ಬಂಟರ ಸಂಘ:ಸಾಂಸ್ಕೃತಿಕ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Team Udayavani, Apr 20, 2018, 1:24 PM IST

200.jpg

ಮುಂಬಯಿ: ನಗರದ ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಸ್ಥೆ ಬಂಟರ ಸಂಘ ಮುಂಬಯಿ ಇದರ ವಾರ್ಷಿಕ ಸ್ನೇಹ ಸಮ್ಮಿಲನ ಮತ್ತು ವಿಶಿಷ್ಟ ಬಂಟ ಸಾಧಕರಿಗೆ ಸಮ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಎ. 14 ರಂದು ದಿನವಿಡೀ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ಇದೇ ಸಂದರ್ಭದಲ್ಲಿ ನಡೆದ ಸಂಘದ ಮಹಿಳಾ ವಿಭಾಗ, ಯುವ ವಿಭಾಗ ಹಾಗೂ  ಒಂಬತ್ತು ಪ್ರಾದೇಶಿಕ ಸಮಿತಿಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಡೊಂಬಿವಲಿ ಪ್ರಾದೇಶಿಕ ಸಮಿತಿ ಪ್ರಥಮ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿ ದ್ವಿತೀಯ, ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿ ಮತ್ತು ಮೀರಾ-ಭಾಯಂದರ್‌ ಪ್ರಾದೇಶಿಕ ಸಮಿತಿಗಳು ತೃತೀಯ ಹಾಗೂ ಇತರ ಸಮಿತಿಗಳು ಸಮಾಧಾನಕರ ಬಹುಮಾನಗಳನ್ನು ಪಡೆದವು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ಸಂಜೆ ನಡೆದ ವಾರ್ಷಿಕ ಸ್ನೇಹ ಸಮ್ಮಿಲನದಲ್ಲಿ ಗಣ್ಯರ ಸಮ್ಮುಖದಲ್ಲಿ ವಿಜೇತ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಯಿತು.  ಮುಖ್ಯ ಅತಿಥಿಯಾಗಿ ಉದ್ಯಮಿ, ವಿಸ್ವಾತ್‌ ಕೆಮಿಕಲ್ಸ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಹಾಗೂ ಬಂಟರ ಸಂಘ ಮಾಜಿ ಅಧ್ಯಕ್ಷ ಬಿ. ವಿವೇಕ್‌ ಶೆಟ್ಟಿ, ಗೌರವ ಅತಿಥಿಯಾಗಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಇದರ ಸಿಇಒ ಹಾಗೂ ಆಡಳಿತ ನಿರ್ದೇಶಕ ರಾಜ್‌ಕಿರಣ್‌ ರೈ ಅವರು ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ, ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ, ಸಂಘದ ಕಾರ್ಯಕಾರಿ ಸಮಿತಿ  ಸದಸ್ಯರಿದ್ದರು.

ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ, ಸಂಘದ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈ ಕಾರ್ಯಕ್ರಮ ನಿರೂಪಿಸಿದರು. ಸಂಘದ ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರಿಂದ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷ ಕಲಾವೇದಿಕೆಯ ಸೌಜನ್ಯದೊಂದಿಗೆ ಬೀರೆ ದೇವು ಪೂಂಜೆ ತುಳು ಯಕ್ಷಗಾನ ಪ್ರದರ್ಶನಗೊಂಡಿತು. 

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.