ಚೆಂಬೂರು ಕರ್ನಾಟಕ ಸಂಘ:ನೂತನ ಮಂದಿರ ಉದ್ಘಾಟನೆ

Team Udayavani, Sep 6, 2017, 11:32 AM IST

03-Mum04a.jpg

ಮುಂಬಯಿ: ಚೆಂಬೂರು ಕರ್ನಾಟಕ ಸಂಘದ ಆಶ್ರಯದಲ್ಲಿ ನೂತನ ಮಂದಿರದ ಉದ್ಘಾಟನೆ ಹಾಗೂ ಗಣಪತಿ ವಿಗ್ರಹ ಪ್ರತಿಷ್ಠಾಪನೆಯು ಆ. 24ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.

ಚೆಂಬೂರಿನ ಘಾಟ್ಲಾದಲ್ಲಿರುವ ಚೆಂಬೂರು ಕರ್ನಾಟಕ ಸಂಘದ ವಿದ್ಯಾಸಂಸ್ಥೆಗಳ ಪ್ರವೇಶ ದ್ವಾರದಲ್ಲಿ ಭವ್ಯ ಗಣಪತಿಯ ಮಂದಿರವು ನಿರ್ಮಾಣಗೊಂಡಿದ್ದು, ವಿಶೇಷವೆಂದರೆ ವಿಶ್ವಪ್ರಸಿದ್ಧ ಕಾರ್ಕಳದ ಶಿಲ್ಪಿಗಳಿಂದ ಕರಿಕಲ್ಲಿನಲ್ಲಿ ನಿರ್ಮಿಸಲ್ಪಟ್ಟ ಗಪತಿಯ ಮೂರ್ತಿಯು ಭಕ್ತಾದಿಗಳನ್ನು ಆಕರ್ಷಿಸುತ್ತಿದೆ.

ಆ. 23ರಂದು ಸಂಜೆ ತೆಂಗಿನ ಗರಿಗಳ ಛತ್ರ ಚಾಮರಗಳಿಂದ ಕಂಗೊಳಿಸುವ ನಿಸರ್ಗ ರಮಣೀಯ ವಿದ್ಯಾಸಾಗರ ಪರಿಸರಕ್ಕೆ ವಿಘ್ನೇಶ್ವರನ ಮೂರ್ತಿಯನ್ನು ಮೆರವಣಿಗೆಯ ಮೂಲಕ ತರಲಾಯಿತು. ಕಾರ್ಯಕಾರಿ ಸಮಿತಿಯ ಸುಂದರ ಕೋಟ್ಯಾನ್‌ ದಂಪತಿ ವಿಗ್ರಹಕ್ಕೆ ಅಭಿಷೇಕ ಹಾಗೂ ಬಿಂಬಾಧಿವಾಸ ಪೂಜೆಯನ್ನು ನೆರವೇರಿಸಿದರು. ಅಹೋರಾತ್ರಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಆ. 24ರಂದು ಬೆಳಗ್ಗೆ 8.30ರಿಂದ ಛೆಡ್ಡಾ ನಗರದ ಸುಬ್ರಹ್ಮಣ್ಯ ಮಠದ ವಿಷ್ಣು ಪುರೋಹಿತರು ಮತ್ತು ತಂಡದವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಸಂಘದ ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ದಯಾಸಾಗರ್‌ ಚೌಟ ಮತ್ತು ಸುರೇಖಾ ದಂಪತಿ ವಿಗ್ರಹದ ಪ್ರತಿಷ್ಠಾಪನ ಕಾರ್ಯಕ್ರಮಗಳನ್ನು ನೆರವೇರಿಸಿದರು. ಪುಷ್ಪಾಲಂಕೃತ ಮಂದಿರ ದಲ್ಲಿ ಗಣಪತಿಯ ಮೂರ್ತಿಯು ಪ್ರತಿಷ್ಠಾಪನೆಗೊಂಡಿದ್ದು, ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬಂದಿಗಳು, ತುಳು-ಕನ್ನಡಿಗರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಆ. 25ರಂದು ಸಂಘದ ವಠಾರದಲ್ಲಿ ವಾರ್ಷಿಕ ಗಣಹೋಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ರಂಜನ್‌ ಕುಮಾರ್‌ ಅಮೀನ್‌ ದಂಪತಿ ಪೂಜಾ ಕೈಂಕರ್ಯದಲ್ಲಿ ಭಾಗಿಯಾದರು. ಚೆಂಬೂರು ಕರ್ನಾಟಕ ಸಂಘವು ಶೀಘ್ರದಲ್ಲಿಯೇ ತನ್ನ ಬಹುಕಾಲದ ಕನಸಾಗಿರುವ ಕಾನೂನು ಪದವಿ ಕಾಲೇಜನ್ನು ಲೋಕಾರ್ಪಣೆಗೊಳಿಸಲಿದ್ದು, ಈ ಬಾರಿಯ ಸಿಇಟಿ ಪರೀಕ್ಷೆಯ ಅನಂತರ ಕಾರ್ಯಾರಂಭಗೊಳ್ಳಲಿದೆ.

ಸಂಘದ ಅಧ್ಯಕ್ಷ ಎಚ್‌. ಕೆ. ಸುಧಾಕರ ಆರಾಟೆ, ಉಪಾಧ್ಯಕ್ಷ ಪ್ರಭಾಕರ ಬೋಳಾರ, ಗೌರವ ಪ್ರಧಾನ ಕಾರ್ಯದರ್ಶಿ ರಂಜನ್‌ ಕುಮಾರ್‌  ಅಮೀನ್‌, ಕೋಶಾಧಿಕಾರಿ ಟಿ. ಆರ್‌. ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ದಯಾಸಾಗರ್‌ ಚೌಟ, ಇತರ ಪದಾಧಿಕಾರಿಗಳಾದ ಗುಣಕರ ಹೆಗ್ಡೆ, ಮಧುಕರ ಬೈಲೂರು, ಸುಂದರ ಕೋಟ್ಯಾನ್‌, ಮೋಹನ್‌ ಕಾಂಚನ್‌, ಜಯ ಎನ್‌. ಶೆಟ್ಟಿ, ಯೋಗೇಶ್‌ ಗುಜರನ್‌, ರಾಮ ಪೂಜಾರಿ, ವಿಶ್ವನಾಥ್‌ ಶೇಣವ, ದೇವದಾಸ್‌ ಶೆಟ್ಟಿಗಾರ್‌, ಜಯ ಎಂ. ಶೆಟ್ಟಿ, ಸುಧೀರ್‌ ಪುತ್ರನ್‌, ಅಶೋಕ್‌ ಸಾಲ್ಯಾನ್‌, ಚಂದ್ರಶೇಖರ ಅಂಚನ್‌, ಸುಧಾಕರ ಅಂಚನ್‌ ಮತ್ತು ಸಿ. ಎಸ್‌. ನಾಯಕ್‌, ಸಂಜೀವ ಶೆಟ್ಟಿ ಮೊದಲಾದವರು ಸಂಸ್ಥೆಯ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.