ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿ ಆರ್ಥಿಕ ನೆರವು ವಿತರಣೆ
Team Udayavani, Jun 20, 2018, 2:27 PM IST
ಮುಂಬಯಿ: ಧಾರ್ಮಿಕ ಭಾವನೆಯೊಂದಿಗೆ ಸ್ವತ್ಛ ಮನಸ್ಸು, ಸಮಾಜಪರ ಚಿಂತನೆಗಳಿಂದ ಕೂಡಿರುವ ವ್ಯಕ್ತಿ ಉತ್ತಮ ವ್ಯಕ್ತಿಯಾಗಬಲ್ಲ. ಅಂತಹ ಉತ್ತಮ ವ್ಯಕ್ತಿಗಳ ಸಹಕಾರ, ಸಾಧನೆಗಳಿಂದ ಬಂಟರ ಸಂಘ ಶೈಕ್ಷಣಿಕ ಕ್ರಾಂತಿಯನ್ನು ಮಾಡುತ್ತಿದೆ. ಇದರ ಸಂಪೂರ್ಣ ಲಾಭವನ್ನು ಸಮಾಜ ಬಾಂಧವರು ಪಡೆದುಕೊಳ್ಳಬೇಕು ಎಂದು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ನುಡಿದರು.
ಜೂ. 15 ರಂದು ಕಲ್ಯಾಣ್ ಪಶ್ಚಿಮದ ಗಿರಿಜಾ ಪಯ್ಯಡೆ ಸಭಾಗೃಹದಲ್ಲಿ ನಡೆದ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಆರ್ಥಿಕ ಧನ ಸಹಾಯ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಸಂಘವು ಪ್ರಸ್ತುತ ವರ್ಷ 1.75 ಕೋ. ರೂ. ಗಳನ್ನು ಆರ್ಥಿಕ ಸಹಾಯಕ್ಕಾಗಿ ವಿನಿಯೋಗಿಸುತ್ತಿರು ವುದು ಸಂತೋಷವಾಗುತ್ತಿದೆ. ವಿದ್ಯಾರ್ಥಿ ಗಳು ಸಂಘದಿಂದ ಪಡೆದ ಆರ್ಥಿಕ ನೆರವನ್ನು ಉತ್ತಮವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಸಂಘವು ಭವಿಷ್ಯದಲ್ಲಿ ಬೃಹತ್ ಸಂಖ್ಯೆಯಲ್ಲಿ ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಿದೆ ಎಂದು ನುಡಿದು ಶುಭಹಾರೈಸಿದರು.
ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್ ಶೆಟ್ಟಿ ಇವರು ಮಾತನಾಡಿ, ಪ್ರಸ್ತುತ ವರ್ಷ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಗೆ 14 ಲಕ್ಷ ರೂ. ಗಳನ್ನು ನೀಡಲಾಗಿದೆ. ಕಳೆದ ವರ್ಷದಿಂದ ಈ ವರ್ಷ 4 ಲಕ್ಷ ರೂ. ಗಳನ್ನು ಏರಿಸಲಾಗಿದ್ದು, ಅತ್ಯಧಿಕ ಮೊತ್ತವು ಈ ಸಮಿತಿಗೆ ಲಭಿಸಿರುವುದು ಸಂತೋಷ ತಂದಿದೆ. ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಖಾಂದೇಶ್ ಭಾಸ್ಕರ ಶೆಟ್ಟಿ ಅವರು ಪ್ರಾರಂಭಿಸಿದ ಶೈಕ್ಷಣಿಕ ದತ್ತು ಸ್ವೀಕಾರ ಇಂದು ಈ ಪ್ರಾದೇಶಿಕ ಸಮಿತಿಗೂ ಪಸರಿಸಿದೆ ಎನ್ನಲು ಸಂತೋಷವಾಗುತ್ತಿದೆ. ಮುಂದಿನ ದಿನಗಳಲ್ಲಿ ಬಂಟರ ಸಂಘ ಸುಮಾರು 500 ವಿದ್ಯಾರ್ಥಿಗಳನ್ನು ದತ್ತು ಸ್ವೀಕಾರ ಪಡೆಯುವ ಯೋಜನೆ ನಮ್ಮ ಮುಂದಿದೆ ಎಂದರು.
ಪಶ್ಚಿಮ ವಿಭಾಗ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಡಾ| ಪ್ರಭಾಕರ ಶೆಟ್ಟಿ ಇವರು ಮಾತನಾಡಿ, ಸಮಾಜ ಬಾಂಧವರು ವಿದ್ಯಾರ್ಜನೆಗಾಗಿ ಅಲ್ಪ ಸಹಾಯ ಮಾಡುವ ಉದ್ಧೇಶ ಇದಾಗಿದೆ. ವಿದ್ಯಾರ್ಥಿಗಳು ಕಲಿತು ಉದ್ಯೋಗಪತಿಗಳಾಗಿ ಸಮಾಜದ ಇತರರಿಗೆ ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ನುಡಿದರು.
ಭಿವಂಡಿ- ಬದ್ಲಾಪುರ ಪ್ರಾದೇಶಿಕ ಸಮಿತಿಯ ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ದೊಂಡೇ ರಂಗಡಿ ಭಾಸ್ಕರ ಟಿ. ಶೆಟ್ಟಿ ಅವರು ಮಾತನಾಡಿ, ಈ ವರ್ಷ ಪ್ರಾದೇಶಿಕ ಸಮಿತಿಯ ಪ್ರತಿಯೊಂದು ಅರ್ಜಿಯನ್ನು ಸ್ವೀಕರಿಸಿ ಸುಮಾರು 14 ಲಕ್ಷ ರೂ. ಕೇಂದ್ರ ಸಮಿತಿ ನೀಡಿದೆ. ಸಮಾಜದ ಅಭಿವೃದ್ದಿ ಕಾರ್ಯಗಳಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದರು. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಎನ್. ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು. 21 ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ಪ್ರವೀಣಾ ಶೆಟ್ಟಿ ಪ್ರಾರ್ಥನೆಗೈದರು.
ಗಣ್ಯರು ದೀಪಪ್ರಜ್ವಲಿಸಿ ಸಮಾ ರಂಭಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಸಂಘದ ಹಾಗೂ ಪ್ರಾದೇಶಿಕ ಸಮಿತಿಯ ಪದಾ ಧಿಕಾರಿಗಳಾದ ರವೀಂದ್ರ ಶೆಟ್ಟಿ, ಭಾಸ್ಕರ ಶೆಟ್ಟಿ, ಸುಭೋದ್ ಭಂಡಾರಿ, ಪ್ರಕಾಶ್ ಶೆಟ್ಟಿ, ಸುಮಿತ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಉದಯ ಶೆಟ್ಟಿ, ರಾಜೇಶ್ ಶೆಟ್ಟಿ, ಸುಧೀರ್ ಶೆಟ್ಟಿ, ಜಯ ಶೆಟ್ಟಿ, ವಾಸು ಶೆಟ್ಟಿ, ಪ್ರವೀಣ್ ಶೆಟ್ಟಿ, ಜಗದೀಶ್ ಶೆಟ್ಟಿ, ಜ್ಯೋತಿ ಪ್ರಕಾಶ್ ಹೆಗ್ಡೆ ಉಪಸ್ಥಿತರಿದ್ದರು. ಕರ್ನೂರು ಮೋಹನ್ ರೈ ಕಾರ್ಯಕ್ರಮ ನಿರ್ವಹಿಸಿದರು. ಸುಬೋಧ್ ಭಂಡಾರಿ ವಂದಿಸಿದರು.
ಪ್ರತಿಯೊಬ್ಬರಿಗೂ ವಿದ್ಯಾರ್ಥಿ ವೇತನ ಸಿಗಬೇಕು ಎಂಬ ಉದ್ಧೇಶದಿಂದ ಈ ವರ್ಷ 40 ಲಕ್ಷ ರೂ. ಹೆಚ್ಚುವರಿ ಸಂಗ್ರಹಿಸಿ ಎಲ್ಲಾ ವಿದ್ಯಾರ್ಥಿಗಳಿಗೂ ವೇತನ ಸಿಗುವಂತೆ ನೋಡಿಕೊಳ್ಳಲಾಗಿದೆ. ಅದೇ ರೀತಿ ಈ ಪ್ರಾದೇಶಿಕ ಸಮಿತಿ ಪರಿಸರದಲ್ಲಿ ನಿರ್ಮಿಸುವ ಶಿಕ್ಷಣ ಸಂಸ್ಥೆಯ ಕಾರ್ಯ ತೀವ್ರಗತಿಯಲ್ಲಿದೆ.
-ಸುಬ್ಬಯ್ಯ ಎ. ಶೆಟ್ಟಿ, ಸಂಚಾಲಕರು, ಭಿವಂಡಿ-ಬದ್ಲಾಪುರ ಪ್ರಾ. ಸಮಿತಿ
ಈ ವರ್ಷ ಅಧ್ಯಕ್ಷರ ಆಶಯದಂತೆ ವಿಧವಾ ವೇತನ ಸಮಾನವಾಗಿ ನೀಡುವ ಯೋಜನೆ ಸಫಲತೆಯನ್ನು ಕಂಡಿದೆ. ಉಳೂ¤ರು ಮೋಹನ್‌ದಾಸ್ ಶೆಟ್ಟಿ ಅವರ ಶ್ರಮಕ್ಕೆ ಸಂದ ಜಯ ಇದಾಗಿದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಸಮಾಜದ ಮತ್ತು ಸಂಘದ ಋಣ ತೀರಿಸುವ ಕಾರ್ಯದಲ್ಲಿ ತೊಡಗಬೇಕು.
-ಖಾಂದೇಶ್ ಭಾಸ್ಕರ್ ಶೆಟ್ಟಿ, ಕಾರ್ಯದರ್ಶಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಬಂಟರ ಸಂಘ
60 ಲಕ್ಷದಿಂದ ಪ್ರಾರಂಭಗೊಂಡ ಈ ಯೋಜನೆ ಇಂದು 1.75 ಕೋ. ರೂ. ಗಳಿಗೆ ಏರಿಕೆಯನ್ನು ಕಂಡಿದೆ. ಈ ಯೋಜನೆಯಿಂದಾಗಿ ಸಾವಿರಾರು ಮಂದಿ ಸಮಾಜ ಬಾಂಧವರ ಕಣ್ಣೀರು ಒರೆಸಿದಂತಾಗಿದೆ. ಪ್ರಾದೇಶಿಕ ಸಮಿತಿಯಿಂದ ಈ ವರ್ಷ 21 ವಿದ್ಯಾರ್ಥಿಗಳನ್ನು ದತ್ತು ಸ್ವೀಕಾರ ಮಾಡಲಾಗಿದೆ. ಇಂತಹ ಕಾರ್ಯ ಇನ್ನಷ್ಟು ನಡೆಯುತ್ತಿರಲಿ.
-ಇಂದ್ರಾಳಿ ದಿವಾಕರ ಶೆಟ್ಟಿ, ಸಮನ್ವಯಕರು, ಮಧ್ಯ ಪ್ರಾದೇಶಿಕ ಸಮಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.