ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು: ಡಾ| ಸುರೇಂದ್ರ ಕುಮಾರ್‌


Team Udayavani, Jul 30, 2019, 1:42 PM IST

mumbai-tdy-4

ಮುಂಬಯಿ, ಜು. 29: ಮಹಾನಗರದಲ್ಲಿ ಆಟಿ ಆಚರಣೆಯು ಒಂದು ರೀತಿಯ ಆಡಂಬರದಂತಾಗಿದ್ದು, ಇದನ್ನು ಕಂಡ ಕಿರಿಯರು ಆಟಿ ತಿಂಗಳು ಕಷ್ಟದ ತಿಂಗಳೆಂದು ಭಾವಿಸದೆ ನಮ್ಮ ಹಿರಿಯರು ಮೊದಲು ಈ ರೀತಿ ಬಗೆಬಗೆಯ ತಿಂಡಿ ತಿನಿಸುಗಳಿಂದ ಆಡಂಬರದಲ್ಲಿ ಜೀವನ ನಡೆಸುತ್ತಿದ್ದರು ಅನ್ನುವಷ್ಟಕ್ಕೆ ತಲಪುವಂತಾಗಿದೆ. ಈ ವೇದಿಕೆಯು ಹಿಂದಿನ ಹಿರಿಯರ ಮನೆಯನ್ನು ನೆನಪಿಸುತ್ತಿದ್ದು, ನಿಜವಾಗಿಯೂ ಆಟಿಯ ಅರ್ಥವು ಇಲ್ಲಿ ಕಂಡುಬರುತ್ತಿದೆ. ಮಕ್ಕಳು ಕೇಳುವ ಎಲ್ಲವನ್ನೂ ನೀಡುವುದರ ಬದಲು ಮಕ್ಕಳಿಗೆ ಬೇಕಾದುದನ್ನೇ ನೀಡುವುದರೊಂದಿಗೆ ಅವರ ಪ್ರತಿಭೆಗೆ ಮಾರಕವಾಗದಂತೆ ಒಳ್ಳೆಯ ಮಾರ್ಗದರ್ಶನವನ್ನು ನೀಡಬೇಕಾಗಿದೆ ಎಂದು ಕನ್ನಡಿಗರ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ ಅಭಿಪ್ರಾಯಿಸಿದರು.

ಕುಲಾಲ ಸಂಘ ಮುಂಬಯಿ, ಇದರ ಮಹಿಳಾ ವಿಭಾಗದ ವತಿಯಿಂದ ಜು. 28ರಂದು ಅಪರಾಹ್ನ ದಾದರ್‌ ಪಶ್ಚಿಮದ ಡಿಎಸ್‌ ಬಾಬ್ರೆಕರ್‌ ಮಾರ್ಗದ ಐಇಎಸ್‌ ಮೋಡರ್ನ್ ಇಂಗ್ಲಿಷ್‌ ಸ್ಕೂಲ್ ತಳ ಮಹಡಿಯಲ್ಲಿ ಜರಗಿದ ‘ಆಟಿದ ಲೇಸ್‌’ ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ನಮ್ಮ ಹಿರಿಯರ ಸಂಪ್ರದಾಯದಲ್ಲಿ ಮೂಢನಂಬಿಕೆಯ ಬದಲು ಮೂಲ ನಂಬಿಕೆಯಿದೆ. ವೈಜ್ಞಾನಿಕೆ ಹಿನ್ನೆಲೆಯಿದೆ. ಆಟಿದ ಅಮವಾಸ್ಯೆಯಲ್ಲಿ ಹಿರಿಯರನ್ನು ನೆನಪಿಸುತ್ತೇವೆ. ದೈವ ದೇವರು ನಮ್ಮ ಮನೆಯೊಳಗಿದ್ದು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಾಗಮಂಡಲದಂತಹ ಪೂಜೆಯನ್ನು ಮಾಡುವುದಕ್ಕಿಂತ ಬಡ ಮಕ್ಕಳ ಶಿಕ್ಷಣಕ್ಕೆ ಸಹಕರಿಸೋಣ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್‌ ಎಲ್. ಕುಲಾಲ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಗಣ್ಯರೊಂದಿಗೆ ಉದ್ಘಾಟಿಸಿ ಅನಂತರ ಚೆನ್ನೆಮಣೆ ಆಡುವುದರ ಮೂಲಕ ಚಾಲನೆ ನೀಡಿದರು. ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌ ಮಾತನಾಡಿ, ಕೇವಲ ಕೆಲವೇ ದಿನಗಳಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದಕ್ಕೆ ಕೇಂದ್ರ ಸಮಿತಿಯ ಮಹಿಳಾ ವಿಬಾಗದ ಸದಸ್ಯರು ಮಾತ್ರವಲ್ಲದೆ ಎಲ್ಲ ಉಪಸಮಿತಿಗಳ ಮಹಿಳಾ ವಿಭಾಗವು ಸಹಕರಿಸಿದೆ ಎಂದು ನುಡಿದು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಕಲಾ ಜಗತ್ತು ಚಿಣ್ಣರ ಬಿಂಬದ ಟ್ರಷ್ಟಿ ವಿನೋದಿನಿ ಎಸ್‌. ಹೆಗ್ಡೆ ಅವರು ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಆಟಿ ತಿಂಗಳು ದಾರಿದ್ರ್ಯದ ತಿಂಗಳು ಅಂತ ಕೆಲವರು ಹೇಳುತ್ತಿದ್ದಾರೆ. ಆದರೆ ಪ್ರಕೃತಿ ನಮಗೆ ಎಲ್ಲವನ್ನೂ ನೀಡಿದರೂ, ಇದರ ಮಧ್ಯೆ ಕೆಮಿಕಲ್ನ್ನು ಉಪಯೋಗಿಸುದರಿಂದ ಪ್ರಕೃತಿ ನಿಜವಾದ ಶಕ್ತಿಯನ್ನು ಕಳಕೊಳ್ಳುತ್ತಿದ್ದು, ಇದರಿಂದ ಆರೋಗ್ಯ ಕೆಟ್ಟು ಹೋಗುತ್ತದೆ. ಹಿಂದಿನ ಕಾಲದಲ್ಲಿ ಈ ರೀತಿ ಇರಲಿಲ್ಲ. ಮೊದಲಿನವರು ಶ್ರಮ ಜೀವಿಗಳಾಗಿದ್ದು ಆರೋಗ್ಯವಂತರಾಗಿದ್ದರು ಎಂದರು.

ಅಂಬರ್‌ನಾಥ್‌ ಜೈದೀಪ್‌ ಕನ್‌ಸ್ಟ್ರಕ್ಷನ್‌ ಮಾಲಕರಾದ ಜಗದೀಶ್‌ ಆರ್‌. ಬಂಜನ್‌ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಕೋರಿದರು. ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಚಿತಾ ಡಿ. ಬಂಜನ್‌ ಪ್ರಾಸ್ತಾವಿಕವಾಗಿ ಮಾತನಾಡಿ ಆಟಿಯ ಬಗ್ಗೆ ವಿವರಿಸಿದರು.

ಪತ್ರಕರ್ತ ಬೊಕ್ಕಪಟ್ಣ ದಿನೇಶ್‌ ಕುಲಾಲ್, ಜ್ಯೋತಿ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್‌ ಸಾಲ್ಯಾನ್‌, ಸುನಿಲ್ ಸಾಲ್ಯಾನ್‌, ಮಮತಾ ಜಿ. ಸಾಲ್ಯಾನ್‌, ಸಂಘದ ಉಪಾಧಕ್ಷರಾದ ರಘು ಎ. ಮೂಲ್ಯ, ಗೌರವ ಪ್ರಧಾನ ಕಾರ್ಯದರ್ಶಿ ಕರುಣಾಕರ ಬಿ. ಸಾಲ್ಯಾನ್‌, ಗೌರವ ಕೋಶಾಧಿಕಾರಿ ಜಯ ಎಸ್‌. ಅಂಚನ್‌, ಅಮೂಲ್ಯ ಸಂಪಾದಕ ಶಂಕರ್‌ ಮೂಲ್ಯ ಮಾತನಾಡಿ ಕಾರ್ಯಕ್ರಮಕ್ಕೆ ಶುಭಕೋರಿ, ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಆಧುನಿಕ ಸೌಲಭ್ಯದ ಕುಲಾಲ ಭವನಕ್ಕೆ ಎಲ್ಲರ ಸಹಕಾರ ಕೋರಿದರು.

ಮಹಿಳಾ ವಿಭಾಗದ ಕೋಶಾಧಿಕಾರಿ ಲತಾ ಎಸ್‌. ಮೂಲ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಥಳೀಯ ಸಮಿತಿಗಳ ಕಾರ್ಯಾಧ್ಯಕ್ಷರನ್ನು ಹಾಗೂ ಸ್ಥಳೀಯ ಸಮಿತಿಗಳ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರನ್ನು ಗೌರವಿಸಲಾಯಿತು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌ ಸ್ವಾಗತಿಸಿದರು ಕಾರ್ಯದರ್ಶಿ ಮಾಲತಿ ಜೆ. ಅಂಚನ್‌ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ರೇಖಾ ಮೂಲ್ಯ ಮತ್ತು ಆಶಾ ಕುಲಾಲ್ ಪ್ರಾರ್ಥನೆಗೈದರು. ಕಾರ್ಯಕಾರಿ ಸಮಿತಿಯ ಮತ್ತು ಉಪಸಮಿತಿಗಳ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಮಕ್ಕಳಿಂದ ಆಟಿಯ ನೃತ್ಯ ಮತ್ತು ಮಹಿಳೆಯರಿಂದ ಪಾಡ್ದನ ನಡೆಯಿತು.

ಚಿತ್ರ-ವರದಿ: ಈಶ್ವರ ಎಂ. ಐಲ್

ಟಾಪ್ ನ್ಯೂಸ್

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

2-kunigal

Kunigal:ಮನೆಗೆ ನುಗ್ಗಿದ ದುಷ್ಕರ್ಮಿಗಳು; ರಾಡ್ ನಿಂದ ತಲೆಗೆ ಹೊಡೆದು ಮಾಂಗಲ್ಯಸರ ದೋಚಿ ಪರಾರಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Australia won the BGT 2024-25

INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್‌ ಗಾವಸ್ಕರ್‌ ಟ್ರೋಫಿ ಸೋತ ಭಾರತ

Private-Bus

Private Bus fare: ಶೀಘ್ರದಲ್ಲೇ ಖಾಸಗಿ ಬಸ್‌ ಪ್ರಯಾಣ ದರವೂ ಏರಿಕೆ?

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

rahul

IIT Madras: ಕಾಂಗ್ರೆಸ್ ಮತ್ತು ಬಿಜೆಪಿ ಹೇಗೆ ಭಿನ್ನ? ಉತ್ತರ ನೀಡಿದ ರಾಹುಲ್ ಗಾಂಧಿ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.