ಹವ್ಯಾಸಿ ಕಲಾವೃಂದ ಪಿಂಪ್ರಿ -ಚಿಂಚ್‌ವಾಡ್‌: ಕರಾವಳಿ ಉತ್ಸವ

Team Udayavani, Jan 18, 2017, 4:51 PM IST

17-Mum01a.jpg

ಪುಣೆ: ಪುಣೆಯಲ್ಲಿ ಕನ್ನಡಿಗರ ಹತ್ತು ಹಲವು ಸಂಘ-ಸಂಸ್ಥೆಗಳಿದ್ದು ವಿವಿಧ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ತುಳು-ಕನ್ನಡಿಗರನ್ನು ಒಗ್ಗೂಡಿಸುವುದರಲ್ಲಿ ತೊಡಗಿಸಿಕೊಂಡಿವೆ. ಆದರೆ ಇದಕ್ಕೆ ವ್ಯತಿರಿಕ್ತವೆಂಬಂತೆ ಸದಾ ಹೊಸತನದ ಅನ್ವೇಷಣೆಯಲ್ಲಿ ತೊಡಗಿಕೊಂಡಿರುವ  ಹವ್ಯಾಸಿ ಕಲಾವೃಂದ ಪಿಂಪ್ರಿ -ಚಿಂಚಾÌಡ್‌ನ‌ ನೂತನ ಪರಿಕಲ್ಪನೆಯಲ್ಲಿ ಪಡಿಮೂಡಿದ ತುಳುನಾಡª ತಮ್ಮನ -ಕರಾವಳಿ ಉತ್ಸವವು ಜ. 8 ರಂದು ದೇಹುರೋಡ್‌ ಸಮೀರಾ ಲಾನ್ಸ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ತುಳುನಾಡಿನ ರೀತಿಯ ತೆಂಗಿನ ಗರಿಗಳಿಂದ ಅಲಂಕೃತ ಸ್ವಾಗತ ಕಮಾನಿನೊಂದಿಗೆ ಹಾಗೂ ಯಕ್ಷಗಾನ ವೇಷಧಾರಿ ಕಲಾವಿದರು ಚೆಂಡೆ, ಕೊಂಬು ವಾದ್ಯಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು. ಭವ್ಯವಾದ ವಿದ್ಯುದ್ದೀಪಗಳಿಂದಲಂಕೃತವಾದ ವೇದಿಕೆಯು ತುಳು-ಕನ್ನಡಿಗರ ಗಮನಸೆಳೆಯಿತು. ಪುಣೆಯ ವಿವಿಧ ಸಂಘ ಸಂಸ್ಥೆಗಳ ಗಣ್ಯಾತಿಗಣ್ಯರು ಅತಿಥಿಗಳು ಪ್ರಾರಂಭದಲ್ಲಿ ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಟ್ರಾಕ್ಟಿವ್‌ ಮೆಲೋಡೀಸ್‌ ಸಂಗೀತ ತಂಡ ಮಂಗಳೂರು ಕಲಾವಿದರಿಂದ ವೈವಿಧ್ಯಮಯ ತುಳು -ಕನ್ನಡ ಹಾಡುಗಳ ರಸಮಂಜರಿ ಕಾರ್ಯಕ್ರಮವು  ಸೇರಿದ್ದ ಕಲಾರಸಿಕರ ಮನಸೂರೆಗೊಂಡಿತ್ತು. ತುಳು ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿಸುತ್ತಿರುವ ಪಿಲಿಬೈಲ… ಯಮುನಕ್ಕ  ಚಲನಚಿತ್ರದ ನಾಯಕ ನಟ ಪೃಥ್ವಿ ಅಂಬರ್‌, ನಟಿ ಸೋನಾಲಿ ಮೊಂತೆರೋ ಹಾಗೂ ಇಡೀ ಚಿತ್ರತಂಡದಿಂದ ಹಾಡು, ನೃತ್ಯ, ಹಾಸ್ಯ ಕಾರ್ಯಕ್ರಮಗಳು ನಡೆದವು. ಪುಣೆಯ ಪ್ರಸಿದ್ಧ ನೃತ್ಯ ಕಲಾವಿದ ಅಕ್ರಂ ಶೇಖ್‌ ಅವರಿಂದ ನೃತ್ಯ ಹಾಗೂ ಊರಿನ ಹುಲಿವೇಷ ತಂಡದಿಂದ ಆಕರ್ಷಕ ನೃತ್ಯ ಪ್ರದರ್ಶನ ನಡೆಯಿತು.

ಕಾರ್ಯಕ್ರಮವನ್ನು ಸುಧಾಕರ ಶೆಟ್ಟಿ ಪೆಲತ್ತೂರು ಮತ್ತು ಅರ್ಪಿತಾ ಶೆಟ್ಟಿ ನಿರೂಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ವಿಶೇಷ ದೇಣಿಗೆ ನೀಡಿ ಸಹಕರಿಸಿದ ಗಣ್ಯರನ್ನು ಹವ್ಯಾಸಿ ಕಲಾವೃಂದದ ಸದಸ್ಯರು ಮೈಸೂರು ಪೇಟ ತೊಡಿಸಿ, ಶಾಲು ಹೊದೆಸಿ, ಸ್ಮರಣಿಕೆ, ಪುಷ್ಪಗುತ್ಛವನ್ನಿತ್ತು ಸಮ್ಮಾನಿಸಿದರು. ಹವ್ಯಾಸಿ ಕಲಾವೃಂದದ ಸದಸ್ಯರುಗಳಾದ ಜಯಾನಂದ ಶೆಟ್ಟಿ, ದಿನೇಶ್‌ ಶೆಟ್ಟಿ ಉಜಿರೆ, ಪ್ರಶಾಂತ್‌ ಶೆಟ್ಟಿ, ಅವಿನಾಶ್‌ ಶೆಟ್ಟಿ, ಸುಧಾಕರ ಶೆಟ್ಟಿ ಪೆಲತ್ತೂರು, ಚೇತನ್‌ ಶೆಟ್ಟಿ ಮೂಲ್ಕಿ, ಸಂತೋಷ್‌ ಶೆಟ್ಟಿ ಪೆರ್ಡೂರು, ಸತೀಶ್‌ ಶೆಟ್ಟಿ, ನಿಧೀಶ್‌ ಶೆಟ್ಟಿ ನಿಟ್ಟೆ, ಜೀವನ್‌ ಶೆಟ್ಟಿ ದೊಂಡೇರಂಗಡಿ, ದಿನೇಶ್‌ ಶೆಟ್ಟಿ ನಡಿಯೋಡಿಗುತ್ತು ಹಾಗೂ ತಾರಾನಾಥ ರೈ ಈಶ್ವರಮಂಗಲ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ರಾಕೇಶ್‌ ಶೆಟ್ಟಿ ಬೆಳ್ಳಾರೆ ಅವರು ವಿಶೇಷವಾಗಿ ಸಹಕರಿಸಿದರು.   

  ಕರಾವಳಿ ಉತ್ಸವದ ಮುಖ್ಯ ಅಂಗವಾದ ತುಳುನಾಡ ತಮ್ಮನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ತುಳುನಾಡಿನ ಸಾಂಪ್ರದಾಯಿಕ ಸಸ್ಯಾಹಾರಿ ಹಾಗೂ ಮಾಂಸಾಹಾರಿ ವ್ಯಂಜನಗಳ ವಿವಿಧ ಕೌಂಟರುಗಳು ಲಾನ್ಸ್‌ನ ಸುತ್ತಮುತ್ತ ಅಳವಡಿಸಲಾಗಿದ್ದು,  ಸೇರಿದ್ದ ಜನರಿಗೆ ಹೊಸ ಸವಿರುಚಿಯನ್ನು ನೀಡಿತು. ಮುಖ್ಯವಾಗಿ ವಿವಿಧ ರೀತಿಯ ಮೀನಿನ ವ್ಯಂಜನಗಳು, ಕೋರಿ ರೊಟ್ಟಿ, ಮರುವಾಯಿ ಪುಂಡಿ, ಆಪಂ, ನೀರ್‌ದೋಸೆ, ಸೇಮಿಗೆ, ಪತ್ರೊಡೆ, ವಿವಿಧ ರೀತಿಯ ಪಾಯಸಗಳು, ಗೆಂಡದಡ್ಡೆ, ಮೂಡೆ, ಬಂಗುಡೆ ಪುಳಿಮುಂಚಿ, ತಾಟೆಗಸಿ, ತಿಮರೆ  ಚಟ್ನಿ, ಎಟ್ಟಿ ಚಟ್ನಿ, ಕಡ್ಲೆ ಮನೋಳಿ, ಬಸಳೆಗಸಿ ಮೊದಲಾದ ಹಲವು ಖಾದ್ಯಗಳು ಸೇರಿದ್ದವು.     
  
   ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.