ಠಾಣೆಗಳಲ್ಲಿ ಸಿಸಿ ಕೆಮರಾ ಅಳವಡಿಕೆ ವಿಳಂಬ
Team Udayavani, Apr 15, 2022, 3:37 PM IST
ಮುಂಬಯಿ: ಪೊಲೀಸ್ ಠಾಣೆಗಳಲ್ಲಿ 2022ರ ಮಾರ್ಚ್ ಒಳಗೆ ಸಿಸಿ ಕೆಮರಾ ಅಳವಡಿಸಬೇಕು ಎಂದು ಮುಂಬಯಿ ಹೈಕೋರ್ಟ್ ಆದೇಶ ನೀಡಿತ್ತು. ಆದರೆ ನಗರದ ಒಟ್ಟು ಪೊಲೀಸ್ ಠಾಣೆಗಳಲ್ಲಿ ಕೆಲವು ಪೊಲೀಸ್ ಠಾಣೆಗಳಿಗೆ ಮಾತ್ರ ಸಿಸಿ ಕೆಮರಾವನ್ನು ಅಳವಡಿಸಲಾಗಿದೆ. ಎಲ್ಲ ಠಾಣೆಗಳಲ್ಲಿ ನಿಗದಿತ ಸಮಯದೊಳಗೆ ಸಿಸಿ ಕೆಮರಾ ಅಳವಡಿಸದೇ ಇದ್ದುದರಿಂದ ಕೋರ್ಟ್ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದೆ.
ಸುಪ್ರೀಂ ಕೋರ್ಟ್ ಪ್ರಕಾರ ಪೊಲೀಸ್ ಠಾಣೆಗಳಲ್ಲಿ ಅದರಲ್ಲೂ ವಿಶೇಷವಾಗಿ ಡಿಟೆಕ್ಷನ್ ರೂಮ್ಗಳಲ್ಲಿ, ಲಾಕ್ಅಪ್ಗಳಲ್ಲಿ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಏಕೆಂದರೆ ಜನರು ಕಳ್ಳತನ ದೌರ್ಜನ್ಯದ ಕುರಿತು ದೂರು ನೀಡಲು ಬಂದಾಗ ಕೆಲವೊಮ್ಮೆ ಪೊಲೀಸರೊಂದಿಗೆ ವಾದ ಮಾಡುವ ಸಾಧ್ಯತೆಯಿರುತ್ತದೆ ಮತ್ತು ಯಾರು ದೂರು ನೀಡಲು ಬಂದಿದ್ದಾರೆ ಇವೇ ಮೊದಲಾದವುಗಳನ್ನು ವೀಕ್ಷಿಸಲು, ನಿಗಾ ಇರಿಸಲು ಪೊಲೀಸ್ ಠಾಣೆಯಲ್ಲಿ ಸಿಸಿ ಕೆಮರಾ ಆವಶ್ಯಕವಾಗಿದೆ. ಪೊಲೀಸ್ ಠಾಣೆಯ ಒಳಗೆ ಮತ್ತು ಹೊರಗೆ, ಲಾಕಪ್ ಮತ್ತು ಎಲ್ಲ ಕೋಣೆಯ ಒಳಗೆ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಸಿಸಿ ಟಿವಿ ಕಾರ್ಯನಿರ್ವಹಣೆಗೆ ನೊಡೆಲ್ ಅಧಿಕಾರಿಗಳನ್ನು ನೇಮಿಸಬೇಕು.
ಕೆಮರಾ ಅಳವಡಿಸುವ ಕಾರ್ಯದಲ್ಲಿ 30 ಕೆಮರಾ ಅಳವಡಿಕೆ ಪೂರ್ತಿಯಾಗಿದೆ. ಮುಂಬಯಿಯಲ್ಲಿ 94 ಪೊಲೀಸ್ ಠಾಣೆ ಗಳಿದ್ದು, ಸಿಸಿ ಕೆಮರಾ ಅಳವಡಿಸಲಾಗಿದೆ. ಪ್ರತೀ ಪ್ರದೇಶದಲ್ಲಿ 5ರಿಂದ 6 ಪೊಲೀಸ್ ಠಾಣೆಗಳಲ್ಲಿ ಮೊದಲ ಹಂತದಲ್ಲಿ ಕೆಮರಾ ಅಳವಡಿಕೆಗೆ ಆಯ್ಕೆ ಮಾಡಲಾಗಿದೆ. ಸಿಸಿ ಕೆಮರಾಗಳು ಕ್ರಿಯಾತ್ಮಕವಾಗಿದ್ದು, ಎಪ್ರಿಲ್ ಕೊನೆಯೊಳಗೆ ಸಿಸಿ ಕೆಮರಾ ಅಳವಡಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.