ಬಂಟರ ಸಂಘ ಕುರ್ಲಾ-ಭಾಂಡೂಪ್ ಸಮಿತಿ: ಭಜನ ಸ್ಪರ್ಧೆ
Team Udayavani, Feb 18, 2018, 11:05 AM IST
ಮುಂಬಯಿ: ಮಹಿಳೆಯರಲ್ಲಿ ಪ್ರತಿಭಾವಂತರಿದ್ದು ಅವರಿಗೆ ಸರಿಯಾದ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ಸಮಿತಿಯ ಮಹಿಳಾ ಸದಸ್ಯೆಯರಿಗೆ ದಾಸರ ಪದಗಳ ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದು ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಭಜನೆಯಿಂದ ಧಾರ್ಮಿಕ ಚಿಂತನೆಯು ಬೆಳೆಯಲು ಸಾಧ್ಯವಾಗಿದ್ದು, ಇದರೊಂದಿಗೆ ನಮ್ಮ ನಾಡಿನ ಸಂಸ್ಕೃತಿ-ಸಂಸ್ಕಾರ, ಆಚಾರ-ವಿಚಾರಗಳು ಉಳಿದು, ಬೆಳೆಯಲು ಸಾಧ್ಯವಾಗುತ್ತದೆ ಎಂದು ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆ ರಮ್ಯಾ ಯು. ಶೆಟ್ಟಿ ಇವರು ನುಡಿದರು.
ಫೆ. 10 ರಂದು ಘಾಟ್‌ಕೋಪರ್ ಪಂತ್ ನಗರದಲ್ಲಿರುವ ಕನ್ನಡ ವೆಲ್ಫೆàರ್ ಸೊಸೈಟಿಯ ಮಹೇಶ್ ಎಸ್. ಶೆಟ್ಟಿ ಬಾಬಾಸ್ ಗ್ರೂಪ್ ಸಭಾಗೃಹದಲ್ಲಿ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದವರು ಆಯೋಜಿಸಿದ್ದ ದಾಸರ ಪದಗಳ ಗಾಯನ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸುವ ಗುಣವನ್ನು ಸ್ಪರ್ಧಿಗಳು ಬೆಳೆಸಿಕೊಳ್ಳಬೇಕು. ಸ್ಪರ್ಧೆಯಲ್ಲಿ ಸ್ಥಳೀಯ ಸಮಿತಿಗೆ ಒಳಪಟ್ಟ ವಿವಿಧೆಡೆಗಳಿಂದ ಮಹಿಳೆಯರು ಆಗಮಿಸಿದ್ದು, ಸಂತೋಷ ತಂದಿದೆ. ಇದು ನಮ್ಮೆಲ್ಲರ ಒಗ್ಗೂಡುವಿಕೆಗೆ ಒಂದು ರೀತಿಯ ವೇದಿಕೆಯನ್ನು ನೀಡಿದಂತಾಗಿದೆ. ಮಹಿಳಾ ವಿಭಾಗದವರ ಪ್ರಪ್ರಥಮ ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿರುವುದು ನನಗೆ ಬಹಳಷ್ಟು ಸಂತೋಷವಾಗಿದೆ. ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ ನಿಮ್ಮೆಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ಆಶಿಸಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆ ಇವರು ಮಾತನಾಡಿ, ಬಂಟರು ಕ್ರಿಯಾಶೀಲ ಮನೋಭಾವನೆ ಹೊಂದಿದವರು. ಅವರು ತಮ್ಮ ಪ್ರತಿಭೆಯೊಂದಿಗೆ ಹೋದಲ್ಲೆಲ್ಲ ತಮ್ಮದೇ ಆದ ಸಾಧನೆಯನ್ನು ಮಾಡಿದವರು. ಭಜನೆ ಇತ್ಯಾದಿ ಆಧ್ಯಾತ್ಮಿಕ ಚಿಂತನೆಗಳಿಂದ ಮಾನಸಿಕವಾಗಿ ಮಹಿಳೆಯರು ಬಲಾಡ್ಯರಾಗಲು ಸಾಧ್ಯವಾಗುತ್ತದೆ. ಪ್ರೀತಿ, ಸೌಹಾದìತೆಯಿಂದ ಸಮಾಜದ ಮಹಿಳೆಯರು ಅನ್ಯೋನ್ಯತೆಯಿಂದ ಇಂತಹ ಕಾರ್ಯಕ್ರಮಗಳಲ್ಲಿ ಒಗ್ಗೂಡುವುದರಿಂದ ಸಂಘಟನೆ ಬಲಗೊಳ್ಳಲು ಸಾಧ್ಯವಾಗುತ್ತದೆ. ಇಂದಿನ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರು ವಿಜೇತರೇ ಆಗಿದ್ದಾರೆ ಎಂದು ನುಡಿದು ಸ್ಪರ್ಧಿಗಳನ್ನು ಅಭಿನಂದಿಸಿದರು.
ಬಂಟರ ಸಂಘದ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಇವರು ಮಾತನಾಡಿ, ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದವರಿಂದ ದಾಸರ ಭಜನೆ ಸ್ಪರ್ಧೆಯಂತಹ ಉತ್ತಮ ಕಾರ್ಯಕ್ರಮಗಳು ನಡೆದಿರುವುದು ಅಭಿನಂದನೀಯ. ಮಹಿಳೆಯರಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಾಗುತ್ತದೆ. ಭವಿಷ್ಯದಲ್ಲಿ ಇನ್ನಷ್ಟು ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯಲಿ. ನಮ್ಮ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದು ನುಡಿದರು.
ದಾಸರ ಸ್ಪರ್ಧೆಯ ತೀರ್ಪುಗಾರರಾಗಿ ಜಯಲಕ್ಷ್ಮೀ ಜಗನ್ನಾಥ್ ಶೆಟ್ಟಿ, ಪ್ರಶಾಂತಿ ದಿವಾಕರ ಶೆಟ್ಟಿ ಇವರು ಸಹಕರಿಸಿದರು. ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸಿಎ ವಿಶ್ವನಾಥ ಶೆಟ್ಟಿ ಅವರು ಮಾತನಾಡಿ, ಇಂದು ಇಲ್ಲಿಗೆ ನಮ್ಮ ಮಾತೃ ಸಂಸ್ಥೆ ಬಂಟರ ಸಂಘದ ಮುಖ್ಯ ಮಹಿಳಾ ವಿಭಾಗದ ಪದಾಧಿಕಾರಿಗಳು ನಮ್ಮ ಸಣ್ಣ ಕಾರ್ಯಕ್ರಮಕ್ಕೆ ದೊಡ್ಡ ಮನಸ್ಸಿನಿಂದ ಆಗಮಿಸಿದ್ದಾರೆ. ಅವರೆಲ್ಲರಿಗೂ ನಮ್ಮ ಅಭಿನಂದನೆಗಳು ಮತ್ತು ಕೃತಜ್ಞತೆಗಳು. ನಾನೋರ್ವ ಶಾಸ್ತಿÅàಯ ಸಂಗೀತದ ಅಭಿಮಾನಿಯಾಗಿದ್ದು, ಇಲ್ಲಿ ಜಾನಪದ, ದಾಸರ ಪದಗಳನ್ನು ಶಾಸ್ತಿÅàಯಬದ್ಧವಾಗಿ ಹಾಡಿದ ಎಲ್ಲರಿಗೂ ಅಭಿಂದನೆಗಳು. ಮಹಿಳೆಯರಿಗೆ ಸಂಕುಚಿತ ಮನೋಭಾವನೆ ಇರಕೂಡದು ಎಂದು ನುಡಿದು ವಿಜೇತ ಸ್ಪರ್ಧಿಗಳಿಗೆ ಅಭಿನಂದನೆ ಸಲ್ಲಿಸಿದರು.
ಅತಿಥಿ-ಗಣ್ಯರುಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಲಾಯಿತು. ಮಹಿಳಾ ವಿಭಾಗದ ಕಾರ್ಯದರ್ಶಿ ಅಮೃತಾ ಅಜಯ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಡಾ| ಪಲ್ಲವಿ ಶೆಟ್ಟಿ ವಂದಿಸಿದರು. ಸಮಿತಿಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆಯರು ಉಪಸ್ಥಿತರಿದ್ದರು.
ಸ್ಪರ್ಧಾ ಫಲಿತಾಂಶ
ದಾಸರ ಪದಗಳ ಭಜನ ಸ್ಪರ್ಧೆಯಲ್ಲಿ ಗೀತಾ ಸತೀಶ್ ಶೆಟ್ಟಿ ವಿಕ್ರೋಲಿ ಪ್ರಥಮ, ಜಯಶ್ರೀ ಶೆಟ್ಟಿ ದ್ವಿತೀಯ, ನಮಿತಾ ಶೆಟ್ಟಿ ತೃತೀಯ ಬಹುಮಾನ ಪಡೆದರು. ವಿಜೇತ ಸ್ಪರ್ಧಿಗಳಿಗೆ ಗಣ್ಯರ ಶಾಲು ಮತ್ತು ಸ್ಮರಣಿಕೆಯನ್ನಿತ್ತು ಗೌರವಿಸಿ ಶುಭಹಾರೈಸಿದರು. ಸುಮಾರು 25 ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.