ಬಂಟ ವಧು-ವರರ ಚಾವಡಿ ವಧು-ವರರ ಸಮಾವೇಶ ಪೂರ್ವಭಾವಿ ಸಭೆ
Team Udayavani, Jul 11, 2018, 3:18 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮ್ಯಾರೇಜ್ ಸೆಲ್‌ನ ಕಾರ್ಯಾಧ್ಯಕ್ಷ ಸುರೇಶ್ ಎನ್. ಶೆಟ್ಟಿ ನೇತೃತ್ವದಲ್ಲಿ ಬಂಟ ವಧು-ವರ ಚಾವಡಿ ವತಿಯಿಂದ ವಿಶೇಷ ಸಭೆಯು ಮುಲುಂಡ್ ಪೂರ್ವದ ಹೊಟೇಲ್ ಬಾನ್ಸೂರಿ ಸಭಾಂಗಣದಲ್ಲಿ ನಡೆಯಿತು.
ಬಂಟ ಸಮಾಜದಲ್ಲಿ ವಧು-ವರರ ಹುಡುಕಾಟದಲ್ಲಿರುವವರಿಗೆ ಹಲವಾರು ಸಮಸ್ಯೆಗಳ ಎದುರಾಗುತ್ತಿದ್ದು, ಇದನ್ನು ಶಮನಗೊಳಿಸುವ ಮತ್ತು ಸಮಾಜ ಬಾಂಧವರಿಗೆ ಸಹಕರಿಸುವ ಉದ್ದೇಶದಿಂದ ಬಂಟ ವಧು-ವರ ಸಮಾವೇಶವೊಂದನ್ನು ಆಯೋಜಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಮಾರ್ಗದರ್ಶನದಲ್ಲಿ ಈ ಸಮಾವೇಶನ್ನು ನಡೆಸುವುದಾಗಿ ಸದಸ್ಯ ಬಾಂಧವರು ಸಭೆಯಲ್ಲಿ ನಿರ್ಧರಿಸಿದರು.
ಆ. 15 ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 3 ರವರೆಗೆ ವಧು-ವರರ ಚಾವಡಿಯ ವತಿಯಿಂದ ಬಂಟ ವಧು-ವರರ ಸಮಾವೇಶವು ಕುರ್ಲಾ ಪೂರ್ವದ ಬಂಟರ ಭವನದಲ್ಲಿರುವ ಮುಕ್ತಾನಂದ ಸಭಾಗೃಹದಲ್ಲಿ ಆಯೋಜಿಸಲಾಗುವುದೆಂದು ಸಭೆಯಲ್ಲಿ ಒಮ್ಮತದಿಂದ ನಿರ್ಧರಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಬಾನ್ಸುರಿ ಹೊಟೇಲ್‌ನ ಮಾಲಕ ರತ್ನಾಕರ ಶೆಟ್ಟಿ ಅವರು ಉಪಸ್ಥಿತರಿದ್ದರು.
ಮಂಜುನಾಥ ಶೆಟ್ಟಿ, ಸನ್‌ಜಿತ್ ಶೆಟ್ಟಿ, ಮನೋಹರ ಶೆಟ್ಟಿ, ಮಮತಾ ಶೆಟ್ಟಿ ಹಾಗೂ ಶಶಿಕಾಂತಿ ಶೆಟ್ಟಿ ಅವರು ಸಲಹೆ-ಸೂಚನೆಗಳನ್ನು ನೀಡಿದರು. ವಧು-ವರರ ಚಾವಡಿಯಲ್ಲಿ ಭಾಗವಹಿಸಲಿಚ್ಛಿಸುವ ಪೋಷಕರು ಹಾಗೂ ವಧುವರರು ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳತಕ್ಕದ್ದು. ಮಾಹಿತಿಗಾಗಿ ಮಮತಾ ಶೆಟ್ಟಿ (9821225597), ಶಶಿಕಾಂತಿ ಶೆಟ್ಟಿ (9768661090) ಇವರನ್ನು ಸಂಪರ್ಕಿಸುವಂತೆ ಸಭೆಯಲ್ಲಿ ತಿಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.