ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ: ಸಾಧಕರಿಗೆ ಸಮ್ಮಾನ

ಸಂಘದ ಕಾರ್ಯಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಇದೆ: ಗೋಪಾಲ್‌ ಸಿ.ಶೆಟ್ಟಿ

Team Udayavani, Jun 13, 2019, 12:27 PM IST

1106MUM14

ಮುಂಬಯಿ: ಮುಂಬಯಿಯಂತಹ ಮಹಾನಗರದಲ್ಲಿ ಚುನಾವಣೆಯಲ್ಲಿ ನಿಂತು ಗೆಲ್ಲುವುದು ಅಷ್ಟೊಂದು ಸುಲಭದ ಮಾತಲ್ಲ. ಒಬ್ಬ ಸಾಮಾನ್ಯ ಕಾರ್ಮಿಕನ ಮಗನಾಗಿರುವ ನನಗೆ ಮುಂಬಯಿಗರು ನೀಡಿರುವ ಪ್ರೀತಿ, ವಿಶ್ವಾಸದ ಬಲದಿಂದ ನಾನಿಂದು ಸಮಾಜ ಸೇವೆ ಮಾಡಲು ಸಾಧ್ಯವಾಗಿದೆ. ನನ್ನನ್ನು ಮತ್ತೆ ಸಂಸದನಾಗಿ ತುಂಬು ಪ್ರೀತಿಯಿಂದ ಸ್ವೀಕರಿಸಿದ್ದೀರಿ. ಪ್ರಚಂಡ ಮತಗಳಿಂದ ಗೆಲ್ಲಿಸಿದ್ದೀರಿ. ಅದಕ್ಕಾಗಿ ಬಿಜೆಪಿ ಪಕ್ಷದ ಪರವಾಗಿ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಬಂಟ ಸಮುದಾಯದವನಾದ ನನಗೆ ಬಂಟರ ಶ್ರೀರಕ್ಷೆ ಇರುವುದರಿಂದಲೇ ಇದೆಲ್ಲವೂ ಸಾಧ್ಯವಾಗಿದೆ ಮುಂಬಯಿಯ ಹಿರಿಯ ಮುತ್ಸದ್ಧಿ, ಬಂಟರ ಸಂಘದ ಮಾಜಿ ಅಧ್ಯಕ್ಷ ಎಂ. ಡಿ. ಶೆಟ್ಟಿ ಅವರು ತನ್ನ 91ರ ಈ ವಯಸ್ಸಿನಲ್ಲೂ ಸಂಘದೊಂದಿಗೆ ಅನ್ಯೋನ್ಯ ಸಂಬಂಧವನ್ನು ಹೃದಯದಲ್ಲಿ ಇಂದಿಗೂ ಸ್ಥಿರವಾಗಿ ಇಟ್ಟುಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಅಭಿನಂದನೀಯ ಮತ್ತು ಅನುಕರಣೀಯವಾಗಿದೆ ಎಂದು ಉತ್ತರ ಮುಂಬಯಿ ಲೋಕಸಭಾ ಸಂಸದ, ಕನ್ನಡಿಗ ಗೋಪಾಲ್‌ ಸಿ. ಶೆಟ್ಟಿ ಅವರು ನುಡಿದರು.

ಜೂ. 9 ರಂದು ಬೆಳಗ್ಗೆ 10 ರಿಂದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಟಾರಿ ಸಭಾಗೃಹದಲ್ಲಿ ದಿ| ವಾಸು ಕೆ. ಶೆಟ್ಟಿ ಅವರ ಸ್ಮರಣಾರ್ಥ ಅವರ ಪುತ್ರ ಚರಿಷ್ಮಾ ಬಿಲ್ಡರ್ì ಲಿಮಿಟೆಡ್‌ನ‌ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಹದಿನೈದನೇ ಮೆಗಾ ಆರ್ಥಿಕ ಸಹಾಯ ಮೇಳ ಸಮಾರಂಭದಲ್ಲಿ ಸಂಘದ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದೇಶದೊಂದಿಗೆ ಪ್ರಜೆಗಳನ್ನು ಒಂದಗೂಡಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಅಸಾಧಾರಣ ಆಡಳಿತ ಚಾತುರ್ಯತೆಯನ್ನು ಶ್ಲಾಘಿಸಿದರು. ಸಂಘದ ಎಲ್ಲ ಸಮಾಜಪರ ಕಾರ್ಯಗಳನ್ನು ಹತ್ತಿರದಿಂದ ಬಲ್ಲವನಾಗಿದ್ದೇನೆ. ಸಂಘದ ಪ್ರತಿಯೊಂದು ಯೋಜನೆ-ಯೋಚನೆಗಳಿಗೆ ನನ್ನ ಪ್ರೋತ್ಸಾಹ, ಸಹಕಾರ ಸದಾಯಿದೆ ಎಂದರು.

ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಸಂಘದ ಮಾರ್ಗದರ್ಶಕ, ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್‌ ಸಿ. ಶೆಟ್ಟಿ ಮತ್ತು ಉಷಾ ಜಿ. ಶೆಟ್ಟಿ ದಂಪತಿ ಹಾಗೂ ಆದಾಯ ತೆರಿಗೆ ಇಲಾಖೆಯ ಉಪಾಯುಕ್ತೆ ಕು| ನಿವ್ಯಾ ಪಿ. ಶೆಟ್ಟಿ ಅವರನ್ನು ಅವರ ತಂದೆ ನ್ಯಾಯವಾದಿ ಪ್ರಕಾಶ್‌ ಶೆಟ್ಟಿ ಮತ್ತು ತಾಯಿ ನರ್ಮದಾ ಪ್ರಕಾಶ್‌ ಶೆಟ್ಟಿ ಅವರನ್ನೊಳಗೊಂಡು ಗಣ್ಯರ ಉಪಸ್ಥಿತಿಯಲ್ಲಿ, ಸಂಘದ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿದರು.

ಸಮ್ಮಾನಿತೆ ಆದಾಯ ತೆರಿಗೆ ಇಲಾಖೆಯ ಉಪಾಯುಕ್ತೆ ಕು| ನಿವ್ಯಾ ಪಿ. ಶೆಟ್ಟಿ ಅವರು ಮಾತನಾಡಿ, ಬಂಟರ ಸಂಘದಂತಹ ಮಹಾನ್‌ ಸಂಸ್ಥೆಯಲ್ಲಿ ಹಿರಿಯರ, ಗಣ್ಯಾಥಿ-ಗಣ್ಯರ ಮಧ್ಯೆ ಇಷ್ಟೊಂದು ಕಿರಿಯವಳಾದ ನನಗೆ ನೀಡಿದ ಪ್ರೀತಿ, ಗೌರವದ ಸಮ್ಮಾನಕ್ಕೆ ತಲೆಬಾಗುತ್ತೇನೆ. ಶಿಕ್ಷಣ ಎಂಬುವುದು ಕೇವಲ ಅಂಕ ಪಡೆದು ಪದವಿ, ಪಿಎಚ್‌ಡಿ ಪಡೆಯುದಕ್ಕಲ್ಲ. ಶಿಕ್ಷಣದಿಂದ ಗೌರವಯುತ ಬದುಕನ್ನು ರೂಪಿಸಲು ಕಲಿಯಬೇಕು. ಹಾಗಾದಾಗ ಮಾತ್ರ ನಾವು ಕಲಿತ ಶಿಕ್ಷಣಕ್ಕೆ ನಿಜವಾದ ಬೆಲೆ ದೊರೆಯುತ್ತದೆ. ಜೀವನದಲ್ಲಿ ಪರಿಶ್ರಮ, ಸತತ ಫಲ ಇರಬೇಕು. ದೂರದೃಷ್ಟಿ ಹೊಂದಿರಬೇಕು. ಸ್ಫರ್ಧಾತ್ಮಕ ಯುಗದಲ್ಲಿರುವ ನಾವು ಹೊಸ ಹೊಸ ಚಿಂತನೆಗಳ ಮೂಲಕ ಯಶಸ್ಸಿನ ದಾರಿಯನ್ನು ಸುಗಮಗೊಳಿಸಲು ಪ್ರಯತ್ನಿಸಬೇಕು ಎಂದರು.

ಸಮಾರಂಭದ ವೇದಿಕೆಯಲ್ಲಿ ವಿಶೇಷ ಅತಿಥಿಯಾಗಿ ಕರ್ನಾಟಕ ದ ಶಾಸಕ ಸಿ. ಟಿ. ರವಿ, ಮುಖ್ಯ ಅತಿಥಿಯಾಗಿ ಫೆಡರೇಶನ್‌ ಆಫ್‌ ವರ್ಲ್ಡ್ ಬಂಟ್ಸ್‌ ಅಸೋಸಿಯೇಶನ್‌ ಇದರ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಗೌರವ ಅತಿಥಿಗಳಾಗಿ ಚರಿಷ್ಮಾ ಬಿಲ್ಡರ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ, ತುಂಗಾ ಗ್ರೂಪ್‌ ಆಫ್‌ ಹೊಟೇಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧಾಕರ ಎಸ್‌. ಹೆಗ್ಡೆ, ಎಸ್‌ವಿ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ ಮುರ್ಬಾಡ್‌ ಇದರ ವಿಶ್ವಸ್ಥ ಡಾ| ಸುರೇಂದ್ರ ವಿ. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ. ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ, ಕೋಶಾಧಿಕಾರಿ ಸುರೇಶ್‌ ಬಿ. ಶೆಟ್ಟಿ ಮರಾಠ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ ಅವರು ನಿವ್ಯಾರನ್ನು ಪರಿಚಯಿಸಿದರು. ಸಂಘದ ಮಾಜಿ ಅಧ್ಯಕ್ಷರುಗಳು, ವಿಶ್ವಸœರು, ವಿವಿಧ ಉಪಸಮಿತಿ ಗಳು, ಪ್ರಾದೇಶಿಕ ಸಮನ್ವಯಕರುಗಳು, ಪ್ರಾದೇಶಿಕ ಕಾರ್ಯಾಧ್ಯಕ್ಷರುಗಳು, ಮಹಿಳಾ ವಿಭಾಗ ಮತ್ತು ಯುವ ವಿಭಾಗ, ವಿವಿಧ ಬಂಟ ಸಂಘ-ಸಂಸ್ಥೆಗಳ ಪದಾಧಿಕಾರಿಗಳನ್ನು ಪುಷ್ಪಗುತ್ಛವನ್ನಿತ್ತು ಗೌರವಿಸಲಾಯಿತು.

ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ಶೆಟ್ಟಿ ವಂದಿಸಿದರು. ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಅವರು ಸಾಂಸ್ಕೃತಿಕ ಮತ್ತು ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಮಧ್ಯಾಹ್ನ ಉದ್ಯಮಿ ರಾಘು ಪಿ. ಶೆಟ್ಟಿ ಅವರ ನೇತೃತ್ವದಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ವಿವಿಧ ಪ್ರಾದೇಶಿಕ ಸಮಿತಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು.

ಟಾಪ್ ನ್ಯೂಸ್

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

6

Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.