ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

Team Udayavani, Oct 20, 2021, 2:34 PM IST

ಪುಣೆ ತುಳುಕೂಟದಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಮತ್ತು ದಾಂಡಿಯಾ ರಾಸ್‌

ಪುಣೆ: ಪುಣೆ ತುಳುಕೂಟದ ವತಿಯಿಂದ ವಾರ್ಷಿಕ ದಸರಾ ಪೂಜೆ, ತೆನೆ ಹಬ್ಬ ಹಾಗೂ ದಾಂಡಿಯಾ ಕಾರ್ಯಕ್ರಮವು ಅ. 13ರಂದು ಕರ್ವೆ ನಗರದ ಹೊಟೇಲ್‌ ರತ್ನಾ ವೆಜ್‌ ಸಭಾಂಗಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಂಘದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುಣೆ ಇವರಿಂದ ಭಜನ ಕಾರ್ಯಕ್ರಮ ನೆರವೇರಿತು. ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯೆಯರು ಹಾಗೂ ಯುವ ವಿಭಾಗದ ಸದಸ್ಯರು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.

ಬಳಿಕ ನಡೆದ ದಾಂಡಿಯಾ ನೃತ್ಯ ಕಾರ್ಯಕ್ರಮದಲ್ಲಿ ಮಹಿಳೆಯರು, ಪುರುಷರು ಹಾಗೂ ಮಕ್ಕಳೆಲ್ಲರೂ ಸೇರಿ ಹೆಜ್ಜೆ ಹಾಕಿದರು. ಭತ್ತದ ತೆನೆಗಳಿಗೆ ಪೂಜೆ ಸಲ್ಲಿಸಿ ಸೇರಿದ್ದ ಭಕ್ತಾದಿಗಳಿಗೆ ವಿತರಿಸಲಾಯಿತು. ಈ ಸಂದರ್ಭ ನೀಟ್‌ ಪಿಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ದೇಶದಲ್ಲೇ 4ನೇ ಸ್ಥಾನ ಗಳಿಸಿದ ಡಾ|ಹರ್ಷಿತಾ ಹರೀಶ್‌ ಶೆಟ್ಟಿ ಅವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಗರ ಸೇವಕರಾದ ಸಚಿನ್‌ ದೊಡ್ಕೆ, ಸುಜಾತಾ ಸದಾನಂದ ಶೆಟ್ಟಿ, ಸುಶೀಲ್‌ ಮೆಂಗ್ಡೆ, ಸಾಹಿಲಿ ತಾಯಿ ವಾಂಝಲೆ, ಸಮಾಜ ಸೇವಕ ಮಾಣಿಕ್‌ ರಾವ್‌ ದುಧಾನೆ, ಪುಣೆ ತುಳುಕೂಟದ ಸ್ಥಾಪಕಾಧ್ಯಕ್ಷ ಜಯ ಕೆ. ಶೆಟ್ಟಿ, ಶ್ರೀ ಗುರುದೇವಾ ಸೇವಾ ಬಳಗ ಪುಣೆ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪುಣೆ ಬಂಟರ ಸಂಘದ ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ್‌ ಶೆಟ್ಟಿ, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ಯಕ್ಷಗಾನ ನಾಟ್ಯಗುರು ಮದಂಗಲ್ಲು ಆನಂದ ಭಟ್‌, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್‌. ಶೆಟ್ಟಿ ಮತ್ತು ಸದಸ್ಯರು, ಪುಣೆ ಬಂಟರ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಯಶ್‌ರಾಜ್‌ ಶೆಟ್ಟಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ತುಳು-ಕನ್ನಡಿಗರು ಪಾಲ್ಗೊಂಡಿದ್ದರು.

ಕಾರ್ಯಕ್ರಮದ ಸಭಾಂಗಣ ಹಾಗೂ ಭೋಜನ ವ್ಯವಸ್ಥೆಯನ್ನು ಹೊಟೇಲ್‌ ರತ್ನಾ ವೆಜ್‌ನ ಮಾಲಕರಾದ ಪುಣೆ ಬಂಟರ ಸಂಘದ ಗೌರವ ಕೋಶಾಧಿಕಾರಿ ಎರ್ಮಾಳ್‌ ಚಂದ್ರಹಾಸ ಶೆಟ್ಟಿ ಪ್ರಾಯೋಜಿಸಿದರು. ಶ್ರೀದೇವಿಯ ಅಲಂಕೃತ ಮಂಟಪವನ್ನು ಮಹಾಗಣಪತಿ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪ್ರಾಯೋಜಿಸಿದರು. ಅತಿಥಿಗಳನ್ನು ಹಾಗೂ ಪ್ರಯೋಜಕರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಗೌರವಾಧ್ಯಕ್ಷ ತಾರಾನಾಥ ರೈ ಮೇಗಿನಗುತ್ತು, ಅಧ್ಯಕ್ಷರಾದ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಪ್ರಧಾನ ಕಾರ್ಯದರ್ಶಿ ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಕೋಶಾಧಿಕಾರಿ ದಿವಾಕರ ಶೆಟ್ಟಿ ಮಾಣಿಬೆಟ್ಟು ಮತ್ತು ಪದಾಧಿಕಾರಿಗಳು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಡಿ. ಶೆಟ್ಟಿ ಮತ್ತು ಸದಸ್ಯರು, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಪಿ. ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.