ಥಾಣೆ: 1.46 ಲಕ್ಷ ದಾಟಿದ ಸೋಂಕಿತರ ಸಂಖ್ಯೆ
Team Udayavani, Sep 15, 2020, 5:58 PM IST
ಸಾಂದರ್ಭಿಕ ಚಿತ್ರ
ಥಾಣೆ, ಸೆ. 14: ಸೋಮವಾರ ಜಿಲ್ಲೆಯಲ್ಲಿ ಮತ್ತೆ 1,930 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿರುವುದರೊಂದಿಗೆ ಥಾಣೆಯಲ್ಲಿ ಸೋಂಕಿತರ ಸಂಖ್ಯೆ 1,46,102ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಸಂಖ್ಯೆ 3,921ಕ್ಕೆ ಏರಿಕೆಯಾಗಿದ್ದು, ರವಿವಾರ 28 ಮಂದಿ ಸಾವನ್ನಪ್ಪಿದ್ದಾರೆ ಎಂದವರು ಹೇಳಿದ್ದಾರೆ.
ಒಟ್ಟು ಕೋವಿಡ್ ಪ್ರಕರಣಗಳಲ್ಲಿ ಕಲ್ಯಾಣ್ ಪಟ್ಟಣದಲ್ಲಿ ಈವರೆಗೆ 35,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, ಥಾಣೆ ನಗರ ಮತ್ತು ನವಿಮುಂಬಯಿಯಲ್ಲಿ ತಲಾ 30,000 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರವಿವಾರ ಕಲ್ಯಾಣ್‌ನಲ್ಲಿ 549 ಪ್ರಕರಣ ವರದಿಯಾಗಿದ್ದರೆ, ನವಿಮುಂಬಯಿ 368 ಮತ್ತು ಥಾಣೆ ನಗರ 347 ಪ್ರಕರಣಗಳನ್ನು ವರದಿ ಮಾಡಿವೆ. ಉಳಿದ ಪ್ರಕರಣಗಳು ಜಿಲ್ಲೆಯ ಇತರ ಭಾಗಗಳಿಂದ ವರದಿಯಾಗಿವೆ ಎಂದವರು ಹೇಳಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 17,784 ಸಕ್ರಿಯ ಪ್ರಕರಣಗಳಿದ್ದು, 1,24,397 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಚೇತರಿಕೆ ಪ್ರಮಾಣವು ಶೇ.85.14ರಷ್ಟಿದ್ದರೆ, ಮರಣ ಪ್ರಮಾಣ ಶೇ. 2.68ರಷ್ಟಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನೆರೆಯ ಪಾಲ್ಘರ್ ಜಿಲ್ಲೆಯಲ್ಲಿ ಈವರೆಗೆ 29,392 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದಾಗಿ ಅಲ್ಲಿ ಈವರೆಗೆ 579 ಸಾವು ವರದಿಯಾಗಿವೆ ಎಂದಿದ್ದಾರೆ. ಪ್ರಸ್ತುತ ಪಾಲ್ಘರ್‌ನಲ್ಲಿನ ಕೋವಿಡ್ ಮರಣ ಪ್ರಮಾಣ ಶೇ.1.97 ಆಗಿದೆ ಎಂದು ಜಿಲ್ಲಾ ಸಿವಿಲ್ ಸರ್ಜನ್ ಡಾ| ಕಾಂಚನ್ ವಣೇರೆ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮರಣ ಪ್ರಮಾಣವನ್ನು ಶೇ. 1ಕ್ಕಿಂತ ಕಡಿಮೆ ಮಾಡಲು, ಮೀಸಲಾದ ಕೋವಿಡ್ ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ ವೈದ್ಯರ ತಂಡವನ್ನು ಒದಗಿಸುವಂತೆ ಜಿಲ್ಲಾಡಳಿತವು ರಾಜ್ಯ ಸರಕಾರವನ್ನು ಕೋರಿದೆ ಎಂದವರು ಹೇಳಿದ್ದಾರೆ. ಸಾವಿನ ಪ್ರಮಾಣ ತಗ್ಗಿಸಲು ಜಿಲ್ಲೆಯು ಸಂಪರ್ಕ ಪತ್ತೆಹಚ್ಚುವಿಕೆ ಸೇರಿದಂತೆ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.