ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

Team Udayavani, Oct 12, 2021, 5:06 PM IST

ಚಾರ್ಕೋಪ್‌ ಕನ್ನಡಿಗರ ಬಳಗ: 22ನೇ ವಾರ್ಷಿಕ ಶಾರದಾ ಮಹಾಪೂಜೆ ಸಂಪನ್ನ

ಚಾರ್ಕೋಪ್: ಶರನ್ನವರಾತ್ರಿಯ ಅಂಗವಾಗಿ ಚಾರ್ಕೋಪ್‌ ಕನ್ನಡಿಗರ ಬಳಗದ 22ನೇ ವಾರ್ಷಿಕ ಶಾರದಾ ಮಹಾಪೂಜೆ ಅ. 11ರಂದು ಚಾರ್ಕೋಪ್‌ ಕನ್ನಡಿಗರ ಬಳಗದ ಕನ್ನಡ ಭವನ ಸಭಾಗೃಹದಲ್ಲಿ  ವಿವಿಧ ಧಾರ್ಮಿಕ ಕಾರ್ಯ ಕ್ರಮಗಳೊಂದಿಗೆ ಜರಗಿತು.

ನಾಗೇಶ್‌ ಭಟ್‌ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನ ಕಾರ್ಯಕ್ರಮಗಳು ಜರಗಿದ ಬಳಿಕ ಬಳಗದ ಅಧಿದೇವತೆ ಶ್ರೀ ಶಾರದಾಂಬೆಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸ ಲಾಯಿತು. ಬಳಗದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮಹೇಂದ್ರ ಕಾಂಚನ್‌ ಮತ್ತು ಸುಮಿತ್ರಾ ಕಾಂಚನ್‌ ದಂಪತಿ ಪೂಜೆಯ ಯಜಮಾನತ್ವ ವಹಿಸಿದ್ದರು. ಬಳಗದ ಸದಸ್ಯರೊಂದಿಗೆ ಮಹಾಮಂಗಳಾರತಿ ಜರಗಿತು. ಧಾರ್ಮಿಕ ಕಾರ್ಯಕ್ರಮದ ಬಳಿಕ ತೀರ್ಥ ಪ್ರಸಾದ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ  ಬಳಗದ ಅಧ್ಯಕ್ಷ  ಎಂ. ಕೃಷ್ಣ ಎನ್‌. ಶೆಟ್ಟಿ ಮಾತನಾಡಿ, ಕೊರೊನಾ ವಾತಾವರಣದ ನಡುವೆಯೂ ಕಾರ್ಯಕ್ರಮಗಳನ್ನು ನಡೆಸಿದ ಹೆಗ್ಗಳಿಕೆ ನಮ್ಮ ಬಳಗದ್ದಾಗಿದೆ. ಇದಕ್ಕೆಲ್ಲ ಬಳಗವು ಹಿಂದಿನಿಂದಲೂ ನಂಬಿಕೊಂಡು ಬಂದಿದ್ದ ಶ್ರೀ ಶಾರದಾ ಮಾತೆಯ ಅನುಗ್ರಹ ಕಾರಣ ಎಂದೇ ಹೇಳಬಹುದು. ಮುಂದೆ ಬಳಗವು ಕೆಲವೊಂದು ಕಾರ್ಯಕ್ರಮ ವನ್ನು ಆಯೋಜಿಸಲು ಯೋಜನೆ ಹಮ್ಮಿಕೊಂಡಿದ್ದು, ಬಳಗದ ಸದಸ್ಯರಾದ ತಾವೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಸಹಕರಿಸಬೇಕಾಗಿ ವಿನಂತಿಸಿದರು.

ಬಳಗದ ಗೌರವ ಪ್ರಧಾನ ಕಾರ್ಯ ದರ್ಶಿ ರಘುನಾಥ ಎನ್‌. ಶೆಟ್ಟಿ  ಪ್ರಾಸ್ತಾವಿಕ ವಾಗಿ ಮಾತನಾಡಿ, ಮಹಾನಗರದಲ್ಲಿ ಸಾಂಕ್ರಾಮಿಕ ರೋಗದ ಹಾವಳಿ ಕಡಿಮೆಯಾಗಿ ಜನರು ನೆಮ್ಮದಿಯತ್ತ ಸಾಗುತ್ತಿದ್ದಾರೆ. ಬಳಗವು ಕಳೆದ ಒಂದೂವರೆ ವರ್ಷಗಿಂತಲೂ ಹೆಚ್ಚು ಕಾಲದ ಕೋವಿಡ್‌ ಸಂಕಷ್ಟದ ಸಮಯದಲ್ಲೂ ವಾರ್ಷಿಕ ಪೂಜೆ, ಸಮಾಜಪರ ಕಾರ್ಯಕ್ರಮಗ ಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿದೆ. ಮುಂಬರುವ ದಿನಗಳಲ್ಲಿ  ಸಂದರ್ಭಕ್ಕೆ ಅನುಗುಣವಾಗಿ ಕೆಲವೊಂದು ಸಾಹಿತ್ಯ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು ಬಳಗವು ಹೊಂದಿದ್ದು, ಸದಸ್ಯರೆಲ್ಲರೂ ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದರು.

ಬಳಗದ ಸಮಗ್ರ ಬೆಳವಣಿಗೆಯಲ್ಲಿ  ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಬಳಗದ ಹಿರಿಯ ವಿಶ್ವಸ್ತ ಎಂ. ಎಸ್‌. ರಾವ್‌ ಅವರು ಪ್ರಸಕ್ತ ಅನಾರೋಗ್ಯದ ಲ್ಲಿದ್ದು, ಶ್ರೀ ಶಾರದಾಂಬೆಯ ಅನುಗ್ರಹ ದಿಂದ ಶೀಘ್ರವಾಗಿ ಗುಣಮುಖರಾಗಿ ಮತ್ತೆ ಬಳಗದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಶಕ್ತಿ, ಸಾಮರ್ಥ್ಯ, ಆರೋಗ್ಯ ಭಾಗ್ಯ ದೊರಕಲೆಂದು ನಮ್ಮೆಲ್ಲರ ಹಾರೈಕೆ ಎಂದು ಹೇಳಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ

ಸಮಸ್ತ ಸದಸ್ಯರಿಗೆ ಬಳಗದ ಗೌರವ ಪ್ರಧಾನ ಕಾರ್ಯದರ್ಶಿ ರಘುನಾಥ ಎನ್‌. ಶೆಟ್ಟಿ  ವಂದಿಸಿದರು.

ಬೆಳಗ್ಗೆ 8ರಿಂದ 11ರ ವರೆಗೆ ನಡೆದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ  ಬಳಗದ ಸದಸ್ಯರಿಂದ ಭಜನ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಬಳಗದ ಗೌರವ ಕೋಶಾಧಿಕಾರಿ ಗೌರಿ ಡಿ. ಪಣಿಯಾಡಿ, ಉಪಾಧ್ಯಕ್ಷರಾದ ಕೃಷ್ಣ ಟಿ. ಅಮೀನ್‌, ಚಂದ್ರಶೇಖರ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ವಿಜಯ ಡಿ. ಪೂಜಾರಿ, ಜತೆ ಕೋಶಾಧಿಕಾರಿ ರಮೇಶ್‌ ಸಿ. ಕೋಟ್ಯಾನ್‌, ವಾರ್ಷಿಕೋತ್ಸವ ಪೂಜಾ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಚೇವಾರ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪದ್ಮಾವತಿ ಬಿ. ಶೆಟ್ಟಿ, ವಿಶ್ವಸ್ತರಾದ ಜಯ ಸಿ. ಶೆಟ್ಟಿ, ರಶ್ಮಿ ಆಚಾರ್ಯ, ಯಮುನಾ ಸಾಲ್ಯಾನ್‌, ರಜನಿ ಆರ್‌. ಶೆಟ್ಟಿ, ಶುಭಾ ಸುವರ್ಣ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಶಾರದಾ ಪೂಜೆಯಲ್ಲಿ ಪಾಲ್ಗೊಂಡು ಸಹಕರಿಸಿದರು.

ಚಿತ್ರವರದಿ: ರಮೇಶ್ ಉದ್ಯಾವರ

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.