ಬಂಟ್ಸ್ ಉನ್ನತ ಶಿಕ್ಷಣ ನೈಟ್ ಕಾಲೇಜು: ವಾರ್ಷಿಕೋತ್ಸವ
Team Udayavani, Jan 27, 2019, 3:42 PM IST
ನವಿಮುಂಬಯಿ: ಬೋಂಬೆ ಬಂಟ್ಸ್ ಅಸೋಸಿಯೇಶನ್ ಬಂಟ್ಸ್ ಕಾಲೇಜ್ ಆಫ್ ಹೈಯರ್ ಎಜುಕೇಶನ್ – ನೈಟ್ ಕಾಲೇಜು ಜೂಯಿನಗರ ಇದರ ವಾರ್ಷಿಕೋತ್ಸವ ಸಂಭ್ರಮವು ಜ. 19ರಂದು ಅಸೋಸಿಯೇಶನ್‌ನ ಬಂಟ್ಸ್ ಸೆಂಟರ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬೋಂಬೆ ಬಂಟ್ಸ್ ಅಸೋಸಿ ಯೇಶನ್‌ನ ಹಿಂದಿನ ಅಧ್ಯಕ್ಷರಾದ ಜಯರಾಮ ಎಸ್. ಮಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಮಾರಂಭವು ಸರಸ್ವತಿ ಪೂಜೆಯೊಂದಿಗೆ ಪ್ರಾರಂಭವಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಎಸ್. ಎಸ್. ಭಂಡಾರಿ ಅವರು ಬಂಟ್ಸ್ ರಾತ್ರಿ ಕಾಲೇಜಿನ ಸಿದ್ಧಿ-ಸಾಧನೆಗಳನ್ನು ವಿವರಿಸಿ ಪಿಪಿಟಿಯೊಂದಿಗೆ ವಾರ್ಷಿಕ ವರದಿಯನ್ನು ಓದಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಜಯರಾಮ ಎಸ್. ಮಲ್ಲಿ ಅವರನ್ನು ಬೋಂಬೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಸುಭಾಷ್ ಬಿ. ಶೆಟ್ಟಿ ಮತ್ತು ವೇದಿಕೆಯಲ್ಲಿದ್ದ ಎಲ್ಲ ಗಣ್ಯರು ಸಮ್ಮಾನಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರು ನೈಟ್ ಕಾಲೇಜಿನ ಕಾರ್ಯಚಟುವಟಿಕೆ ಮತ್ತು ಪ್ರಗತಿಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಮುಖ್ಯ ಅತಿಥಿ ಜಯರಾಮ ಮಲ್ಲಿ ಅವರು ವರದಿ ಮತ್ತು ಪ್ರಾಂಶುಪಾಲರಿಂದ ಪ್ರಸ್ತುತಪಡಿಸಿದ ಪಿಪಿಟಿ ಮತ್ತು ವಿದ್ಯಾರ್ಥಿಗಳು ಹಾಗೂ ಸಿಬಂದಿಗಳ ಪ್ರಯತ್ನವನ್ನು ಶ್ಲಾಘಿಸಿದರು, ವಿದ್ಯಾರ್ಥಿಗಳಿಗೆ ಒಳ್ಳೆಯ ವಾತಾವರಣ ಕಲ್ಪಿಸಿಕೊಡಬೇಕು. ಶಿಕ್ಷಣವು ಉದ್ಯೋಗ ಆಧಾರಿತವಾಗಿರಬೇಕು. ಕಾಲೇಜಿನ ಉತ್ತಮ ಫಲಿತಾಂಶವನ್ನು ಕಂಡಾಗ ಸಂತೋಷವಾಗುತ್ತಿದೆ ಎಂದು ನುಡಿದರು.
ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸ್ವಾಗತ ನೃತ್ಯ, ಗಾಯನ, ಕಿರು ನಾಟಕ ಮತ್ತು ಫ್ಯಾಷನ್ ಶೋ ಹೀಗೆ ವಿವಿಧ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಂದ ನಡೆದವು. ಗಣ್ಯರು ಪ್ರತಿಭಾವಂತ ಮಕ್ಕಳನ್ನು ಗೌರವಿಸಿದರು. ಶೈಕ್ಷಣಿಕ, ಕಲೆ, ಸಂಸ್ಕೃತಿ, ಕ್ರೀಡೆ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವ ಉದ್ದೇಶದಿಂದ ಪ್ರಶಸ್ತಿ ವಿತರಣಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಮಹಾ ವಿದ್ಯಾಲಯದ ಪ್ರಾಂಶುಪಾಲರು, ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿಗಳು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.
ಸಂಸ್ಥೆಯ ಪದಾಧಿಕಾರಿಗಳಾದ ನ್ಯಾಯವಾದಿ ಅಶೋಕ್ ಡಿ . ಶೆಟ್ಟಿ, ನ್ಯಾಯವಾದಿ ರತ್ನಾಕರ ವಿ. ಶೆಟ್ಟಿ, ಮುರಳಿ ಕೆ. ಶೆಟ್ಟಿ, ಶ್ರೀಧರ ಕೆ. ಶೆಟ್ಟಿ , ಸಿಎ ಸುರೇಂದ್ರ ಕೆ. ಶೆಟ್ಟಿ, ಸಿಎ ವಿಶ್ವನಾಥ ಎಸ್. ಶೆಟ್ಟಿ, ಶಾರದಾ ಎಸ್. ಶೆಟ್ಟಿ, ಚರಣ್ ಆರ್. ಶೆಟ್ಟಿ ಹಾಗೂ ಕಾಲೇಜಿನ ಸ್ಟೂಡೆಂಟ್ಸ್ ಕೌನ್ಸಿಲ್ ಅಧ್ಯಕ್ಷ ಕೋಮಲ್ ಪಾಟೀಲ್ ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು, ಪಾಲಕ-ಪೋಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.