ರಾಜ್ಯದ ಜೈಲುಗಳಲ್ಲಿ 1 ಸಾವಿರಕ್ಕೂ ಅಧಿಕ ಪ್ರಕರಣ

Team Udayavani, Aug 19, 2020, 7:11 PM IST

ರಾಜ್ಯದ ಜೈಲುಗಳಲ್ಲಿ 1 ಸಾವಿರಕ್ಕೂ ಅಧಿಕ ಪ್ರಕರಣ

ಮುಂಬಯಿ, ಆ. 18: ಮಹಾರಾಷ್ಟ್ರದ ಜೈಲುಗಳಲ್ಲಿರುವ ಕೈದಿಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಶುಕ್ರವಾರ 1 ಸಾವಿರದಗಡಿ ದಾಟಿದೆ. ಪ್ರಸ್ತುತ ಸೋಂಕಿತರ ಸಂಖ್ಯೆ 1,007ರಷ್ಟಿದೆ. ಈ ವರೆಗೆ 6 ಸಾವು ಮತ್ತು 814 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದೆ.

ರಾಜ್ಯದ 45 ಜೈಲುಗಳಲ್ಲಿ 26,308 ಕೈದಿಗಳನ್ನು ಇರಿಸಲಾಗಿದೆ. ಈ ಪೈಕಿ 6 ಸಾವುಗಳು ಪುಣೆಯ ಯೆರವಾಡ ಕೇಂದ್ರ ಕಾರಾಗೃಹ, ನವಿಮುಂಬಯಿಯ ತಲೋಜ ಕೇಂದ್ರ ಕಾರಾಗೃಹ ಹಾಗೂ ಧುಳೆ ಮತ್ತು ಅಮರಾವತಿಯ ಜೈಲುಗಳಿಂದ ವರದಿಯಾಗಿವೆ. ನಾಗಪುರ ಕೇಂದ್ರ ಕಾರಾಗೃಹದಲ್ಲಿ ಗರಿಷ್ಠ 219 ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ ಅಲ್ಲಿನ ಎಲ್ಲ 219 ಕೈದಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

ನಾಗಪುರ ಜೈಲು ಅಧಿಕಾರಿಗಳು ಅದರ 616 ಕೈದಿಗಳ ಕೋವಿಡ್‌ ಪರೀಕ್ಷೆ ನಡೆಸಿದ್ದಾರೆ. ರಾಜ್ಯದ ಅತ್ಯಂತ ಜನದಟ್ಟಣೆಯ ಕಾರಾಗೃಹಗ ಳಲ್ಲಿ ಒಂದಾಗಿರುವ ಹಾಗೂ ಹಲವಾರು ದರೋಡೆ ಕೋರರು, ಭಯೋತ್ಪಾದಕ ಶಂಕಿತರು ಮತ್ತು ಉನ್ನತ ಮಟ್ಟದ ಆರ್ಥಿಕ ಅಪರಾ ಗಳನ್ನು ಹೊಂದಿರುವ ಮುಂಬಯಿಯ ಆರ್ಥರ್‌ ರೋಡ್‌ ಜೈಲಿನಲ್ಲಿರುವ ಕೈದಿಗಳಲ್ಲಿ 182 ಪ್ರಕರಣಗಳು ವರದಿಯಾಗಿದ್ದರೆ, 46 ಜೈಲು ಅಧಿಕಾರಿಗಳು ಸೋಂಕಿಗೆ ಒಳಗಾಗಿದ್ದಾರೆ. ರಾಜ್ಯದ ಜೈಲುಗಳ ಪೈಕಿ ಮೊದಲ ಕೋವಿಡ್ ಪ್ರಕರಣ ಕೂಡ ಇದೇ ಜೈಲಿನಿಂದ ವರದಿಯಾಗಿದೆ.

ಸಾಂಗ್ಲಿ ಮತ್ತು ಅಕೋಲಾ ಜಿಲ್ಲಾ ಕಾರಾಗೃಹಗಳಲ್ಲಿ ಕ್ರಮವಾಗಿ 145 ಮತ್ತು 99 ಪ್ರಕರಣಗಳು ವರದಿಯಾಗಿವೆ. ಅಧಿಕಾರಿಗಳ ಪ್ರಕಾರ, ರಾಜ್ಯದ ಎಲ್ಲ ಕೇಂದ್ರ, ಜಿಲ್ಲಾ ಮತ್ತು ತೆರೆದ ಜೈಲುಗಳಲ್ಲಿ ನಡೆಸಿದ 6,177 ಪರೀಕ್ಷೆಗಳಲ್ಲಿ 781 ಪರೀಕ್ಷೆಗಳನ್ನು ಆರ್ಥರ್‌ ರೋಡ್‌ ಜೈಲಿನಲ್ಲಿ ನಡೆಸಲಾಗಿದೆ. ಈ ಜೈಲು ತನ್ನ 800 ಕೈದಿಗಳ ಸಾಮರ್ಥ್ಯದ ವಿರುದ್ಧ 2,500ಕ್ಕೂ ಅಧಿಕ ಕೈದಿಗಳನ್ನು ಹೊಂದಿದೆ. ಆರ್ಥರ್‌ ರೋಡ್‌ ಮತ್ತು ನಾಗಪುರ ಜೈಲುಗಳ ಅನಂತರ ಅಕೋಲಾ (569), ಔರಂಗಾಬಾದ್‌ (517) ಮತ್ತುಯೆರವಾಡ ಕಾರಾಗೃಹಗಳಲ್ಲಿ (506) ಹೆಚ್ಚಿನ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲಾಗಿದೆ. ಆದರೆ, 8 ಕಾರಾಗೃಹಗಳಾದ ಸಾವಂತ್ವಾಡಿ ಜಿಲ್ಲಾ ಕಾರಾಗೃಹ, ಸಿಂಧುದುರ್ಗ ಜಿಲ್ಲಾ ಕಾರಾಗೃಹ, ಯೆರವಾಡ ತೆರೆದ ಜೈಲು, ನಾಂದೇಡ್‌ ಜಿಲ್ಲಾ ಕಾರಾಗೃಹ, ನಂದೂರ್ಬಾರ್‌ ಜಿಲ್ಲಾ ಕಾರಾಗೃಹ, ವಾಶಿಮ್‌ ಜಿಲ್ಲಾ ಕಾರಾಗೃಹ, ಭೂಸಾವಳ್‌ ಉಪ ಜೈಲು, ಮೊರ್ಷಿ ತೆರೆದ ಜೈಲು ಮತ್ತು ನಾಸಿಕ್‌ ಬೊರ್ಸ್ಟಲ್‌ ಶಾಲೆಯಲ್ಲಿ ಯಾವುದೇ ಕೋವಿಡ್‌ ಪರೀಕ್ಷೆಗಳನ್ನು ನಡೆಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನದಟ್ಟಣೆ ತಡೆಗಟ್ಟಲು ಮಾ. 25ರಿಂದ ಒಟ್ಟು 10,476 ಕೈದಿಗಳನ್ನು ಪರೋಲ್‌ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.