ದೀಪಾವಳಿ ಬಳಿಕ 9 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಹೆಚ್ಚಳ

Team Udayavani, Dec 16, 2020, 7:39 PM IST

ದೀಪಾವಳಿ ಬಳಿಕ 9 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣ ಹೆಚ್ಚಳ

ಮುಂಬಯಿ, ಡಿ. 15: ರಾಜ್ಯದ ಒಟ್ಟಾರೆ ಸಕ್ರಿಯ ಸೋಂಕುಗಳ ಸಂಖ್ಯೆ ಕಡಿಮೆ ಯಾಗಿದ್ದರೂ ಒಂಬತ್ತು ಜಿಲ್ಲೆಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇತ್ತೀಚಿನ ಈ ಪ್ರವೃತ್ತಿಯಿಂದ ರಾಜ್ಯದಲ್ಲಿ ವೈರಸ್‌ನ ಅಪಾಯಗಳು ಇನ್ನೂ ತಗ್ಗಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ಸೋಮವಾರ ಮಹಾರಾಷ್ಟ್ರವು 2,949 ಹೊಸ ಪ್ರಕರಣಗಳೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 18.83 ಲಕ್ಷಕ್ಕೆ ಏರಿಕೆಯಾಗಿದೆ. ಹೊಸ ಪ್ರಕರಣಗಳಲ್ಲಿ 477 ಮುಂಬಯಿಯಿಂದವರದಿಯಾಗಿವೆ. ಮತ್ತೆ 60 ಸಾವುಗಳೊಂದಿಗೆ ರಾಜ್ಯದ ಸಾವಿನ ಸಂಖ್ಯೆ 48,269 ಕ್ಕೆ ಏರಿದೆ. ಸೋಮವಾರ ಮುಂಬಯಿಯಲ್ಲಿ ಕೋವಿಡ್ ದಿಂದ 7 ಮಂದಿ ಸಾವನ್ನಪ್ಪಿದ್ದಾರೆ. ದೀಪಾವಳಿಯ ಬಳಿಕ ರತ್ನಗಿರಿ, ಸಿಂಧುದುರ್ಗ, ವಾಶಿಮ್‌, ಪುಣೆ, ಕೊಲ್ಲಾಪುರ, ನಾಸಿಕ್‌, ನಂದುರ್ಬಾರ್‌, ಅಕೋಲಾ ಮತ್ತು ನಾಗಪುರಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ.

ಶೇಕಡಾವಾರು ಪ್ರಕಾರ, ವಾಶಿಮ್‌, ಸಿಂಧುದುರ್ಗ, ಕೊಲ್ಲಾಪುರ, ಅಕೋಲಾ ಮತ್ತುನಾಗಪುರಗಳಲ್ಲಿ ಸಕ್ರಿಯ ಸೋಂಕುಗಳಲ್ಲಿ ಶೇ. 40 ಅಥವಾ ಅದಕ್ಕಿಂತ ಹೆಚ್ಚಿನ ಏರಿಕೆ ಕಂಡಿದೆ. ಪರಿಣಾಮ ರಾಜ್ಯ ಅಧಿಕಾರಿಗಳು ಈ ಜಿಲ್ಲೆಗಳನ್ನು ಸೂಕ್ಷ್ಮವಾಗಿ ಗಮನಹರಿಸುತ್ತಿದ್ದಾರೆ.

ಹಬ್ಬಗಳ ಸಮಯದಲ್ಲಿ ಹೆಚ್ಚಿದ ಚಲನವಲನವು ಈ ನಿರ್ದಿಷ್ಟ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಲು ಕಾರಣವಾಗಿರಬಹುದು ಅಥವಾ ಈ ಜಿಲ್ಲೆಗಳಲ್ಲಿ ಕೆಲವು ಕೋವಿಡ್‌ – 19 ಪ್ರಕರಣಗಳನ್ನು ಇತರ ಜಿಲ್ಲೆಗಳಿಗಿಂತ ಬಹಳ ಹಿಂದೆಯೇ ದಾಖಲಿಸಲು ಪ್ರಾರಂಭಿಸಿರುವುದು ಇದಕ್ಕೆ ಕಾರಣ ವಾಗಿರಬಹುದು ಎಂದು ಅಧಿಕಾರಿಗಳುಅಭಿಪ್ರಾಯಪಟ್ಟಿದ್ದಾರೆ. ಮುಂಬಯಿಯಲ್ಲಿ ಒಂದು ತಿಂಗಳಿನಿಂದ ಕೋವಿಡ್‌ -19ಪ್ರಕರಣಗಳಲ್ಲಿ ಏರಿಳಿತಗಳನ್ನು ಕಾಣುತ್ತಿದೆ.

ಡಿಸೆಂಬರ್‌ ಅಥವಾ ಜನವರಿಯೊಳಗೆ ಕೋವಿಡ್ ವೈರಸ್‌ನ ಎರಡನೇ ಅಲೆಯ ಸಾಧ್ಯತೆಯಿದ್ದು, ಸಕ್ರಿಯ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳನ್ನು ನಿರ್ವಹಿಸಲು ಖಾಸಗಿ ಆಸ್ಪತ್ರೆಗಳಲ್ಲಿ ಶೇ. 80ರಷ್ಟು ಹಾಸಿಗೆ ಕಾಯ್ದಿರಿಸುವಿಕೆಯನ್ನು ಮುಂದು ವರಿಸಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಒತ್ತಾಯಿಸಿದೆ.

ಸಕ್ರಿಯ ಪ್ರಕರಣಗಳಲ್ಲಿ ಕುಸಿತ :  ಸಕ್ರಿಯ ಪ್ರಕರಣಗಳಲ್ಲಿ ಏರಿಕೆಗೆ ಸಾಕ್ಷಿಯಾದ ಒಂಬತ್ತು ಜಿಲ್ಲೆಗಳಿಗೆ ವ್ಯತಿರಿಕ್ತವಾಗಿ ಸಾಂಗ್ಲಿ,ಅಹ್ಮದ್‌ನಗರ, ಧುಳೆ, ಔರಂಗಾಬಾದ್‌, ಪರ್ಭಾಣಿ, ಹಿಂಗೋಲಿ, ನಾಂದೇಡ್‌,ಗೊಂಡಿಯಾ ಮತ್ತು ಚಂದ್ರಾಪುರಗಳಲ್ಲಿ ಸಕ್ರಿಯ ಸೋಂಕು ಪ್ರಕರಣಗಳಲ್ಲಿ ಗಮನಾರ್ಹ ಕುಸಿತ ದಾಖಲಾಗಿದೆ. ಆದರೆ ಚಂದ್ರಾಪುರ, ಪರ್ಭಾಣಿ, ಹಿಂಗೋಲಿ ಮತ್ತು ಗೊಂಡಿಯಾದಲ್ಲಿ ಕಡಿಮೆ ಜನರು ಈವರೆಗೆ ವೈರಸ್‌ಗೆ ತುತ್ತಾಗಿರುವುದರಿಂದ ಈ ಜಿಲ್ಲೆಗಳು ಅಪಾಯದಲ್ಲಿವೆ ಎಂದು ರಾಜ್ಯ ಸರಕಾರದ ಕೋವಿಡ್‌-19 ತಾಂತ್ರಿಕ ಸಲಹೆಗಾರ ಡಾ| ಸುಭಾಷ್‌ ಸಾಳುಂಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Vijay Hazare Trophy; Abhinav Manohar’s brilliant century; Karnataka won easily against Arunchal Pradesh

Vijay Hazare Trophy; ಅಭಿನವ್‌ ಮನೋಹರ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

12

Mangaluru: ಕಾಂಕ್ರೀಟ್‌ ರಸ್ತೆ ನಿರ್ಮಿಸಿದರೂ ಫುಟ್‌ಪಾತ್‌ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.