ಚೆಂಬೂರು ಕರ್ನಾಟಕ ಸಂಘದ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ

Team Udayavani, Jan 1, 2019, 11:23 AM IST

5-aa.jpg

ಮುಂಬಯಿ: ಚೆಂಬೂರು ಕರ್ನಾಟಕ ಸಂಘದ ಸಂಚಾಲಕತ್ವದ ಚೆಂಬೂರು ಕರ್ನಾಟಕ ಹೈಸ್ಕೂಲ್‌, ಜೂನಿಯರ್‌ ಕಾಲೇಜು, ರಾತ್ರಿ ಕಾಲೇಜು ಹಾಗೂ ಕಾನೂನು ಪದವಿ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಡಿ. 21ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಕೆ. ಸಿದ್ಧರಾಮಪ್ಪ ಅವರು ಮಾತನಾಡಿ, ಚೆಂಬೂರು ಕರ್ನಾಟಕ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆಯನ್ನು ಕಂಡು ಸಂತೋಷವಾಗುತ್ತಿದೆ. ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದಾಗ ಮಾತ್ರ ಅವರು ಸರ್ವತೋಮುಖ ಅಭಿವೃದ್ಧಿಯಾಗುತ್ತಾದೆ. ನಾನೂ ಕೂಡ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಯಾಗಿದ್ದು, ಆದ್ದರಿಂದ ಭಾಷೆಯ ಬಗ್ಗೆ ಕೀಳರಿಮೆ ಬೇಡ. ಶ್ರದ್ಧೆ, ಏಕಾಗ್ರತೆ, ಸತತ ಪ್ರಯತ್ನದಿಂದ ಯಾವುದೇ ಸಾಧನೆಯನ್ನು ಮಾಡಲು ಸಾಧ್ಯವಿದೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಿ ಬೆಳೆಯಬೇಕು ಎಂದರು.

ಚೆಂಬೂರು ಕರ್ನಾಟಕ ಸಂಘದ ಅಧ್ಯಕ್ಷ ನ್ಯಾಯವಾದಿ ಎಚ್‌. ಕೆ. ಸುಧಾಕರ ಅರಾಟೆ ಅವರು ಮಾತನಾಡಿ, ಚೆಂಬೂರು ಕರ್ನಾಟಕ ಸಂಘವು ಒಂದು ಉತ್ತಮ ಶೈಕ್ಷಣಿಕ ಸಂಸ್ಥೆಯಾಗಿದ್ದು, ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಉಚಿತ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಕಾನೂನು ಪದವಿ ಕಾಲೇಜು ಮತ್ತು ರಾತ್ರಿ ಪದವಿ ಕಾಲೇಜನ್ನು ಪ್ರಾರಂಭಿಸಿದ ಬಗ್ಗೆ ನಮಗೆ ಹೆಮ್ಮೆಯಿದೆ. ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಮಹತ್ತರ ಸಾಧನೆಗಳನ್ನು ನೋಡಿದಾಗ ಸಂತೋಷವಾಗುತ್ತಿದೆ. ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುವುದರೊಂದಿಗೆ ಸಂಸ್ಕೃತಿ, ಸಂಸ್ಕಾರವನ್ನು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶಪ್ರಾಯ ರಾಗಿ ಬಾಳಬೇಕು. ಶಿಕ್ಷಕರು ಮತ್ತು ಪಾಲಕರು ಮಕ್ಕಳ ಅಭಿರುಚಿಯನ್ನು ಅರಿತುಕೊಂಡು ಅವರನ್ನು ಬೆಳೆಸಬೇಕು ಎಂದು ನುಡಿದು ಶುಭಹಾರೈಸಿದರು.

ಪೂರ್ವ ಮಾಧ್ಯಮಿಕ ಶಾಲೆಯ ವರದಿಯನ್ನು ಮಧುಮಿತಾ ಬಿಸ್ವಾಸ್‌, ಪ್ರಾಥಮಿಕ ಶಾಲೆಯ ವರದಿಯನ್ನು ವಿನೀತಾ ಖೀರ್‌ ಮತ್ತು ಮಾಧ್ಯಮಿಕ ಹಾಗೂ ಜೂನಿಯರ್‌ ಕಾಲೇಜಿನ ಶಾಲಾ ವರದಿಯನ್ನು ಮುಖ್ಯ ಶಿಕ್ಷಕಿ ಮನ್‌ಜಿàತ್‌ ಕೌರ್‌ ಅವರು ವಾಚಿಸಿದರು. ಜೂನಿಯರ್‌ ಕಾಲೇಜಿನ ಶಿಕ್ಷಕಿ ಶೀತಲ್‌ ಅಮಿತ್‌ ಅವರು ವಂದಿಸಿದರು.

ಶಿಕ್ಷಕಿ ಜಾಹ್ನವಿ ಪ್ರಭು ಮತ್ತು ನಿಶಾ ವಿಶ್ವಕರ್ಮ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಾದ ವೈಭವ್‌, ಶರಣ್‌ ಶೆಟ್ಟಿ ಹಾಗೂ ತಹರೀಮ್‌ ಖಾನ್‌ ಅವರು ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದರು. ವೇದಿಕೆಯಲ್ಲಿ ಚೆಂಬೂರು ಕರ್ನಾಟಕ ಸಂಘದ ಉಪಾಧ್ಯಕ್ಷ ಪ್ರಭಾಕರ ಬೋಳಾರ್‌, ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್‌ ಶೆಟ್ಟಿಗಾರ್‌, ಗೌರವ ಕೋಶಾಧಿಕಾರಿ ಟಿ. ಆರ್‌. ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ವಿನೀತಾ ಖೀರ್‌, ಮಾಧ್ಯಮಿಕ ಶಾಲಾ ಮುಖ್ಯ ಶಿಕ್ಷಕಿ ಮನ್‌ಜಿàತ್‌ ಕೌರ್‌ ಶೈನಿ, ರಾತ್ರಿ ಪದವಿ ಕಾಲೇಜಿನ ಮುಖ್ಯಸ್ಥೆ ಸತ್ಯಭಾಮಾ ನಾಡರ್‌ ಅವರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಚೆಂಬೂರು ಕರ್ನಾಟಕ ಹೈಸ್ಕೂಲ್‌, ಜೂನಿಯರ್‌ ಕಾಲೇಜು, ರಾತ್ರಿ ಕಾಲೇಜು ಹಾಗೂ ಕಾನೂನು ಪದವಿ ಕಾಲೇಜಿನ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯ ಸೇರಿದಂತೆ ವಿವಿಧ ಮನೋರಂಜನ ಕಾರ್ಯಕ್ರಮಗಳು ನಡೆದವು. 

ಚೆಂಬೂರು ಕರ್ನಾಟಕ ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿ ತಿಯ ಸದಸ್ಯರು, ತುಳು- ಕನ್ನಡಿಗರು, ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪಾಲಕ- ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಅತಿಥಿ-ಗಣ್ಯರುಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಚೆಂಬೂರು ಕರ್ನಾಟಕ ಹೈಸ್ಕೂಲ್‌, ಜೂನಿಯರ್‌ ಕಾಲೇಜು, ರಾತ್ರಿ ಕಾಲೇಜು, ಕಾನೂನು ಪದವಿ ಕಾಲೇಜಿನ ಮುಖ್ಯಸ್ಥರು, ಶಿಕ್ಷಕರು, ಶಿಕ್ಷಕೇತರ ಸಿಬಂದಿ, ವಿದ್ಯಾರ್ಥಿಗಳು ಸಹಕರಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.