Goa ಕನ್ನಡ ಶಾಲೆಗೆ ಮಕ್ಕಳನ್ನು ಸೇರಿಸಿ ಅಭಿಯಾನ
Team Udayavani, Apr 16, 2023, 9:55 PM IST
ಪಣಜಿ: ಗೋವಾದಲ್ಲಿ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯುಂಟಾಗುತ್ತಿದೆ. ಇದರಿಂದಾಗಿ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಕರೆತರುವ ಉದ್ದೇಶದಿಂದ “ಕನ್ನಡ ಶಾಲೆಗೆ ಮಕ್ಕಳನ್ನು ಸೇರಿಸಿ” ಅಭಿಯಾನವನ್ನು ಆರಂಭಿಸಲಾಗಿದೆ. ಕನ್ನಡಿಗರ ಮನೆ ಮನೆಗೆ ಭೇಟಿ ನೀಡಿ ಮಕ್ಕಳನ್ನು ಕನ್ನಡ ಶಾಲೆಗೇ ಕಳುಹಿಸಲು ಮನವಿ ಮಾಡಲಾಗುತ್ತಿದೆ ಎಂದು ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ ಮಾಹಿತಿ ನೀಡಿದರು.
ಈ ಅಭಿಯಾನದಲ್ಲಿ ಸುಮಾರು 25 ಜನ ವಿವಿಧ ಕನ್ನಡ ಶಾಲಾ ಶಿಕ್ಷಕರು ಹಾಗೂ ಕನ್ನಡ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಕನ್ನಡಿಗರ ಮನೆ ಮನೆಗೆ ತೆರಳಿ ಜುವಾರಿನಗರ ಕನ್ನಡ ಸಂಘದ ನೇತೃತ್ವದಲ್ಲಿ ಕನ್ನಡ ಶಾಲೆ ಉಳಿಸಿ ಕನ್ನಡ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜುವಾರಿಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ, ಕನ್ನಡ ಶಾಲೆಯ ಅತಿಥಿ ಶಿಕ್ಷಕ ಯಲ್ಲಾಲಿಂಗೇಶ ತಾಳಿಕೋಟಿ, ಬೈನಾ ಕಾಳಿದಾಸ ಶಿಕ್ಷಣ ಸಂಸ್ಥೆ ಮುಖ್ಯ ಶಿಕ್ಷಕ ಬಿ.ವಿ.ಪಾಟೀಲ್, ಶಿಕ್ಷಕರಾದ ಸುಧೀರ ಬೆಂಡೆ, ವಿಟಿ ಅರೆಬೆಂಚಿ, ಜುವಾರಿಗರ ಕನ್ನಡ ಸಂಘದ ಕಾರ್ಯದರ್ಶಿ ನದಾಫ್, ಶ್ರೀಕಾಂತ ಮರಿಗೌಡರ್, ಚಂದ್ರಶೇಖರ ಬಿಂಗಿ, ಕನ್ನಡ ಸಂಘದ ಸಹಕಾರ್ಯದರ್ಶಿ ಬಾಬುಗೌಡ ಮ್ಯಾಗೇರಿ, ರಾಘವೇಂದ್ರ ಅಂಬಿಗೇರ, ಶಿಕ್ಷಕರು ಮಲ್ಲಿಕಾರ್ಜುರ ನರಹಟ್ಟಿ, ಶಿಕ್ಷಕರಾದ ಹನುಮಂತ ಕಡ್ಲಿಮಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.