ವಿಶೇಷ ಕಲಾಕೃತಿಯೊಂದಿಗೆ ಚೆಂಬೂರು ಸಹ್ಯಾದ್ರಿ ಮಂಡಳ ಗಣೇಶೋತ್ಸವ 

Team Udayavani, Aug 23, 2017, 1:49 PM IST

22-Mum04.jpg

ಮುಂಬಯಿ: ಚೆಂಬೂರು ತಿಲಕ್‌ ನಗರದ ಸಹ್ಯಾದ್ರಿ ಮಂಡಳದ ಗಣೇಶೋತ್ಸವವು ಆ. 25ರಿಂದ ಪ್ರಾರಂಭಗೊಂಡು ಸೆ. 5 ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಪ್ರತೀ ವರ್ಷ ವೈವಿಧ್ಯಮಯ ವಿನ್ಯಾಸಗಳನ್ನು ನಿರ್ಮಿಸಿ ಜನಾಕರ್ಷಣೆಗೆ ಒಳಗಾಗಿರುವ ಸಹ್ಯಾದ್ರಿ ಕ್ರೀಡಾಮಂಡಲವು ಪ್ರಸ್ತುತ ವರ್ಷ ದೇಶ ಭಕ್ತಿಯನ್ನು ಬಿಂಬಿಸುವ ಜೈ ಜವಾನ್‌-ಜೈಕಿಸಾನ್‌-ಜೈ ವಿಜ್ಞಾನ್‌ ಎಂಬ ಧ್ಯೇಯೋದ್ದೇಶದೊಂದಿಗೆ ಗಣೇಶೋತ್ಸವದ ಪೆಂಡಾಲನ್ನು ನಿರ್ಮಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಕಳೆದ ವರ್ಷ ಪಾಂಡಾ ವಿಲೇಜ್‌ನ ದೃಶ್ಯವನ್ನು ನಿರ್ಮಿಸಿ ಎಳೆಯ ಮಕ್ಕಳಿಗೆ ವಿಶೇಷ ಅನುಭವನವನ್ನು ನೀಡಿತ್ತು. ಕಳೆದ ಐದು ವರ್ಷಗಳಿಂದ ಕಿಡ್ಸ್‌  ವರ್ಲ್ಡ್, ಶಿವಾಜಿ ಮಹಾರಾಜ್‌, ಸಿನಿಮಾ ಜಗತ್ತಿಗೆ ನೂರು ವರ್ಷ, ವಾರಾಣಸಿ ಪರಂಪರೆಯನ್ನು ಬಿಂಬಿಸುವ ಆಕೃತಿಗಳನ್ನು ನಿರ್ಮಿಸಿ ಎಲ್ಲರ ಆಕರ್ಷಣೆಗೊಳಪಟ್ಟಿತ್ತು.

ಪ್ರಸ್ತುತ ವರ್ಷ ಕಾಶ್ಮೀರದಿಂದ ಕನ್ಯಾ ಕುಮಾರಿಯವರೆಗೆ ಪಸರಿಸಿದ ದೇಶದ ವಿವಿಧ ವಾಸ್ತುಶಿಲ್ಪ, ಸಂಸ್ಕೃತಿಯನ್ನು ಇಲ್ಲಿ ಪಡಿಮೂಡಿಸಲಾಗಿದೆ. ಮಂಡಲದ ಅಧ್ಯಕ್ಷ ರಾಹುಲ್‌ ಗಜಾನನ ವಾಳಂಜ ಅವರು ಪ್ರತೀ ವರ್ಷದಂತೆ ತನ್ನ ಕಲ್ಪನೆಯಿಂದ ದೃಶ್ಯದ ಯೋಜನೆಯನ್ನು ಮಾಡುತ್ತಿದ್ದಾರೆ. ಈ ಕಲೆ
ಯನ್ನು ಪ್ರತ್ಯಕ್ಷವಾಗಿಸುವಲ್ಲಿ ಕಲಾ ಸಂಯೋಜಕ ಪ್ರಸನಜೀತ್‌ ಚಂದಾ ಅವರು ಶ್ರಮಿಸುತ್ತಿದ್ದಾರೆ. ನಿಕಿಲ್‌ ಮೋರೆ, ಸಂತೋಷ್‌ ಶಿಲಾರ, ಚಿತ್ರಕಾರ ದಿಲೀಪ್‌ ಮೈತಿ ಅವರು ಸಹಕರಿಸುತ್ತಿದ್ದಾರೆ. 

ಮಂಡಳವು ಕಳೆದ ಹಲವಾರು ವರ್ಷಗಳಿಂದ ವಿಭಿನ್ನ ಆಕೃತಿಗಳನ್ನು ಸೃಷ್ಟಿಸಿ ಹಲವಾರು ಪ್ರಶಸ್ತಿಗಳಿಗೂ ಭಾಜನವಾಗುತ್ತಿದೆ. ಒಟ್ಟಿನಲ್ಲಿ ಸಹ್ಯಾದ್ರಿ ಕ್ರೀಡಾ ಮಂಡಲವು ಪ್ರಸ್ತುತ ವರ್ಷ ಭಕ್ತಾದಿಗಳನ್ನು ಮತ್ತೆ ತನ್ನತ್ತ ಕೈಬೀಸಿ ಕರೆಯಿಸಿಕೊಳ್ಳಲು ಸನ್ನದ್ಧವಾಗಿದೆ.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.