ಚೆಂಬೂರು ಕರ್ನಾಟಕ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ
Team Udayavani, Feb 7, 2017, 5:41 PM IST
ಮುಂಬಯಿ: ಚೆಂಬೂರು ಕರ್ನಾಟಕ ಸಂಘದ ವಾರ್ಷಿಕ “ಸಾಹಿತ್ಯ ಸಹವಾಸ-2017 ಸಂಭ್ರಮ’ವು ಸಂಘದ ಸಂಚಾಲಕತ್ವದ ಚೆಂಬೂರು ಕರ್ನಾಟಕ ಪ್ರೌಢ ಶಾಲೆ ಮತ್ತು ಕಿರಿಯ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ ನ್ಯಾಯವಾದಿ ಸುಧಾಕರ್ ಅರಾಟೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಾರ್ಷಿಕವಾಗಿ ಕೊಡಮಾಡುವ “ವೈ. ಜಿ. ಶೆಟ್ಟಿ ಶ್ರೇಷ್ಠ ಶಿಕ್ಷಕಿ ಪ್ರಶಸ್ತಿ’ಯನ್ನು ನಿಷ್ಠಾವಂತ ಶಿಕ್ಷಕಿಯಾಗಿ ಹೆಸರು ಮಾಡಿದ ನಿವೃತ್ತ ಶಿಕ್ಷಕಿ ಶುಭಾಶಿನಿ ಎಸ್. ಹೆಗ್ಡೆ ಅವರಿಗೆ, “ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮರಣಾರ್ಥ ಪ್ರಶಸ್ತಿ’ಯನ್ನು ಕನ್ನಡ ಮತ್ತು ತುಳು ಭಾಷಾ ಸಂಘಟಕ, ಪ್ರಸಿದ್ಧ ಸಾಹಿತಿ, ಪ್ರಕಾಶಕ ವಸಂತ ಶೆಟ್ಟಿ ಬೆಳ್ಳಾರೆ ಅವರಿಗೆ ಹಾಗೂ ಜೋಗೇಶ್ವರಿ ಪೂರ್ವದ ಶ್ರೀ ಜಗದಂಬಾ ಕಾಳಭೆ„ರವ ದೇವಸ್ಥಾನ ಮಾಜಿ ಆಡಳಿತ ಮುಖ್ಯಸ್ಥ ಜಿ. ಟಿ. ಆಚಾರ್ಯ ಅವರಿಗೆ (ಪತ್ನಿ ಉಷಾ ಗೋಪಾಕೃಷ್ಣ ಅವರನ್ನೊಳಗೊಂಡು) “ಸುಬ್ಬಯ್ಯ ಶೆಟ್ಟಿ ದತ್ತಿ’ ಪ್ರಶಸ್ತಿಯನ್ನು ಗಣ್ಯರ ಸಮ್ಮುಖದಲ್ಲಿ ಪ್ರದಾನಿಸಿ ಗೌರವಿಸಿ ಅಭಿನಂದಿಸಲಾಯಿತು.
ಕರ್ನಾಟಕದ ಮಾಜಿ ಲೋಕಾಯುಕ್ತ, ಸರ್ವೋಚ್ಚ ನ್ಯಾಯಲಯದ ನಿವೃತ್ತ ನ್ಯಾಯಮೂರ್ತಿ ಡಾ| ಜಸ್ಟೀಸ್ ಶಿವರಾಜ್ ವಿ. ಪಾಟೀಲ್, ಸಂಘದ ಉಪಾಧ್ಯಕ್ಷ ಪ್ರಭಾಕರ್ ಟಿ. ಬೋಳಾರ್, ಮಾಜಿ ಅಧ್ಯಕ್ಷ ಜಯ ಎನ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ರಂಜನ್ ಕುಮಾರ್ ಅಮೀನ್, ಸಾಂಸ್ಕೃತಿಕ ಉಪ ಸಮಿತಿಯ ಕಾರ್ಯದರ್ಶಿ ದಯಸಾಗರ್ ಚೌಟ, ಕೋಶಾಧಿಕಾರಿ ಟಿ. ಆರ್. ಶೆಟ್ಟಿ, ಸಂಘದ ಜತೆ ಕಾರ್ಯದರ್ಶಿ ದೇವದಾಸ್ ಕೆ. ಶೆಟ್ಟಿಗಾರ್, ಜತೆ ಕೋಶಾಧಿಕಾರಿ ಸುಂದರ್ ಎನ್. ಕೋಟ್ಯಾನ್, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಅಶೋಕ್ ಸಾಲ್ಯಾನ್, ವಿಶ್ವನಾಥ ಶೇಣವ, ಗುಣಾಕರ ಎಚ್. ಹೆಗ್ಡೆ, ಸುಧೀರ್ ಪುತ್ರನ್, ಯೋಗೇಶ್ ಗುಜರನ್, ಮಧುಕರ್ ಜಿ. ಬೈಲೂರು, ರಾಮ ಪೂಜಾರಿ, ಸುಧಾಕರ ಅಂಚನ್, ಮೋಹನ್ ಕೆ. ಕಾಂಚನ್, ಚಂದ್ರಶೇಖರ ಎ. ಅಂಚನ್, ಜಯ ಎಂ. ಶೆಟ್ಟಿ, ಸುಧೀರ್ ಪುತ್ರನ್, ಸಂಜೀವ ಎನ್. ಶೆಟ್ಟಿ ಹಾಗೂ ತುಳು-ಕನ್ನಡಿಗ ಶಿಕ್ಷಣಾಭಿಮಾನಿಗಳು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
Desi Swara@150: ಪೊಲೇಂಡ್ ಕನ್ನಡಿಗರು ಸಂಘದ ಅದ್ದೂರಿ ಉದ್ಘಾಟನೆ
Desi Swara@150: ನವವಿಂಶತಿ ನೃತ್ಯ ಹಬ್ಬದಲ್ಲಿ ದ್ವಿದಳದ ಸತ್ರಿಯ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.