ಸಮಾಜದ ಏಳ್ಗೆಗಾಗಿ ದುಡಿಯುವ ತುಡಿತವಿರಬೇಕು: ಮೋಹನ್‌ದಾಸ್‌ ಶೆಟ್ಟಿ


Team Udayavani, Apr 25, 2022, 12:03 PM IST

Untitled-1

ಮುಂಬಯಿ: ಬಂಟರ ಸಂಘದ ಭಿವಂಡಿ- ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗವು ಅತ್ಯುತ್ತಮ ಕಾರ್ಯಕ್ರಮಗಳನ್ನು ಅಯೋಜಿಸುತ್ತಿದೆ. ಸಮಾಜಪರ ಕಾರ್ಯಗಳನ್ನು ಮಾಡಿ ಸಮಾಜದ ಏಳ್ಗೆಗೋಸ್ಕರ ದುಡಿಯುತ್ತಿದೆ. ಗಂಡು – ಹೆಣ್ಣು ಎಂಬುವುದು ಒಂದೇ ನಾಣ್ಯದ ಎರಡು ಮುಖಗಳು. ಸಮಾಜದ ಅಭಿವೃದ್ಧಿಯಲ್ಲಿ ಇಬ್ಬರು ಸಮಾನ ಪಾತ್ರ ವಹಿಸುತ್ತಾರೆ ಎಂದು ಬಂಟರ ಸಂಘ ಮುಂಬಯಿ ಉಪಾಧ್ಯಕ್ಷ ಉಳ್ತೂರು ಮೋಹನ್‌ ದಾಸ್‌ ಶೆಟ್ಟಿ ಹೇಳಿದರು.

ಕಲ್ಯಾಣ್‌ ಪಶ್ಚಿಮದ ಮಾತೋಶ್ರೀ ಸಭಾಗೃಹ ದಲ್ಲಿ ಬಂಟರ ಸಂಘ ಮುಂಬಯಿ ಇದರ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವತಿಯಿಂದ ಎ. 12ರಂದು ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಯುಗಾದಿ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಮಹಿಳಾಪರ ಕಾರ್ಯಕ್ರಮಗಳನ್ನು ಕಂಡಾಗ ಸಂತೋಷವಾಗುತ್ತಿದೆ. ಸಂಘದ ಸಹಾಯ, ಸಹಕಾರ ಸಮಿತಿಗೆ ಸದಾಯಿದೆ ಎಂದು ತಿಳಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಮಹಿಳೆಯರಿಗಾಗಿ ಸ್ಯಾನಿಟರಿ ಪ್ಯಾಡ್‌ನ‌ ಬಳಕೆ ಕುರಿತು ಧೀರಜ್‌ ನಗ್ರೆ ಹಾಗೂ ಮೋಹನ್‌ ಮುಲ್‌ ಚಂದಾನಿ ಅವರಿಂದ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಡಾ| ನಿಧಿ ಪಿ. ಶೆಟ್ಟಿ ಅವರು ಮಹಿಳೆಯರ ಆರೋಗ್ಯದ ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಾದೇಶಿಕ ಸಮಿತಿಯ ಮಹಿಳೆಯರಿಗಾಗಿ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಸಂಗೀತ ಸ್ಪರ್ಧೆ ಹಾಗೂ ಸದಸ್ಯೆಯರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ ಅತಿಥಿಯಾಗಿ ಪಾಲ್ಗೊಂಡ ಬಂಟರ ಸಂಘ ಮುಂಬಯಿ ಜತೆ ಕಾರ್ಯದರ್ಶಿ ದಿವಾಕರ್‌ ಶೆಟ್ಟಿ ಇಂದ್ರಾಳಿ  ಮಾತನಾಡಿ, ಹೆಣ್ಣು ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ಪ್ರತಿಯೊಂದು ಪಾತ್ರವನ್ನು ಸಮರ್ಥವಾಗಿ ನಿಭಾಯಿಸ ಬಲ್ಲಳು. ಅಂತಹ ಸ್ತ್ರೀ ಶಕ್ತಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳು ಎಂದರು.

ಮತ್ತೋರ್ವ ಅತಿಥಿ ಬಂಟರ ಸಂಘ ಮುಂಬಯಿ ಪೂರ್ವ ವಲಯ ಸಮನ್ವಯಕ ಸುಬ್ಬಯ್ಯ ಶೆಟ್ಟಿ ಮಾತನಾಡಿ, ಸ್ತ್ರೀ – ಪುರುಷರ ಸಮಾನತೆಗೆ ಪ್ರಾಮುಖ್ಯತೆ ನೀಡಬೇಕು. ಕೇವಲ ಒಂದು ದಿನ ಮಹಿಳೆಯರನ್ನು ಗೌರವಿಸದೇ, ವರ್ಷವಿಡೀ ಮಹಿಳೆ ಯರದ್ದೇ ದಿನವಾಗಿದ್ದು, ಅವರನ್ನು ಗೌರವಿಸು ತ್ತಿರಬೇಕು ಎಂದು ತಿಳಿಸಿ ಶುಭ ಹಾರೈಸಿದರು

ಮುಖ್ಯ ಅತಿಥಿಯಾಗಿದ್ದ ಬಂಟರ ಸಂಘ ಮುಂಬಯಿ  ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಕೃಷ್ಣ ಶೆಟ್ಟಿ ಮಾತನಾಡಿ, ತೊಟ್ಟಿಲು ತೂಗುವ ಕೈಗಳು ದೇಶವನ್ನು ಆಳಬಲ್ಲುದು. ಸ್ತ್ರೀ ಅಬಲೆಯಲ್ಲ ಸಬಲೆ ಎಂದು ತಿಳಿಸಿದರು. ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ವೈ. ಶೆಟ್ಟಿ ಮಾತನಾಡಿ, ಸಮಾಜದ ಕಣ್ಣೀರೊರೆಸುವ ಕೆಲಸವನ್ನು ಮಾಡಲು ನಾವು ಯಾವತ್ತು ಕಂಕಣ ಬದ್ಧರಾಗಿರಬೇಕು ಎಂದು ನುಡಿದರು.

ಭಿವಂಡಿ – ಬದ್ಲಾಪುರ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರವೀಣಾ  ಪ್ರಕಾಶ್‌ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ, ಬಡ ಕುಟುಂಬದ ಯುವತಿಯ ವಿವಾಹಕ್ಕೆ ಸಹಾಯ ಮಾಡಿದ ಎಲ್ಲ ದಾನಿಗಳನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಇನ್ನು ಮುಂದೆಯೂ ಇಂತಹ ಕೆಲಸಕ್ಕೆ ನಾವೆಲ್ಲ ಕೈಜೋಡಿಸೋಣ  ಎಂದು ನುಡಿದರು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ್ದ ಡಾ| ನಿಧಿ ಪಿ. ಶೆಟ್ಟಿ ಅವರು ಮಹಿಳೆಯರ ಆರೋಗ್ಯದ ಕುರಿತು ಉತ್ತಮ ಸಲಹೆ ಸೂಚನೆಗಳನ್ನು ನೀಡಿ, ಮಹಿಳೆಯರು ಯೋಗ, ನಡಿಗೆ, ವ್ಯಾಯಾಮದ ಮೂಲಕ ದಿನದ ಸ್ವಲ್ಪ ಸಮಯವನಾದರೂ ತನಗಾಗಿ ಮೀಸಲಿಡಬೇಕು ಎಂದರು. ಅತಿಥಿಯಾಗಿ ಆಗಮಿಸಿದ್ದ ಡಾ| ನಿಧಿ ಪಿ. ಶೆಟ್ಟಿಯವರನ್ನು  ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಮಿತಿಯ ಸುಬೋಧ್‌ ಡಿ. ಭಂಡಾರಿ, ಭಾಸ್ಕರ್‌ ಶೆಟ್ಟಿ ದೊಡ್ಡೇರಂಗಡಿ, ಹರೀಶ್‌ ಟಿ. ಶೆಟ್ಟಿ, ಸಂತೋಷ್‌ ಶೆಟ್ಟಿ, ದಯಾನಂದ ಶೆಟ್ಟಿ, ಉದಯ ಶೆಟ್ಟಿ, ಜಗದೀಶ ಶೆಟ್ಟಿ, ಪ್ರಕಾಶ್‌ ಶೆಟ್ಟಿ, ಸುಧೀರ್‌ ಶೆಟ್ಟಿ, ನಾಗ್‌ ಕಿರಣ್‌ ಶೆಟ್ಟಿ, ಅನಿಲ್‌ ಶೆಟ್ಟಿ, ಸದಾಶಿವ ಶೆಟ್ಟಿ, ಮಂಜುನಾಥ್‌ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಸುಜಾತಾ ಶೆಟ್ಟಿ ಹಾಗೂ ರತ್ನಾ ಶೆಟ್ಟಿ, ಓಂ ಶಕ್ತಿ ಮಹಿಳಾ ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಹಾಗೂ ವೇದಾ ಶೆಟ್ಟಿ, ರೂಪಾ ಶೆಟ್ಟಿ, ಸುಲೋಚನಾ ಶೆಟ್ಟಿ, ಜ್ಯೋತಿ ಶೆಟ್ಟಿ ಹಾಗೂ ಹೆಚ್ಚಿನ ಎಲ್ಲ ಸದಸ್ಯರು ಭಾಗವಹಿಸಿದ್ದರು. ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವನ್ನು ವಿತರಿಸಲಾಯಿತು. ಆಶಾ ನಾಯಕ್‌ ಸಂಗೀತ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದರು. ಚೇತನಾ ಭಂಡಾರಿ ಹಾಗೂ ಜಯಶ್ರೀ ಶೆಟ್ಟಿ ಪ್ರಾರ್ಥನೆಗೈದರು. ಪ್ರಮೀತಾ ಶೆಟ್ಟಿ ಹಾಗೂ ರೋಹಿಣಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಶೋಭಾ ಶೆಟ್ಟಿ ವಂದಿಸಿದರು. ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.