ಬಂಟ್ಸ್ ಅಸೋಸಿಯೇಶನ್ ಪುಣೆ ವಾರ್ಷಿಕೋತ್ಸವ: ಸಮ್ಮಾನ
Team Udayavani, Jan 24, 2019, 2:09 PM IST
ಪುಣೆ: ಬಂಟ್ಸ್ ಅಸೋಸಿಯೇಶನ್ ಪುಣೆ ಇದರ ವಾರ್ಷಿಕೋತ್ಸವ ಸಮಾರಂಭವು ಜ. 12 ರಂದು ನಗರದ ತಿಲಕ್ ಸ್ಮಾರಕ ಮಂದಿರ, ತಿಲಕ್ ರೋಡ್ ಇಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ನಡೆಯಿತು.
ಸಂಘದ ಅಧ್ಯಕ್ಷ ಆನಂದ್ ಶೆಟ್ಟಿ ಮಿಯ್ನಾರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ಎಸ್. ಪಯ್ಯಡೆ ಹಾಗೂ ಗೌರವ ಅಥಿತಿಗಳಾಗಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ| ವೈ. ಭರತ್ ಶೆಟ್ಟಿ ಇವರುಗಳನ್ನು ಸಂಘದ ವತಿಯಿಂದ ಶಾಲು ಹೊದೆಸಿ, ನೆನಪಿನ ಕಾಣಿಕೆ, ಪುಷ್ಪಗುತ್ಛಗಳನ್ನು ನೀಡಿ ಸಮ್ಮಾನಿಸಲಾಯಿತು.
ಈ ಸಂದರ್ಭ ವೇದಿಕೆಯಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಸಂಘದ ನಿಕಟಪೂರ್ವ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ, ಉಪಾಧ್ಯಕ್ಷರಾದ ಗಣೇಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಅರವಿಂದ ರೈ, ಗೌರವ ಕೋಶಾಧಿಕಾರಿ ದಿನೇಶ್ ಶೆಟ್ಟಿ ನಿಟ್ಟೆ, ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ಸುಶ್ಮಿತ್ ಎಸ್. ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೀಪಾ ಅರವಿಂದ ರೈ, ಕಾರ್ಯದರ್ಶಿ ಉಷಾ ಯು. ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷೆ ಮಲ್ಲಿಕಾ ಎ. ಶೆಟ್ಟಿ ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷೆ ನಮ್ರತಾ ಜೆ. ಶೆಟ್ಟಿ ಉಪಸ್ಥಿತರಿದ್ದರು.
ನಿಕಟಪೂರ್ವ ಅಧ್ಯಕ್ಷರಾದ ನಾರಾಯಣ ಕೆ. ಶೆಟ್ಟಿ ಸ್ವಾಗತಿಸಿದರು. ಲತಾ ಎಸ್. ಶೆಟ್ಟಿ, ಪ್ರಫುÇÉಾ ವಿ. ಶೆಟ್ಟಿ, ಶಾಲಿನಿ ಎಂ. ಶೆಟ್ಟಿ ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ರೈ ಸಂಘದ ವಾರ್ಷಿಕ ಕಾರ್ಯಚಟುವಟಿಕೆಗಳ ವರದಿ ವಾಚಿಸಿದರು. ಮಹಿಳಾ ವಿಭಾಗದ ಕಾರ್ಯಚಟುವಟಿಕಯ ವರದಿ ಮಹಿಳಾ ವಿಭಾಗದ ಕಾರ್ಯದರ್ಶಿ ಉಷಾ ಯು. ಶೆಟ್ಟಿ ವಾಚಿಸಿದರು.
ಸಂಘದ ವಾರ್ಷಿಕ ಕ್ರೀಡೋತ್ಸವದಲ್ಲಿ ವಿಜೇತ ಕ್ರೀಡಾಳುಗಳಿಗೆ ಅತಿಥಿ ಗಣ್ಯರ ಹಸ್ತದಿಂದ ಬಹುಮಾನಗಳನ್ನು ವಿತರಿಸಿದರು. ಕೆಮೂ¤ರು ಸುಧಾಕರ ಶೆಟ್ಟಿ ಹಾಗೂ ಸುಶ್ಮಿತ್ ಎಸ್. ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ರೋಹಿತ್ ಶೆಟ್ಟಿ ನಗ್ರಿಗುತ್ತು ಸಮ್ಮಾನಪತ್ರ ವಾಚಿಸಿದರು. ಲೋಹಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಗೌರವ ಕೋಶಾಧಿಕಾರಿ ದಿನೇಶ್ ಶೆಟ್ಟಿ ನಿಟ್ಟೆ ವಂದಿಸಿದರು.
ಚಿತ್ರ -ವರದಿ :ಕಿರಣ್ ಬಿ. ರೈ ಕರ್ನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.