ಖಾಂದೇಶ್ ಭಾಸ್ಕರ್ ವೈ.ಶೆಟ್ಟಿ ದಂಪತಿಗೆ ಅಭಿನಂದನೆ
Team Udayavani, Apr 5, 2019, 12:14 PM IST
ನವಿಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಗೌರವ ಕಾರ್ಯದರ್ಶಿ, ಖಾಂದೇಶ್ ಶ್ರೀ ಅಯ್ಯಪ್ಪ ಭಕ್ತವೃಂದ ಮಂಡಲ ಕಾಂದ ಕಾಲೋನಿ ಇದರ ಗೌರವಾಧ್ಯಕ್ಷ, ಹೊಟೇಲ್ ಉದ್ಯಮಿ ಖಾಂದೇಶ್ ಭಾಸ್ಕರ್ ವೈ. ಶೆಟ್ಟಿ ಮತ್ತು ಪ್ರವೀಣಾ ಬಿ. ಶೆಟ್ಟಿ ಅವರ ಅಭಿನಂದನಾ ಸಮಾರಂಭವು ಮಾ. 31ರಂದು ಸಂಜೆ ಹೊಟೇಲ್ ರಮಡಾ ಬ್ಯಾಂಕ್ವೆಟ್ ಸಭಾಗೃಹದಲ್ಲಿ ನಡೆಯಿತು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರಂಭದಲ್ಲಿ ವೈವಾಹಿಕ ಜೀವನದ ಬೆಳ್ಳಿಹಬ್ಬವನ್ನು ಸಂಭ್ರಮಿಸಿದ ಖಾಂದೇಶ್ ಭಾಸ್ಕರ್ ಶೆಟ್ಟಿ ದಂಪತಿಯನ್ನು ವಾದ್ಯ-ಕೊಂಬು-ಕಹಳೆಯೊಂದಿಗೆ ವೇದಿಕೆಗೆ ಬರಮಾಡಿಕೊಳ್ಳಲಾಯಿತು. ಬಳಿಕ ಭಾಸ್ಕರ್ ಶೆಟ್ಟಿ ದಂಪತಿಯನ್ನು ಗಣ್ಯರು ಮತ್ತು ಗುರುಹಿರಿಯರು, ಆತ್ಮೀಯರು, ಹಿತೈಷಿಗಳ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಬೃಹತ್ ಹಾರವನ್ನು ಹಾಕಿ ಅಭಿನಂದಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಖಾಂದೇಶ್ ಭಾಸ್ಕರ್ ಶೆಟ್ಟಿ ದಂಪತಿಯ ಮಕ್ಕಳಾದ ಸ್ವಸ್ತಿ ಬಿ. ಶೆಟ್ಟಿ, ರಕ್ಷಣ್ ಬಿ. ಶೆಟ್ಟಿ ಮತ್ತು ಬಂಧು-ಬಳಗದವರು ಉಪಸ್ಥಿತರಿದ್ದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕೋಶಾಧಿಕಾರಿ ಉಳೂ¤ರು ಮೋಹನ್‌ದಾಸ್ ಶೆಟ್ಟಿ, ಅವರು ಬೃಹತ್ ಹಾರವನ್ನು ಹಾಕಿ ಅಭಿನಂದಿಸಿ ಶುಭಹಾರೈಸಿದರು.
ಸಮಾರಂಭದಲ್ಲಿ ಚಂದ್ರಹಾಸ್ ವೈ. ಶೆಟ್ಟಿ ಮತ್ತು ಪರಿವಾರ, ಶಾಂತಾರಾಜ ವೈ. ಶೆಟ್ಟಿ ಮತ್ತು ಪರಿವಾರ, ಖಾಂದೇಶ್ ಶ್ರೀ ಅಯ್ಯಪ್ಪ ಭಕ್ತವೃಂದ ಕಾಂದಕಾಲನಿಯ ಪದಾಧಿಕಾರಿಗಳು, ಸದ್ಗುರು ಶ್ರೀ ನಿತ್ಯಾನಂದ ಸೇವಾ ಸಮಿತಿ ಸಿಬಿಡಿ ಬೇಲಾಪುರ ಸ್ಥಾಪಕಾಧ್ಯಕ್ಷ ಸಿಬಿಡಿ ಭಾಸ್ಕರ್ ಶೆಟ್ಟಿ, ಉದ್ಯಮಿ ಸಂಜೀವ ಎನ್. ಶೆಟ್ಟಿ, ಭವಾನಿ ಶಿಪ್ಪಿಂಗ್ ಸಂಸ್ಥೆಯ ಸಿಎಂಡಿ ಕೆ. ಡಿ. ಶೆಟ್ಟಿ, ನವಿಮುಂಬಯಿ ಹೊಟೇಲ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ದಯಾನಂದ ಶೆಟ್ಟಿ, ಮಹೇಶ್ ಶೆಟ್ಟಿ, ಆದರ್ಶ್ ಶೆಟ್ಟಿ, ಸದಾಶಿವ ಶೆಟ್ಟಿ, ನಿತ್ಯಾನಂದ ಹೆಗೆr ಶಿರ್ವ ನಡಿಬೆಟ್ಟು, ಕಿಶೋರ್ ಕುಮಾರ್ ಕುತ್ಯಾರ್, ಬಂಟರ ಸಂಘ ಮಧ್ಯ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಇಂದ್ರಾಳಿ ದಿವಾಕರ ಶೆಟ್ಟಿ, ಬಂಟರ ಸಂಘ ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಡ್ಕ ಕರುಣಾಕರ ಶೆಟ್ಟಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಡಾ| ಆರ್. ಕೆ. ಶೆಟ್ಟಿ, ಥಾಣೆ ಬಂಟ್ಸ್‌ನ ಅಧ್ಯಕ್ಷ ಕುಶಲ್ ಸಿ. ಭಂಡಾರಿ, ವಸಂತ ಎನ್. ಶೆಟ್ಟಿ ಪಲಿಮಾರು, ರಮಡಾ ಹೊಟೇಲ್‌ನ ನಿರ್ದೇಶಕರುಳಾದ ಹರೀಶ್ ಶೆಟ್ಟಿ ಮತ್ತು ದಿವಾಕರ ಶೆಟ್ಟಿ, ಘನ್ಸೋಲಿ ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಶ್ರೀ ಶನೀಶ್ವರ ಮಂದಿರ ನೆರೂಲ್ ಅಧ್ಯಕ್ಷ ಧರ್ಮದರ್ಶಿ ರಮೇಶ್ ಎಂ. ಪೂಜಾರಿ, ಉದ್ಯಮಿ ರವೀಂದ್ರನಾಥ ಎಂ. ಭಂಡಾರಿ, ಬಂಟ್ಸ್ ಅಸೋಸಿಯೇಶನ್ ಮಾಜಿ ಅಧ್ಯಕ್ಷ ಶ್ಯಾಮ್ ಎನ್. ಶೆಟ್ಟಿ, ತಾಳಿಪಾಡಿಗುತ್ತು ಭಾಸ್ಕರ್ ಶೆಟ್ಟಿ, ಭಾಸ್ಕರ ಡಿ. ಶೆಟ್ಟಿ, ಶಿವರಾಮ ಶೆಟ್ಟಿ, ಮಹೇಶ್ ಬಿ. ಶೆಟ್ಟಿ, ಪ್ರಸನ್ನ ಆರ್. ಶೆಟ್ಟಿ, ಹೊಟೇಲ್ ಉದ್ಯಮಿಗಳಾದ ಗಣೇಶ್ ಡಿ. ಮೂಡಬಿದ್ರೆ, ದಿನೇಶ್ ಎನ್. ಸಾಲ್ಯಾನ್, ಸುಧೀರ್ ಶೆಟ್ಟಿ, ಕೃಷ್ಣ ಶೆಟ್ಟಿ, ಅರುಣ್ ಶೆಟ್ಟಿ, ಸುರೇಶ್ ಶೆಟ್ಟಿ, ಹರೀಶ್ ಶೆಟ್ಟಿ ಮೂಡಬಿದ್ರೆ, ಆದ್ಯಪಾಡಿ ಕರುಣಾಕರ ಆಳ್ವ, ದೆಪ್ಪುಣಿಗುತ್ತು ಚಂದ್ರಹಾಸ್ ಶೆಟ್ಟಿ, ಮೋಹನ್ ಕುಮಾರ್ ಜೆ. ಗೌಡ, ಪ್ರಕಾಶ್ ವಿ. ಶೆಟ್ಟಿ ನಂದಿಕೂರು, ಸದಾನಂದ ಶೆಟ್ಟಿ, ರವಿ ಆರ್. ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದು ಶುಭಸಾರೈಸಿದರು.
ಬಂಟರ ಸಂಘ ಮುಂಬಯಿ ಇದರ ಒಂಭತ್ತು ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆಯರು, ನವಿಮುಂಬಯಿ ಹೊಟೇಲ್ ಅಸೋಸಿಯೇಶನ್ ಪದಾಧಿಕಾರಿಗಳು, ಸರ್ವ ಸದಸ್ಯರು, ಹಿಂದು ಜೂನಿಯರ್ ಕಾಲೇಜ್ ಶಿರ್ವ ಹಳೆ ವಿದ್ಯಾರ್ಥಿ ಸಂಘ ಮುಂಬಯಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಖಾಂದೇಶ್ ಭಾಸ್ಕರ್ ಶೆಟ್ಟಿ ದಂಪತಿಯನ್ನು ಅಭಿನಂದಿಸಿ ಶುಭಹಾರೈಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ನೃತ್ಯ ವೈವಿಧ್ಯ, ವಿವಿಧ ವಿನೋದಾವಳಿಗಳು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಕುತ್ಯಾರು ಬಾಬಾ ಪ್ರಸಾದ್ ಅರಸ ನಿರ್ವಹಿಸಿದರು. ಅಶೋಕ್ ಪಕ್ಕಳ ಖಾಂದೇವ್ ಭಾಸ್ಕರ್ ಶೆಟ್ಟಿ ದಂಪತಿಯನ್ನು ಪರಿಚಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desiswara: ನ್ಯೂಯಾರ್ಕ್ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ
Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…
Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ
Kannada Alphanbets: “ಕ’ ಕಾರದಲ್ಲಿನ ವಿಶೇಷ: ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ
ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.