ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕಾರ್ಯಪ್ರವೃತ: ಚಂದ್ರಹಾಸ್‌ ಕೆ. ಶೆಟ್ಟಿ

Team Udayavani, Oct 31, 2021, 12:19 PM IST

ತ್ವರಿತಗತಿಯಲ್ಲಿ ಯೋಜನೆ ಪೂರ್ಣಗೊಳಿಸಲು ಕಾರ್ಯಪ್ರವೃತ: ಚಂದ್ರಹಾಸ್‌ ಕೆ. ಶೆಟ್ಟಿ

ಮುಂಬಯಿ: ಸಮಾಜದ ಅಭಿ ವೃದಿ§ ಶಿಕ್ಷಣದಿಂದ ಮಾತ್ರ ಸಾಧ್ಯ ಎಂಬ ಧ್ಯೇಯ ವಾಕ್ಯದೊಂದಿಗೆ ಆರಂಭದಿಂದಲೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಾ ಬಂದಿ ರುವ ಬಂಟರ ಸಂಘವು ಇದೀಗ ಮೂರನೇ ವಿದ್ಯಾ ಸಂಕುಲವನ್ನು ಬೊರಿವಲಿ ಪಶ್ಚಿಮದ ಐಸಿ ಕಾಲನಿಯಲ್ಲಿ ಸ್ಥಾಪಿಸಲು ಮುಂದಾ ಗಿದೆ. ಈ ನೂತನ ಶಿಕ್ಷಣ ಸಂಕೀರ್ಣ ಮುಂದಿನ ಎರಡೂವರೆ ವರ್ಷಗಳಲ್ಲಿ ಲೋಕಾರ್ಪಣೆ ಗೊಳ್ಳು ವಂತೆ ಬಂಟರ ಸಂಘ ಮತ್ತು ಬೊರಿ ವಲಿ ಶಿಕ್ಷಣ ಸಂಸ್ಥೆಯು ತ್ವರಿತಗತಿಯಲ್ಲಿ ಕಾಮ ಗಾರಿ ಯೋಜ ನೆಯನ್ನು ಆರಂಭಿಸಲು ಕಾರ್ಯ ಪ್ರವೃ ತವಾಗಿದೆ ಎಂದು ಬಂಟರ ಸಂಘ ಮುಂಬಯಿ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ನುಡಿದರು.

ಅ. 29ರಂದು ಅಪರಾಹ್ನ ಬೊರಿವಲಿ ಐಸಿ ಕಾಲನಿಯಲ್ಲಿರುವ ಸಂಘದ ನೂತನ ಶಿಕ್ಷಣ ಸಂಕೀರ್ಣ ಸ್ಥಾಪನೆಗೊಳ್ಳಲಿರುವ ಸ್ಥಳದಲ್ಲಿ ಜರಗಿದ ಕಾಮಗಾರಿ ಚಾಲನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೂತನ ವಿದ್ಯಾ ಸಂಸ್ಥೆಗಾಗಿ 2020ರಲ್ಲಿ ಸಂಘದ ಅಧ್ಯಕ್ಷರಾಗಿದ್ದ ಪದ್ಮನಾಭ ಎಸ್‌. ಪಯ್ಯಡೆ ಮತ್ತು ಬೊರಿವಲಿ ಶಿಕ್ಷಣ ಸಮಿತಿಯ ಕಾರ್ಯಾ ಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ ಅವರ ಕಾರ್ಯಾವಧಿಯಲ್ಲಿ ಜಮೀನನ್ನು ಖರೀದಿ ಸಲಾಗಿದ್ದು, ಈಗ ವಿದ್ಯಾ ಸಂಸ್ಥೆಯ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ನನ್ನ ಮೇಲೆ ಬಿದ್ದಿ ರುವುದು ಯೋಗಾನುಯೋಗ ಎಂದು ಭಾವಿ ಸುತ್ತೇನೆ. ಸಂಸದರಾದ ಗೋಪಾಲ್‌ ಶೆಟ್ಟಿ ಅವರ ಮಾರ್ಗ ದರ್ಶನ, ಸಹಕಾರ ಪ್ರೋತ್ಸಾಹ ವನ್ನು ಮರೆಯು ವಂತಿಲ್ಲ. ಬೊರಿವಲಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಡಾ| ಪಿ. ವಿ. ಶೆಟ್ಟಿ ಅವರ ದಕ್ಷ ನೇತೃತ್ವದಲ್ಲಿ ಸಮಿತಿಯ ಪದಾಧಿಕಾರಿಗಳು, ಯೋಜನಾಭಿವೃದ್ಧಿ ಸಮಿತಿಯ ಸಂಚಾಲಕ ರವಿ ಎಸ್‌. ಶೆಟ್ಟಿ ಸಾಯಿಪ್ಯಾಲೇಸ್‌, ಸಹ ಸಂಚಾಲಕ ಕಿರಣ್‌ ಶೆಟ್ಟಿ ಆಲ್‌ಕಾರ್ಗೋ ಸಹಿತ ಎಲ್ಲ ಸದಸ್ಯರು ಅತ್ಯು ತ್ತಮ ರೀತಿಯಿಂದ ಸೇವಾ ನಿರತರಾಗಿ ನನಗೆ ಸಂಪೂರ್ಣ ಸಹಕಾರ, ಪ್ರೋತ್ಸಾಹ ನೀಡುತ್ತಿ ದ್ದಾರೆ. ದಾನಿಗಳೂ ಈ ಯೋಜನೆಗೆ ದೇಣಿಗೆ ನೀಡಲು ಸ್ವಯಂ ಮುಂದೆ ಬರುತ್ತಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ನೂತನ ಶಿಕ್ಷಣ ಸಂಸ್ಥೆಯು ಎರಡು ನೆಲ ಮಹಡಿ ಸಹಿತ ಏಳು ಮಹಡಿಗಳನ್ನು ಹೊಂದಲಿದ್ದು, ಈಜು ಕೊಳದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಸುಮಾರು 3,000 ವಿದ್ಯಾರ್ಥಿಗಳ ಇದರ ಪ್ರಯೋ ಜನ ಪಡೆಯ ಲಿದ್ದಾರೆ. ವಿದ್ಯಾರ್ಥಿಗಳು ಮತ್ತು ಪಾಲಕರ ಆವಶ್ಯಕತೆಗಳಿಗೆ ಅನುಸಾರ ವಿವಿಧ ಸೌಲಭ್ಯಗಳೊಂದಿಗೆ ಉತ್ತಮ ಗುಣ ಮಟ್ಟದ ಶಿಕ್ಷಣ ಬೋಧನೆಗೆ ಪ್ರಾಧಾನ್ಯತೆ ನೀಡಲಾಗುವುದು. ಈ ಶಿಕ್ಷಣ ಸಂಕುಲದಲ್ಲಿ ಐಜಿಸಿ ಎಚ್‌ಇ ಕ್ಯಾಂಬ್ರಿಜ್‌ ಯೂನಿವರ್ಸಿಟಿ ಕೋರ್ಸ್‌, ಐಬಿ ಹಾಗೂ ಸಿಬಿಎಸ್‌ಇ ಕೋರ್ಸ್‌ಗಳನ್ನು ತೆರೆಯಲಾಗುವುದು. ಸುಮಾರು 110 ಕೋ. ರೂ. ಗಳಿಗೂ ಅಧಿಕ ವೆಚ್ಚದಿಂದ ನಿರ್ಮಾಣಗೊಳ್ಳಲಿರುವ ಈ ಯೋಜನೆಯನ್ನು ಯಶಸ್ವಿಗೊಳಿಸಲು ಬಂಟ ಬಾಂಧವರು, ದಾನಿಗಳ, ಮುಂದೆ ಬರಬೇಕು ಎಂದು ವಿನಂತಿಸಿದರು.

ಸಂಘದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಮಾತನಾಡಿ, ನೂತನ ಶಿಕ್ಷಣ ಸಂಸ್ಥೆಗಾಗಿ ಅನೇಕ ಸ್ಥಳಗಳಲ್ಲಿ ಜಮೀನು ನೋಡಿ ಕೊನೆಗೆ ಬೊರಿವಲಿಯಲ್ಲಿ ಜಮೀನನ್ನು ಖರೀದಿಸಲು ಸಫಲಗೊಂಡಿದ್ದೇವೆ. ಕಡಿಮೆ ಬೆಲೆಯಲ್ಲಿ ಜಮೀನು ಖರೀದಿಸುವ ಪ್ರಕ್ರಿಯೆ ಯಶಸ್ಸುಗೊಂಡಿರುವುದು ಅಭಿಮಾನದ ಸಂಗತಿ. ಒಳ್ಳೆಯ ಭಾವನೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹ ಸದಾ ಇದ್ದೇ ಇದೆ. ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಸಂಘದ ಮಾಜಿ ಅಧ್ಯಕ್ಷ ಬಿ. ವಿವೇಕ್‌ ಶೆಟ್ಟಿ ಅವರು ಮಾತನಾಡಿ, ಅತ್ಯಂತ ಕಡಿಮೆ ಸಮಯದಲ್ಲಿ ನೂತನ ಶಿಕ್ಷಣ ಸಂಸ್ಥೆಯ ಎಲ್ಲ ಅನುಮತಿ ದಾಖಲೆ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಿದ ಬೊರಿವಲಿ ಶಿಕ್ಷಣ ಸಂಸ್ಥೆಯ ಕಾರ್ಯ ಕುಶಲತೆ ಅಭಿನಂದನೀಯ. ಚಂದ್ರ ಹಾಸ್‌ ಶೆಟ್ಟಿ ಅವರ ನೇತೃತ್ವದಲ್ಲಿ ಈ ಯೋಜನೆ ಯಶಸ್ವಿಯಾಗಿ ಸಾಕಾರಗೊಳ್ಳಲಿ ಎಂದು ಹಾರೈಸಿದರು.

ಇದೇ ಸಂದರ್ಭದಲ್ಲಿ ಸಂಸದ ಗೋಪಾಲ್‌ ಶೆಟ್ಟಿ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂ ಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ, ಶಾಸಕ ಜಗದೀಶ್‌ ಓಜಾ, ಸಂಘದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಸಂಘದ ವಿಶ್ವಸ್ಥ ಸದಾಶಿವ ಶೆಟ್ಟಿ ಹೇರಂಬಾ ಇಂಡಸ್ಟ್ರೀಸ್‌, ಮಾಜಿ ಅಧ್ಯಕ್ಷ ಬಿ. ವಿವೇಕ್‌ ಶೆಟ್ಟಿ, ಪೊವಾಯಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಬಿ. ಆರ್‌. ಶೆಟ್ಟಿ, ಮಾತೃಭೂಮಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಸಂಘದ ಮಹಿಳಾ ವಿಭಾ ಗದ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ ಅವ ರನ್ನು ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅವರು ಗೌರವಿಸಿದರು. ಸಮಾರಂಭದಲ್ಲಿ ಬೊರಿ  ವಲಿ ನೂತನ ಶಿಕ್ಷಣ ಸಮಿತಿಯ ನಿಕಟ ಪೂರ್ವ ಕಾರ್ಯಾ ಧ್ಯಕ್ಷ ಮುಂಡಪ್ಪ ಎಸ್‌. ಪಯ್ಯಡೆ ಅವ ರನ್ನು ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಯಿತು.

ನೂತನ ಶಿಕ್ಷಣ ಕಾಮಗಾರಿಯನ್ನು ಸಂಸದ ಗೋಪಾಲ್‌ ಶೆಟ್ಟಿ ಅವರು ದೀಪಪ್ರಜ್ವಲಿಸಿ, ತೆಂಗಿನ ಕಾಯಿ ಒಡೆದು ಉದ್ಘಾಟಿಸಿದರು. ಆರಂಭದಲ್ಲಿ ಶೈಲಜಾ ಶೆಟ್ಟಿ ಪ್ರಾರ್ಥನೆಗೈದರು. ಸಂಘದ ಉಪಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಸ್ವಾಗತಿಸಿದರು. ವೇದಿಕೆಯಲ್ಲಿ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್‌. ಕೆ. ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಹರೀಶ್‌ ಡಿ. ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್‌. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಾಗರ್‌ ಡಿ. ಶೆಟ್ಟಿ, ಬೊರಿವಲಿ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಡಾ| ಪಿ. ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಷರಾದ ಎರ್ಮಾಳ್‌ ಹರೀಶ್‌ ಶೆಟ್ಟಿ, ಮಹೇಶ್‌ ಎಸ್‌. ಶೆಟ್ಟಿ, ಕಾರ್ಯದರ್ಶಿ ಡಾ| ಪ್ರಭಾಕರ ಶೆಟ್ಟಿ ಬೋಳ, ಕೋಶಾಧಿಕಾರಿ ಸಿಎ ಅಶೋಕ್‌ ಶೆಟ್ಟಿ, ಯೋಜನಾಭಿವೃದ್ಧಿಯ ಸಂಚಾಲಕ ರವಿ ಎಸ್‌. ಶೆಟ್ಟಿ ಸಾಯಿಪ್ಯಾಲೇಸ್‌, ಸಹ ಸಂಚಾಲಕ ಕಿರಣ್‌ ಶೆಟ್ಟಿ ಆಲ್‌ಕಾರ್ಗೋ, ಶಾಲಾಭಿವೃದ್ಧಿ ಮತ್ತು ಶೈಕ್ಷಣಿಕ ಉಪಸಮಿತಿಯ ಸಂಚಾಲಕ ನಿತ್ಯಾನಂದ ಹೆಗ್ಡೆ ಮತ್ತಿತರು ಉಪಸ್ಥಿತರಿದ್ದರು.

ಸಂಘದ ಉಪಸಮಿತಿ, ಪ್ರಾದೇಶಿಕ ಸಮಿ ತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಬಂಟರ ವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳ ಕಾರ್ಯಕ್ರಮ ನಿರ್ವಹಿಸಿದರು.

ಬಂಟರ ಸಂಘದ ಮೂರನೇ ಶಿಕ್ಷಣ ಸಂಸ್ಥೆಯಾಗಿ ರೂಪುಗೊಳ್ಳುತ್ತಿರುವ ಬೊರಿವಲಿ ಶಿಕ್ಷಣ ಯೋಜನೆಗೆ ತನ್ನಿಂದಾದ ಸಹಕಾರ ನೀಡುತ್ತೇನೆ. ಯೋಜನೆಯು ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲು ಬೊರಿವಲಿ ಶಿಕ್ಷಣ ಸಮಿ ತಿಯು ಸಂಘದ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಮತ್ತು ಪದಾಧಿಕಾರಿ ಗಳೊಂದಿಗೆ ಶ್ರಮಿಸುತ್ತಿದೆ. ಅವರೆಲ್ಲರ ಸಾಧನೆ ಅಭಿನಂದನೀಯ. ಯಾವುದೇ ಕಾರ್ಯಯೋಜನೆಗಳು ಆರಂಭಗೊಳ್ಳುವಾಗ ಕೆಲವೊಂದು ಅಡೆ ತಡೆ ಗಳು ಸಹಜ. ಅದನ್ನು ಎದುರಿಸಿ ಆತ್ಮ ಸಮರ್ಪಣೆಯೊಂದಿಗೆ ಕಾರ್ಯ ನಿರ್ವಹಿಸಿದಾಗ ಯಶಸ್ಸು ನಮ್ಮದಾಗುತ್ತದೆ. ಪರಿಸರದ ಬಂಟ ಬಾಂಧ ವರಿಗೆ ಹಾಗೂ ಇತರರಿಗೆ ಈ ವಿದ್ಯಾಲಯದಿಂದ ಹೆಚ್ಚಿನ ಪ್ರಯೋಜನ ಸಿಗುವಂತಾಗಲಿ.-ಗೋಪಾಲ್‌ ಶೆಟ್ಟಿ, ಸಂಸದ

ಬೊರಿವಲಿ ಶಿಕ್ಷಣ ಸಂಸ್ಥೆಗೆ ಈ ಹಿಂದೆಯೇ ಅದ್ದೂರಿಯಿಂದ ಅಡಿಗಲ್ಲು ಹಾಕಿರುವುದು ನೆನಪಿಗೆ ಬರುತ್ತಿದೆ. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅವಧಿಯಲ್ಲಿ ಸಂಕಲ್ಪಗೊಂಡ ಈ ಯೋಜನೆಯು ಇದೀಗ ಅಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಮುಂದುವರಿದು ಯಶಸ್ವಿ ಯೋಜನೆಗಾಗಿ ಹೆಸರು ಪಡೆಯಲಿ. ಬೊರಿವಲಿ ಶಿಕ್ಷಣ ಸಮಿತಿಯು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿದ್ದು, ಅದಕ್ಕಾಗಿ ಸಮಿತಿಯನ್ನು ಅಭಿನಂದಿಸುತ್ತಿದ್ದೇನೆ.-ಐಕಳ ಹರೀಶ್‌ ಶೆಟ್ಟಿ, ಅಧ್ಯಕ್ಷ, ಜಾಗತಿಕ ಬಂಟರ ಸಂಘ ಮುಂಬಯಿ

ಚಿತ್ರ-ವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.