ಬಂಟರ ಸಂಘ ಮೆಗಾ ಆರ್ಥಿಕ ಸಹಾಯ ವಿತರಣ ಸಮಾರಂಭ ಪೂರ್ವಭಾವಿ ಸಭೆ
Team Udayavani, Jun 1, 2018, 5:11 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಮಾರ್ಗದರ್ಶನದಲ್ಲಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ ಇವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಪದಾಧಿಕಾರಿಗಳ ಸಹಕಾರದೊಂದಿಗೆ ಜೂ. 10 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿರುವ ಮೆಗಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಆರ್ಥಿಕ ಸಹಾಯ ವಿತರಣ ಕಾರ್ಯಕ್ರಮ ನಡೆಯಲಿದ್ದು, ಇದರ ಪ್ರಯುಕ್ತ ಪೂರ್ವಭಾವಿ ಸಭೆಯು ಮೇ 30 ರಂದು ಬೆಳಗ್ಗೆ ಕುರ್ಲಾ ಪೂರ್ವದ ಬಂಟರ ಸಂಘದಲ್ಲಿ ಜರಗಿತು.
ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ವಿಚಾರ- ವಿನಿಮಯ ನಡೆಸಲಾಯಿತು. ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರು ಅಧ್ಯಕ್ಷತೆ ವಹಿಸಿದ್ದರು. ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ ಇವರು ಕಾರ್ಯಕ್ರಮದ ಬಗ್ಗೆ ಸಂಪೂರ್ಣ ವಿವರ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ, ದಕ್ಷಿಣ ಮತ್ತು ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕರಾದ ಡಾ| ಪ್ರಭಾಕರ ಶೆಟ್ಟಿ ಬಿ., ಇಂದ್ರಾಳಿ ದಿವಾಕರ್ ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್ ರೈ, ಬಂಟರವಾಣಿ ಸಂಪಾದಕ ಪ್ರೇಮನಾಥ್ ಬಿ. ಶೆಟ್ಟಿ ಮುಂಡ್ಕೂರು ಉಪಸ್ಥಿತರಿದ್ದರು. ಖಾಂದೇಶ್ ಭಾಸ್ಕರ್ ಶೆಟ್ಟಿ ಕೊನೆಯಲ್ಲಿ ವಂದಿಸಿದರು.
ಚಿತ್ರ-ವರದಿ. ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.