ಬಂಟರ ಸಂಘ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ:ಆರ್ಥಿಕ ನೆರವು ವಿತರಣೆ
Team Udayavani, Jun 20, 2017, 2:55 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ನೀಡಲ್ಪಡುವ ಆರ್ಥಿಕ ಸಹಾಯ ವಿತರಣೆ ಕಾರ್ಯಕ್ರಮವು ಸಂಘದ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ವತಿಯಿಂದ ನಡೆಯಿತು.
ನಲಸೋಪರ ಪಶ್ಚಿಮದ ಗ್ಯಾಲಕ್ಸಿ ಹೊಟೇಲ್ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಇದರ ಗೌರವ ಪ್ರಧಾನ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ ಅವರು ವಹಿಸಿ ಕಾರ್ಯಕ್ರಮವನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಇದರ ಪಶ್ಚಿಮ ಪ್ರಾದೇಶಿಕ ಸಮಿತಿಗಳ ಸಮನ್ವಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್. ಪಯ್ಯಡೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿ, ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಧರ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಮೋಹನ್ ವಿ. ಶೆಟ್ಟಿ, ಸಂಚಾಲಕ ಕರ್ನಿರೆ ಶ್ರೀಧರ ಶೆಟ್ಟಿ, ಸಲಹಾ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್ ಪಿ. ಶೆಟ್ಟಿ, ಗೌರವ ಕೋಶಾಧಿಕಾರಿ ವಿಜಯ ಶೆಟ್ಟಿ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶರ್ಮಿಳಾ ಎಸ್. ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷ ಮಂಜುಳಾ ಎ. ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಸಮಿತಿಯ ನೂರಾರು ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು.
ಸಮಿತಿಯ ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಹೊಸ ಸೇರ್ಪಡೆ
Viral Video: ಟಿಕ್ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.