್ ಸಾವಂತ್ ಅವರನ್ನು ಗಣ್ಯರು ಗೌರವಿಸಿದರು. ಪುಟಾಣಿಗಳಿಂದ ಸ್ವಾಗತ ನೃತ್ಯ ನಡೆಯಿತು. ಗಣ್ಯರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಂಟರ ಸಂಘದ ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಸ್ಥಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಶಿವರಾಮ್ ಶೆಟ್ಟಿ, ಸುಭಾಷ್ ಶೆಟ್ಟಿ, ಲೋಕೇಶ್ ಶೆಟ್ಟಿ, ಸ್ಥಳೀಯ ಸಮಿತಿಯ ಉಪಾಧ್ಯಕ್ಷ ಉದಯ ಹೆಗ್ಡೆ, ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ತೆಳ್ಳಾರ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಗುಣಾ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಚಂದ್ರಶೇಖರ ವಿ. ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸಮಾಜದ ಮಕ್ಕಳಿಗೆ ಗಣ್ಯರು ಶೈಕ್ಷಣಿಕ ನೆರವು ವಿತರಿಸಿ ಶುಭ ಹಾರೈಸಿದರು. ಕೊನೆಯಲ್ಲಿ ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು.
ಶಿಕ್ಷಣವು ಜೀವನದ ಬಂಡವಾಳವಾಗಿದ್ದು, ವಿದ್ಯೆಗೆ ಹೆಚ್ಚಿನ ಮಹತ್ವವನ್ನು ನೀಡುವುದು ಅಗತ್ಯವಾಗಿದೆ. ಬಂಟರ ಸಂಘವು ಹಲವಾರು ವರ್ಷಗಳಿಂದ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾ ಬಂದಿದ್ದು, ಇದಕ್ಕೆ ಪೊವಾಯಿ ಹಾಗೂ ಕುರ್ಲಾದಲ್ಲಿರುವ ಶಿಕ್ಷಣ ಸಂಸ್ಥೆಗಳು ಸಾಕ್ಷಿಯಾಗಿವೆ. ಸಮಾಜ ಬಾಂಧವರಿಗೆ ಮಾತ್ರವಲ್ಲದೆ, ಇತರ ಭಾಷಿಗರ ಶಿಕ್ಷಣದ ಹಸಿವನ್ನು ತಣಿಸುವ ಕಾರ್ಯದಲ್ಲಿ ಬಂಟರ ಸಂಘವು ನಿರತವಾಗಿದೆ
– ಪ್ರಭಾಕರ ಎಲ್. ಶೆಟ್ಟಿ ಅಧ್ಯಕ್ಷರು: ಬಂಟರ ಸಂಘ ಮುಂಬಯಿ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.