ಬಂಟ್ಸ್‌ ಫೋರಂ ಮೀರಾ-ಭಾಯಂದರ್‌ ವಾರ್ಷಿಕ ಕ್ರೀಡೋತ್ಸವ ಸಮಾರಂಭ


Team Udayavani, Feb 22, 2019, 3:14 PM IST

2102mum02.jpg

ಮುಂಬಯಿ: ಮಕ್ಕಳನ್ನು ಪಾಲಕರು ಎಳೆಯ ವಯಸ್ಸಿನಲ್ಲೇ ಕ್ರೀಡೆಯಲ್ಲಿ ತೊಡಗಿಸಿ ಕ್ರೀಡಾಸಕ್ತಿಯನ್ನು ಬೆಳೆಸಬೇಕು. ಆರೋಗ್ಯದ ಹಿತದೃಷ್ಟಿಯಿಂದಲೂ ಕ್ರೀಡೆಗೆ ಪ್ರಾಮುಖ್ಯತೆ ಇದೆ. ನಾವು ಶಿಕ್ಷಣಕ್ಕೆ ಎಷ್ಟು ಪ್ರಾಮುಖ್ಯತೆ ನೀಡುತ್ತೇವೆಯೋ ಅಷ್ಟೇ ಪ್ರಾಮುಖ್ಯತೆ ಕ್ರೀಡೆಗೂ ನೀಡ ಬೇಕು. ಕ್ರೀಡಾಪಟುಗಳಿಗೆ ಇಂದು ಜಗತ್ತಿನಾದ್ಯಂತ ಉತ್ತಮ ಸ್ಥಾನಮಾನ ಇದೆ. ಈ ನಿಟ್ಟಿನಲ್ಲಿ ಬಂಟ್ಸ್‌ ಫೋರಂ ಪ್ರತೀ ವರ್ಷ ಕ್ರೀಡಾಪಟುಗಳನ್ನು ತಯಾರಿಸಿ ಅವರ ಮುಂದಿನ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗುತ್ತಿದೆ ಎಂದು ಮೀರಾ-ಭಾಯಂದರ್‌ ಹೊಟೇಲ್‌ ಅಸೋಸಿಯೇಶನ್‌ ಅಧ್ಯಕ್ಷ ತಾಳಿಪಾಡಿಗುತ್ತು ರತ್ನಾಕರ ಶೆಟ್ಟಿ ನುಡಿದರು.

ಫೆ. 10ರಂದು ಬಂಟ್ಸ್‌ ಫೋರಂ ಮೀರಾ-ಭಾಯಂದರ್‌ ಸ್ಥಳೀಯ ಮೈದಾನದಲ್ಲಿ ಆಯೋಜಿಸಿದ್ದ ವಾರ್ಷಿಕ ಕ್ರೀಡೋತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ವಿಜೇತ ಸ್ಪರ್ಧಿಗಳನ್ನು ಅಭಿನಂದಿಸಿ ಶುಭಹಾರೈಸಿದರು.

ದಹಿಸರ್‌ ಶ್ರೀ ದುರ್ಗಾಪರಮೇಶ್ವರಿ ಶನೀಶ್ವರ ಮಂದಿರದ ಪುರೋಹಿತ‌ ಶಂಕರಗುರು ಭಟ್‌ ಹಾಗೂ ಗುರು ಶಂಕರ್‌ ಭಟ್‌ ಅವರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಪ್ರಶಂಸಿಸಿ ಹಾರೈಸಿದರು.

ಅತಿಥಿಯಾಗಿ ಆಗಮಿಸಿದ ಕ್ರೀಡಾಪಟು ದಿನೇಶ್‌ ಗಣೇಶ್‌ ಹೆಗ್ಡೆ ಮಾತನಾಡಿ, ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಮಕ್ಕಳಿಗೆ ಹಾಗೂ ಯುವಕರಿಗೆ ಕ್ರೀಡೆಯ ಬಗ್ಗೆ ಪ್ರೋತ್ಸಾಹ ನೀಡಿ ಪ್ರತೀ ವರ್ಷ ಕ್ರೀಡೋತ್ಸವ ನಡೆಸುತ್ತಿರುವ ಬಂಟ್ಸ್‌ ಫೋರಂ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ಅಭಿನಂದಿಸಿದರು.

ಸಂಸ್ಥೆಯ ಯುವ ವಿಭಾಗದ ಕಾರ್ಯಾಧ್ಯಕ್ಷ ಉದಯ ಎಂ. ಶೆಟ್ಟಿ ಮಾತನಾಡಿ, ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಅವರ ಮುಂದಿನ ಶಿಕ್ಷಣಕ್ಕೆ ಇಂದು ನೀಡಿರುವ ಪ್ರಮಾಣಪತ್ರ ಸಹಕಾರಿಯಾಗುತ್ತದೆ. ಮುಂಬರುವ ವರ್ಷಗಳಲ್ಲಿ ಕೆಲವೊಂದು ಕ್ರೀಡಾ ತರಬೇತಿಗೊಂಡಂತಹ ಕಾರ್ಯಕ್ರಮವನ್ನು ಮಕ್ಕಳಿಗೆ ನೀಡಲು ಸಂಸ್ಥೆಯು ಚಿಂತನೆ ನಡೆಸುತ್ತಿದೆ ಎಂದರು.

ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ಜಯಪ್ರಕಾಶ್‌ ಆರ್‌. ಭಂಡಾರಿ ಮಾತನಾಡಿ, ಅಚ್ಚುಕಟ್ಟಾಗಿ ನಡೆದ ಕ್ರೀಡಾಕೂಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಲ್ಲಾ ಸದಸ್ಯರು ಒಟ್ಟಾಗಿ ಒಮ್ಮತದಿಂದ ಸಂಸ್ಥೆಯನ್ನು ಮುನ್ನಡೆಸಬೇಕು ಎಂದರು.

ಗೌರವಾಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ ಮಾತನಾಡಿ, ಕ್ರೀಡಾಕೂಟದ ಮೂಲ ಉದ್ದೇಶ ಪರಿಸರದ ಸಮಾಜ ಬಾಂಧವರನ್ನು ಒಟ್ಟುಗೂಡಿಸಿ ಕೌಟುಂಬಿಕ ಪರಿಚಯದ ದೃಷ್ಟಿಯಿಂದ ಕ್ರೀಡೆಗೆ ಮಹತ್ವ ಇದೆ. ಸೋಲು-ಗೆಲುವು ಎಂಬ ಭಾವನೆ ಮನಸ್ಸಿನಲ್ಲಿ ಇಡದೆ ಎಲ್ಲರೂ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಸ್ಥೆಗೆ ಸಹಕರಿಸಬೇಕು ಎಂದು ನುಡಿದರು.

ಬಂಟ್ಸ್‌ ಫೋರಂನ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಮಾತನಾಡಿ, ಯಶಸ್ವಿಯಾಗಿ ಕ್ರೀಡಾಕೂಟವನ್ನು ನಡೆಸಿಕೊಟ್ಟ ಎಲ್ಲಾ ಸದಸ್ಯರಿಗೂ ಕೃತಜ್ಞತೆ ಸಲ್ಲಿಸಿ, ಮುಂದೆಯೂ ಇದೇ ರೀತಿ ಸಂಸ್ಥೆಯ ಕಾರ್ಯಕಲಾಪಗಳಲ್ಲಿ ಭಾಗಿಯಾಗಿ ಸಹಕರಿಸಬೇಕು. ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲ ಸದಸ್ಯರನ್ನು ಹಾಗೂ ಮಕ್ಕಳನ್ನು ಅಭಿನಂದಿಸಿದರು.

ಬೆಳಗ್ಗೆ ಉದ್ಯಮಿ ದಯಾನಂದ ಶೆಟ್ಟಿ ಕೆರಮಾ ಮಾಗಂದಾಡಿ ಇವರು ದೀಪಪ್ರಜ್ವಲಿಸಿ ಬಲೂನ್‌ ಹಾರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ವಯೋಮಿತಿಗೆ ಅನುಗುಣವಾಗಿ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಮಹಿಳೆಯರ ತ್ರೋಬಾಲ್‌, ಪುರುಷರಿಗೆ ಕ್ರಿಕೆಟ್‌ ಪಂದ್ಯಾಟ ನಡೆಯಿತು.

ತ್ರೋಬಾಲ್‌ನಲ್ಲಿ 7 ತಂಡಗಳು ಭಾಗವಹಿಸಿದ್ದು, ಸುಜಾತಾ ನೈನ್‌ ತಂಡ ಪ್ರಥಮ, ಪುರುಷರ ಕ್ರಿಕೆಟ್‌ನಲ್ಲಿ 7 ತಂಡಗಳು ಭಾಗವಹಿಸಿದ್ದು, ಹರೀಶ್‌ ಕಾಪು ಇಲೆವೆನ್‌ ತಂಡ ಪ್ರಥಮ ಬಹುಮಾನ ಪಡೆಯಿತು. ವಿಜೇತ ಸ್ಪರ್ಧಿಗಳನ್ನು ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. ಗಣ್ಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಶೈಲೇಶ್‌ ಶೆಟ್ಟಿ, ವಿನಯ್‌ ಶೆಟ್ಟಿ, ಸತೀಶ್‌ ಶೆಟ್ಟಿ, ಪ್ರಸಾದ್‌ ಹೆಗ್ಡೆ, ರಮಾನಂದ ಶೆಟ್ಟಿ, ನಿತಿನ್‌ ಶೆಟ್ಟಿ, ಧೀರಜ್‌ ಶೆಟ್ಟಿ, ಕಿಶೋರ್‌ ಶೆಟ್ಟಿ, ವಿಜಯಲಕ್ಷ್ಮೀ ಡಿ. ಶೆಟ್ಟಿ, ಸುಜಾತಾ ಶೆಟ್ಟಿ, ಪ್ರತಿಭಾ ಶೆಟ್ಟಿ, ಸುಲೋಚನಾ ಶೆಟ್ಟಿ, ವನಿತಾ ಶೆಟ್ಟಿ, ಸುನೀತಾ ಶೆಟ್ಟಿ, ರೇಖಾ ಶೆಟ್ಟಿ ಹಾಗೂ ಯುವ  ವಿಭಾಗದ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ಪದಾಧಿಕಾರಿಗಳು ಸಹಕರಿಸಿದರು.

ಕಾರ್ಯದರ್ಶಿ ಹರ್ಷಕುಮಾರ್‌ ಡಿ. ಶೆಟ್ಟಿ ಸ್ವಾಗತಿಸಿದರು. ಜತೆ ಕಾರ್ಯದರ್ಶಿ ಅನಿಲ್‌ ಆರ್‌. ಶೆಟ್ಟಿ ವಂದಿಸಿದರು. ಶುಭದೀಪ್‌ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರ. ವೇದಿಕೆಯಲ್ಲಿ ಸಂಚಾಲಕ ಶಿರ್ಲಾಲ್‌ ದಿವಾಕರ ಶೆಟ್ಟಿ, ಉಪಾಧ್ಯಕ್ಷ ಮನ್ಮಥ ಕಡಂಬ, ಕೋಶಾಧಿಕಾರಿ ರಮೇಶ್‌ ಎ. ಶೆಟ್ಟಿ, ಮಹಿಳಾ ವಿಭಾಗದ ಸುಮತಿ ಆರ್‌. ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.