ನಿರಂತರ ಸಮಾಜಪರ ಕೆಲಸ: ಐಕಳ ಹರೀಶ್ ಶೆಟ್ಟಿ
Team Udayavani, Oct 6, 2020, 6:33 PM IST
ಮುಂಬಯಿ, ಅ. 5: ಕೋವಿಡ್ ಸಮಸ್ಯೆಯಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸ್ವಲ್ಪ ಸಮಯ ಕಾರ್ಯ ಚಟುವಟಿಕೆಯಿಂದ ಸ್ಥಗಿತಗೊಂಡಿತ್ತು. ಒಕ್ಕೂಟವು ಮತ್ತೆ ಸಮಾಜ ಪರವಾಗಿ ಕೆಲಸ ಮಾಡಲು ಶಕ್ತಿಮೀರಿ ಶ್ರಮಿಸಲಿದೆ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಜಾಗತಿಕಬಂಟರ ಸಂಘಗಳ ಒಕ್ಕೂಟ 3.40 ಕೋಟಿ ರೂ.ಗೂ ಹೆಚ್ಚು ಹಣವನ್ನು ಸಮಾಜದ ಕೆಲಸ ಕಾರ್ಯಗಳಿಗೆ ವಿನಿಯೋಗಿಸಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.
ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ನಡೆದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಒಕ್ಕೂಟವು ಈಗಾಗಲೇ 2 ಕೋಟಿ ರೂ.ಗೂ ಹೆಚ್ಚು ವೆಚ್ಚದಲ್ಲಿ 120 ಮನೆಗಳನ್ನು ನಿರ್ಮಿಸಿದೆ. ಸುಮಾರು 125 ಹೆಣ್ಣು ಮಕ್ಕಳ ಮದುವೆಗಾಗಿ 30 ಲಕ್ಷ ರೂ. ನೆರವು ನೀಡಿದೆ. ವಿದ್ಯಾಭ್ಯಾಸಕ್ಕೆ 25 ಲಕ್ಷ ರೂ., ಅನಾಥ ಮಕ್ಕಳ ದತ್ತು ಪಡೆದು 2 ಲಕ್ಷ ರೂ. ಖರ್ಚು ಮಾಡಲಾಗಿದೆ. ವೈದ್ಯಕೀಯ ವೆಚ್ಚಕ್ಕಾಗಿ ಸುಮಾರು 250 ಜನರಿಗೆ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ನೀಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಐಎಎಸ್, ಐಪಿಎಸ್, ಕೆಎಎಸ್ ವಿದ್ಯಾಭ್ಯಾಸ ಪಡೆಯುವ ವಿದ್ಯಾರ್ಥಿಗಳಿಗೆ ಒಕ್ಕೂಟವು ಆರ್ಥಿಕ ನೆರವು ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಶೇ. 80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಗುವುದು. ಬಂಟ ಸಮಾಜಕ್ಕೆ ಅನುಕೂಲವಾಗುವಂತೆ 3ಬಿ ಮೀಸಲಾತಿಯನ್ನು 2ಎ ಗೆ ಪರಿವರ್ತಿಸಲು ಸರಕಾರದ ಮೇಲೆಒತ್ತಡ ತರಲಾಗುವುದು. ಇದಕ್ಕಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಬಂಟರ ಯಾನೆ ನಾಡವರ ಮಾತೃ ಸಂಘದೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭ ಸಮಾಜ ಸೇವಕರು, ಕೊಡುಗೈದಾನಿ ಕೃಷ್ಣ ಪ್ಯಾಲೇಸ್ ಮುಂಬಯಿ ಇದರ ಪ್ರವರ್ತಕ ಕೃಷ್ಣ ವೈ. ಶೆಟ್ಟಿ ಮತ್ತು ಉಮಾ ಕೃಷ್ಣ ಶೆಟ್ಟಿ ದಂಪತಿಯನ್ನು ಸಮ್ಮಾನಿಸಲಾಯಿತು. ಬೆಹರಿನ್ ಬಂಟರ ಸಂಘದ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ,ಶಶಿಧರ ಶೆಟ್ಟಿ ಹಾಗೂ ವಿವಿಧ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳನ್ನು ಒಕ್ಕೂಟದ ಪರವಾಗಿ ಗೌರವಿಸಲಾಯಿತು. ಒಕ್ಕೂಟವು ಸಮಾಜದ ಪರವಾಗಿ ಕೆಲಸ ಮಾಡುತ್ತಿರುವುದನ್ನು ಕಂಡು ಹೆಮ್ಮೆಯಾಗುತ್ತಿದೆ. ಒಕ್ಕೂಟದ ಜನಪರ ಕೆಲಸಗಳಿಗೆ ಸಹಕರಿಸುತ್ತೇವೆ ಎಂದು ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಉಪ ಕಾರ್ಯದರ್ಶಿ ಉಮಾ ಶೆಟ್ಟಿ ತಿಳಿಸಿದರು.
ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಅವರು ಒಕ್ಕೂಟವು ಮುಂದೆ ಹಮ್ಮಿಕೊಳ್ಳಲಾಗುವ ಕಾರ್ಯಕ್ರಮಗಳ ಮಾಹಿತಿ ನೀಡಿದರು. ನಿಧನ ಹೊಂದಿದ ಸಮಾಜದ ಗಣ್ಯರಿಗೆ ಸಂತಾಪ ವ್ಯಕ್ತಪಡಿಸಲಾಯಿತು.
ಪ್ರಿನ್ಸಿಪಾಲ್ ಬಾಲಕೃಷ್ಣ ಶೆಟ್ಟಿ, ಡಾ| ಆಶಾಜ್ಯೋತಿ ರೈ, ವಸಂತ ಶೆಟ್ಟಿ, ಕೃಷ್ಣ ಪ್ರಸಾದ ರೈ, ಕಾವು ಹೇಮನಾಥ ಶೆಟ್ಟಿ, ಪುಷ್ಪರಾಜ ಶೆಟ್ಟಿ ಕುಡುಂಬೂರು, ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ, ಮೂಲ್ಕಿ
ಸಂತೋಷ್ ಕುಮಾರ್ ಹೆಗ್ಡೆ, ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಸಲಹೆಗಳನ್ನಿತ್ತರು. ಒಕ್ಕೂಟದ ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.