ಕೋವಿಡ್-19: ಅಗತ್ಯ ಚಿಕಿತ್ಸಾ ಸೌಲಭ್ಯ ಸ್ಥಾಪನೆ; ಠಾಕ್ರೆ
Team Udayavani, Jun 13, 2020, 8:23 AM IST
ಪುಣೆ, ಜೂ. 12: ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ಅಲ್ಪಾವಧಿಯಲ್ಲಿ ಸಾಕಷ್ಟು ಸಂಖ್ಯೆಯ ಆರೋಗ್ಯ ಸೌಲಭ್ಯಗಳನ್ನು ಸ್ಥಾಪಿಸುವಲ್ಲಿ ರಾಜ್ಯ ಸರಕಾರವು ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಹೇಳಿದ್ದಾರೆ.
ಪುಣೆಯ ಹಿಂಜವಾಡಿ ಐಟಿ ಪಾರ್ಕ್ ನಲ್ಲಿ ವಿಪ್ರೋ ಲಿಮಿಟೆಡ್ ಅಭಿವೃದ್ಧಿಪಡಿಸಿದ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ -19 ಪ್ರಕೋಪದ ಆರಂಭಿಕ ಹಂತದಲ್ಲಿ ರಾಜ್ಯದ ಆರೋಗ್ಯ ಮೂಲಸೌಕರ್ಯಗಳು ಸಮರ್ಪಕವಾಗಿರಲಿಲ್ಲ. ಆದರೆ ಈಗ ನಾವು ಸಾಕಷ್ಟು ಸಂಖ್ಯೆಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಅತ್ಯಾಧುನಿಕ ಸೌಲಭ್ಯದಿಂದ ಜನರಿಗೆ ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಅವರು ನುಡಿದರು. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲೂ ಇದೇ ರೀತಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸರಕಾರವು ಹಣವನ್ನು ಖರ್ಚು ಮಾಡಲಿದೆ ಎಂದವರು ಹೇಳಿದರು.
ವಿಪ್ರೋ ಅಧ್ಯಕ್ಷ ರಿಷಾದ್ ಪ್ರೇಬ್‌ಜಿ ಅವರು ಮಾತನಾಡಿ, ನಾವು ಮಾನವೀಯ ನೆಲೆಯಲ್ಲಿ ಈ ಆರೋಗ್ಯ ಸೌಲಭ್ಯವನ್ನು ಅಭಿವೃದ್ಧಿಪಡಿಸಲು ಆಸಕ್ತಿ ತೋರಿಸಿದ್ದೇವೆ ಮತ್ತು ನಮ್ಮ ಪ್ರಸ್ತಾಪಕ್ಕೆ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು. ನಾವು ದೇಶಾದ್ಯಂತ ಅಗತ್ಯವಿರುವವರಿಗೆ ಆಹಾರ ಮತ್ತು ಔಷಧಿ ನೀಡಲು ಪ್ರಯತ್ನಿಸುತ್ತಿದ್ದೇವೆ ಎಂದವರು ತಿಳಿಸಿದರು. ಕೋವಿಡ್ ವೈರಸ್ ರೋಗಿಗಳಿಗೆ ಒಂದು ವರ್ಷದವರೆಗೆ ಚಿಕಿತ್ಸೆ ನೀಡಲು ರಾಜ್ಯ ಸರಕಾರವು ಕಂಪೆನಿಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು
ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
America: ಎಚ್-1ಬಿ ವೀಸಾ ವ್ಯವಸ್ಥೆ ಸುಧಾರಣೆ ಬೇಕು: ಒಂದೇ ದಿನದಲ್ಲಿ ಮಸ್ಕ್ ಉಲ್ಟಾ!
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.