ಬಂಟರ ಭವನದಲ್ಲಿ ಮುಲುಂಡ್‌ ಬಂಟ್ಸ್‌ನ 12ನೇ ವಾರ್ಷಿಕೋತ್ಸವ 


Team Udayavani, Dec 12, 2017, 11:21 AM IST

10-Mum04a.jpg

ಮುಂಬಯಿ: ನಾವು ಜೀವನದಲ್ಲಿ ಯಾವುದೇ ಮಟ್ಟಕ್ಕೆ ಏರಿದರೂ ಹೆತ್ತು-ಹೊತ್ತು ಸಾಕಿ ಸಲಹಿದ ತಂದೆ-ತಾಯಿಗಳನ್ನು ಮರೆತರೆ ಅದಕ್ಕಿಂತ ದೊಡ್ಡ ಶಾಪ ಇನ್ನೊಂದಿಲ್ಲ. ಇದನ್ನು ದೇವರು ಕೂಡಾ ಸಹಿಸಲಾರ. ಆದ್ದರಿಂದ ತಂದೆ-ತಾಯಿ, ಮಾತೃಭಾಷೆ, ಕಲಿಸಿದ ಗುರುಗಳೊಂದಿಗೆ ನಮ್ಮ ಕರ್ತವ್ಯಗಳನ್ನು ಎಂದಿಗೂ ಮರೆಯಬಾರದು. ಆಗ ಮಾತ್ರ ನಮ್ಮ ಜೀವನ ಯಶಸ್ಸಿನತ್ತ ಸಾಗಲು ಸಾಧ್ಯ ಎಂದು ನಿಟ್ಟೆ ವಿಶ್ವವಿದ್ಯಾಲಯದ ಚಾನ್ಸಿಲರ್‌ ಡಾ| ನಿಟ್ಟೆ ವಿನಯ್‌ ಹೆಗ್ಡೆ ಅವರು ಅಭಿಪ್ರಾಯಿಸಿದರು.

ಡಿ. 9ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ಮುಲುಂಡ್‌ ಬಂಟ್ಸ್‌ನ 12 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಬಂಟರಿಗೆ ಇಂದು ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಬಂಟರಲ್ಲಿ ಸಾಧಿಸುವ ಛಲವಿದೆ. ಆದರೆ ನಮಗೆ ಯಾವತ್ತೂ ಹಣವೇ ಮುಖ್ಯವಲ್ಲ. ನೈತಿಕತೆ ಎಂಬುವುದು ಇದೆ. ಅದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮ್ಮ ಮೂಲ ಸಂಸ್ಕೃತಿಯ ಬಗ್ಗೆ ನಾವು ಮೊದಲು ಅರಿಯಬೇಕು. ಮುಲುಂಡ್‌ ಬಂಟ್ಸ್‌ಗೆ ನಾನು ಇದು ಎರಡನೇ ಬಾರಿ ಅತಿಥಿಯಾಗಿ ಬರುತ್ತಿದ್ದೇನೆ. ಸಂಸ್ಥೆಯ ಸಮಾಜಪರ ಕಾರ್ಯಕ್ರಮಗಳನ್ನು ಚೆನ್ನಾಗಿ ಅರಿತುಕೊಂಡಿದ್ದೇನೆ. ಉತ್ಸಾಹಿ ಕಾರ್ಯಕರ್ತರು ಮುಲುಂಡ್‌ ಬಂಟ್ಸ್‌ ನಲ್ಲಿದ್ದಾರೆ. ಇವರಿಂದ ಸಮಾಜದಲ್ಲಿ  ಇನ್ನಷ್ಟು ಉತ್ತಮ ಕಾರ್ಯಗಳು ನಡೆಯಬೇಕು. ಮುಖ್ಯವಾಗಿ ಯುವಪೀಳಿಗೆಯಲ್ಲಿ ಮರೆಯಾಗುತ್ತಿರುವ ಸಂಸ್ಕೃತಿ, ಸಂಸ್ಕಾರಗಳನ್ನು ಬಿಂಬಿಸಿ, ಅವರನ್ನು ಸನ್ಮಾರ್ಗದೆಡೆಗೆ ಕೊಂಡೊಯ್ಯಲು ಪ್ರೇರೇಪಿಸುವ ಮುಲುಂಡ್‌ ಬಂಟ್ಸ್‌ ನ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಿದೆ ಎಂದು ನುಡಿದರು.

ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಎಂಆರ್‌ಐ ಹಾಸ್ಪಿಟಾಲಿಟಿ ಆ್ಯಂಡ್‌ ಇನಾ#Å ಪ್ರೈವೇಟ್‌ ಲಿಮಿಟೆಡ್‌ ಬೆಂಗಳೂರು ಇದರ ಮುಖ್ಯ ಆಡಳಿತ ನಿರ್ದೇಶಕ ಕೆ. ಪ್ರಕಾಶ್‌ ಶೆಟ್ಟಿ ಅವರು ಮಾತನಾಡಿ, ಮುಲುಂಡ್‌ ಬಂಟ್ಸ್‌ನ ಅರ್ಥಪೂರ್ಣ ಕಾರ್ಯಕ್ರಮಗಳು ಅಭಿನಂದನೀಯ. ಸಮಾಜಪರ ಕಾಳಜಿಯಿರುವ ಈ ಸಂಸ್ಥೆಯು ಮುಂಬಯಿಯಲ್ಲಿ ಒಂದು ಮಾದರಿ ಸಂಸ್ಥೆಯಾಗಿ ಬೆಳೆದು ನಿಂತಿದೆ. ಸಮಾಜ ಬಾಂಧವರನ್ನು ಒಂದುಗೂಡಿಸಿ ಅವರ ಕಷ್ಟ-ಕಾರ್ಪಣ್ಯಗಳಿಗೆ ಸದಾ ಸ್ಪಂದಿಸುತ್ತಿರುವ ಮುಲುಂಡ್‌ ಬಂಟ್ಸ್‌ನ ಕಾರ್ಯಕರ್ತರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತಿದ್ದೇನೆ. ನಿಮ್ಮ ಕಾರ್ಯಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಶುಭಹಾರೈಸಿದರು.

ಇನ್ನೋರ್ವ ಅತಿಥಿ ಬಂಟರ ಸಂಘ ಮುಂಬಯಿ ಇದರ ನೂತನ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಮಾತನಾಡಿ, ಮುಲುಂಡ್‌ ಬಂಟ್ಸ್‌ ಎಂಬುವುದು ನಮ್ಮದೇ ಒಂದು ಮನೆಯಿದ್ದಂತೆ. ಇದನ್ನು ಪ್ರೀತಿಯಿಂದ ಮುಲುಂಡ್‌ ಗುತ್ತು ಎಂದೇ ಕರೆಯುತ್ತೇವೆ. ಆ ಹೆಸರೇ ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ. ನಮ್ಮ ಮಕ್ಕಳಿಗೆ ಗುತ್ತಿನ ಮನೆ ಹಾಗೂ ನಮ್ಮ ಆಚಾರ-ವಿಚಾರಗಳ ಬಗ್ಗೆ ಅರಿವನ್ನು ಮೂಡಿಸಬೇಕು. ಮುಲುಂಡ್‌ ಬಂಟ್ಸ್‌ ಹಾಗೂ ಮುಂಬಯಿಯಲ್ಲಿರುವ ಇತರ ಬಂಟ್ಸ್‌ ಸಮಾಜದ ಸಂಘ-ಸಂಸ್ಥೆಗಳು ಬಂಟರ ಸಂಘದೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದು, ಇದು ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿ-ಗಣ್ಯರು, ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರುಗಳಾದ ನಗ್ರಿಗುತ್ತು ವಿವೇಕ್‌ ಶೆಟ್ಟಿ, ಡಾ| ಸತ್ಯಪ್ರಕಾಶ್‌ ಶೆಟ್ಟಿ, ಎಸ್‌. ಬಿ. ಶೆಟ್ಟಿ, ವಿಶ್ವಸ್ಥರುಗಳಾದ ಸ್ಟಿÅàಲ್‌ ಸ್ಟಾÅಂಗ್‌ ರಮೇಶ್‌ ಶೆಟ್ಟಿ ಮೊದಲಾದವರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.

ಸಂಸ್ಥೆಯ ಉಪಾಧ್ಯಕ್ಷ ವಸಂತ್‌ ಎನ್‌. ಶೆಟ್ಟಿ ಪಲಿಮಾರು ಹಾಗೂ ಗೌರವ ಕೋಶಾಧಿಕಾರಿ ಎ. ಹರ್ಷವರ್ಧನ್‌ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು. ಸಮಾರಂಭದಲ್ಲಿ ರಂಗನಟ ಕೃಷ್ಣರಾಜ್‌ ಶೆಟ್ಟಿ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಗೌರವ ಪ್ರಧಾನ ಕಾರ್ಯದರ್ಶಿ ಉದಯ ಎನ್‌. ಶೆಟ್ಟಿ ಅವರು ಸಂಸ್ಥೆಯ ವಾರ್ಷಿಕ ವರದಿ ಮಂಡಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ವಿನುತಾ ಎಸ್‌. ಶೆಟ್ಟಿ ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷ ಮೋಹಿತ್‌ ಎಂ. ಶೆಟ್ಟಿ ಅವರು ಆಯಾಯ ವಿಭಾಗದ ವಾರ್ಷಿಕ ವರದಿ ವಾಚಿಸಿದರು.

ವೇದಿಕೆಯಲ್ಲಿ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವೇಣುಗೋಪಾಲ್‌ ಎಂ. ಶೆಟ್ಟಿ, ಜತೆ ಕಾರ್ಯದರ್ಶಿಗಳಾದ ಸುಧಾಕರ ಆರ್‌. ಶೆಟ್ಟಿ ಮತ್ತು ಎನ್‌. ಹರಿಪ್ರಸಾದ್‌ ಶೆಟ್ಟಿ, ಜತೆ ಕೋಶಾಧಿಕಾರಿ ಪ್ರಸಾದ್‌ ಪಿ. ಶೆಟ್ಟಿ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ವೇಣುಗೋಪಾಲ್‌ ಎಂ. ಶೆಟ್ಟಿ ವಂದಿಸಿದರು. ವಿನೋದಾ ಚೌಟ ಅವರು ಪ್ರಾರ್ಥನೆಗೈದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವರ್ಷಾ ಕಾರ್ತಿಕ್‌ ಶೆಟ್ಟಿ ಹೆಗ್ಡೆ ಮತ್ತು ಶ್ರುತಿ ಅಡಪ ಅವರು ನಿರ್ವಹಿಸಿದರು.

ಸಭಾ ಕಾರ್ಯಕ್ರಮವನ್ನು ಸಿಎ ಕರುಣಾಕರ ಶೆಟ್ಟಿ ಮತ್ತು ಮಮತಾ ಶೆಟ್ಟಿ ಅವರು ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಸದಸ್ಯರು, ಮಕ್ಕಳು, ಮಹಿಳಾ ವಿಭಾಗದವರಿಂದ, ಯುವ ವಿಭಾಗದವರಿಂದ ನೃತ್ಯ ವೈವಿಧ್ಯ, ನಾಡಿನ ಸಂಸ್ಕೃತಿ-ಸಂಸ್ಕಾರಗಳನ್ನು ಬಿಂಬಿಸುವ ವಿವಿಧ ವಿನೋದಾವಳಿಗಳು ಪ್ರದರ್ಶನಗೊಂಡವು. ಸಮಾಜದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಬಂಟರ ಸಂಘ ಮುಂಬಯಿ ಪದಾಧಿಕಾರಿಗಳು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ದಾನಿಗಳು, ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮುಲುಂಡ್‌ ಬಂಟ್ಸ್‌ನ ಪದಾಧಿಕಾರಿಗಳು, ಯುವ ವಿಭಾಗ, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು-ಸದಸ್ಯೆಯರು ಸಮಾರಂಭದ ಯಶಸ್ಸಿಗೆ ಸಹಕರಿಸಿದರು. ಕೊನೆಯಲ್ಲಿ ಭೋಜನದ ವ್ಯವಸೆœಯನ್ನು ಆಯೋಜಿಸಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ಗುತ್ತುದ ಇಲ್‌É ಎಂದೇ ಪ್ರಸಿದ್ಧಿಯನ್ನು ಪಡೆದ ಮುಲುಂಡ್‌ ಬಂಟ್ಸ್‌ ನ ವಾರ್ಷಿಕೋತ್ಸವ ಸಂಭ್ರಮದಲ್ಲಿ ಪಾಲ್ಗೊಳ್ಳುವುದೇ ಒಂದು ರೀತಿಯ ಕಣ್ಣಿಗೆ ಹಬ್ಬ. ಪ್ರತೀ ವರ್ಷ ವೇದಿಕೆಯನ್ನು ಒಂದಲ್ಲ ಒಂದು ರೀತಿಯಲ್ಲಿ ಅಲಂಕರಿಸಿ ಸಾಂಸ್ಕೃತಿಕ ವೈಭವವನ್ನು ಸಾರುವ  ಮುಲುಂಡ್‌ ಬಂಟ್ಸ್‌ನ ಪ್ರಸ್ತುತ ವರ್ಷದ ಸಂಭ್ರಮದಲ್ಲಿ ವೇದಿಕೆಯು ಪಾಲ್ಗೊಂಡ ಸಮಾಜ ಬಾಂಧವರ ಕಣ್ಣು ಕುಕ್ಕುವಂತಿತ್ತು. ವಿವಿಧ ಹೂವುಗಳಿಂದ ಹಾಗೂ ನಾಡಿನ ಸಂಸ್ಕೃತಿಯನ್ನು ಸಾರುವ ಪ್ರತಿಕೃತಿಗಳಿಂದ ವೇದಿಕೆಯು ಕಂಗೊಳಿಸಿ, ರಾಜರ ಆಸ್ಥಾನವನ್ನು ನೆನಪಿಸುವಂತಿತ್ತು. ಅದಕ್ಕೆ ತಕ್ಕಂತೆ ಸದಸ್ಯ ಬಾಂಧವರಿಂದ ವೈವಿಧ್ಯಮಯ ಜಾನಪದ, ಪೌರಾಣಿಕ ನೃತ್ಯಗಳು, ವಿವಿಧ ವಿನೋದಾವಳಿಗಳು  ಸಮಾಜ ಬಾಂಧವರನ್ನು ರಂಜಿಸಿದವು. ಒಟ್ಟಿನಲ್ಲಿ ಮುಲುಂಡ್‌ ಬಂಟ್ಸ್‌ ಬಂಟ ಸಮಾಜದ ಗುತ್ತುದ ಇಲ್‌É ಎಂಬುವುದನ್ನು ಮತ್ತೂಮ್ಮೆ ಸಾಬೀತುಪಡಿಸಿತು.

ಮುಲುಂಡ್‌ ಬಂಟ್ಸ್‌ ಕಳೆದ 12 ವರ್ಷಗಳಿಂದ ಸಮಾಜಪರ ಕಾರ್ಯಕ್ರಮಗಳನ್ನು ಮಾಡುತ್ತಾ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಸಂಸ್ಥೆಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳ ಶ್ರಮದಿಂದಾಗಿ ಮುಂಬಯಿಯಲ್ಲಿ ಒಂದು ಪ್ರತಿಷ್ಠಿತ ಮತ್ತು ಮಾದರಿ ಸಂಸ್ಥೆಯಾಗಿ ಮುಲುಂಡ್‌ ಬಂಟ್ಸ್‌ ಗುರುತಿಸಿಕೊಂಡಿದೆ. ಪರಿಸರದ ಸಮಾಜ ಬಾಂಧವರನ್ನು ಒಂದುಗೂಡಿಸಿ ಅವರಕಷ್ಟ-ಸುಖಗಳಲ್ಲಿ ಭಾಗವಹಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ. ನಮ್ಮ ಮಕ್ಕಳಿಗೆ ನಮ್ಮ ಸಮಾಜದ ಬಗ್ಗೆ ತಿಳಿಯಬೇಕಾದ ಅಗತ್ಯತೆಯಿದ್ದು, ಅವರು ಅಂತರ್‌ ಜಾತೀಯ ವಿವಾಹಕ್ಕೆ ಬಲಿಯಾಗದಂತೆ ನಾವು ಎಚ್ಚರಿಕೆ ವಹಿಸಬೇಕು. ನಮ್ಮ ಸಮಾಜದ ಸಂಸ್ಕೃತಿ, ಸಂಸ್ಕಾರಗಳು, ಆಚಾರ-ವಿಚಾರಗಳು ಇಂದು ಮರೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಸಮಾಜದ ಸಂಘಟನೆಗಳು ಎಚ್ಚರಿಕೆ ವಹಿಸಬೇಕು. ಸಂಸ್ಥೆಯ ಮುಂದಿನ ಎಲ್ಲಾ ಯೋಜನೆ-ಯೋಚನೆಗಳಿಗೆ ಸಮಾಜ ಬಾಂಧವರ ಪ್ರೋತ್ಸಾಹ, ಸಹಕಾರ ಸದಾಯಿರಲಿ –
 ಪ್ರಕಾಶ್‌ ಶೆಟ್ಟಿ ಹುಂತ್ರಿಕೆ (ಅಧ್ಯಕ್ಷರು: ಮುಲುಂಡ್‌ ಬಂಟ್ಸ್‌).

ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.