ದೆಹಲಿ ಕರ್ನಾಟಕ ಸಂಘ: ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ
Team Udayavani, Dec 6, 2017, 3:07 PM IST
ಮುಂಬಯಿ: ದೆಹಲಿ ಕರ್ನಾಟಕ ಸಂಘ ಈ ವರ್ಷದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿಶಿಷ್ಟ ಕನ್ನಡಿಗ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ಭಾಷಾ ಬಾಂಧವ್ಯ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮವು ಡಿ. 3 ರಂದು ನಡೆಯಿತು.
ಕಾರ್ಯಕ್ರಮಕ್ಕೆ ಮಂಗಳೂರಿನ ಎಸ್‌ಡಿಎಂ ಲಾ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ರಾಜೇಂದ್ರ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ದೆಹಲಿಯಲ್ಲಿ ಕನ್ನಡಕ್ಕಾಗಿ ಸೇವೆ ಮಾಡಿದ ರಂಗಕರ್ಮಿ, ಖ್ಯಾತ ಚಿತ್ರಕಲಾವಿದ ಚೆನ್ನು ಎಸ್. ಮಠದ, ಖ್ಯಾತ ಹೊಟೇಲು ಉದ್ಯಮಿ ಮತ್ತು ಸಮಾಜ ಸೇವಕರಾದ ಶೇಖರ್ ಎನ್. ಬಂಗೇರ, ಸೌಜನ್ಯಾ ಪ್ರಿಂಟಿಂಗ್ ಪ್ರಸ್‌ನ ಮಾಲೀಕ ವೈಜನಾಥ್ ಎನ್. ಹೆಗಡೆ ಅವರಿಗೆ ವಿಶಿಷ್ಟ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿಗಳಾದ ರಾಜೇಂದ್ರ ಶೆಟ್ಟಿ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆ ಅವರು ವಹಿಸಿದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಚಿಂತಕ, ಧೀಮಂತ ನಾಯಕ ದಿ| ಜೆ. ಎಚ್. ಪಟೇಲ್ ಅವರು ಸಂಸತ್ತಿನಲ್ಲಿ 1967, ಡಿಸೆಂಬರ್ 4ರಂದು ಮಾರ್ದನಿಸಿದ ಕನ್ನಡ ಕಹಳೆ ಐವತ್ತು ವಸಂತಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಕನ್ನಡದ ಕಹಳೆಗೆ 50ರ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇದು ಕನ್ನಡಿಗರಿಗೆ ಅತ್ಯಂತ ಅಭಿಮಾನದ ಸಂಗತ್ತಿ ಮಾತ್ರವಲ್ಲ ಸಂಭ್ರಮಾಚರಣೆಯ ಸಂಗತಿಕೂಡ ಹೌದು. ಕಾರಣ ಹಿಂದಿಯನ್ನು ಬಿಟ್ಟರೆ ಉಳಿದೆಲ್ಲ ಭಾರತೀಯ ಭಾಷೆಗಳಲ್ಲಿಯೇ ಮೊದಲ ಬಾರಿಗೆ ಕನ್ನಡದ ಧ್ವನಿ ಕೇಳಿಸಿದ್ದು ಪಟೇಲರಿಂದ. ಸಂಸತ್ತಿನಲ್ಲಿ ಪಟೇಲ್ ಕುರಿತು ಚಂದ್ರಶೇಖರ್‌ಎನ್. ಪಿ. ಅವರು ವಿಶೇಷವಾಗಿ ಮಾತನಾಡಿದರು.
ಸಭಾ ಕಾರ್ಯಕ್ರಮದ ಅನಂತರ ಸ್ಥಳೀಯ ಕಲಾವಿದರಿಂದ ವಿವಿಧ ಭಾಷೆಗಳ ನೃತ್ಯ ಕಾರ್ಯಕ್ರಮ ನಡೆಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಸಿ. ಎಂ. ನಾಗರಾಜ ಅವರು ವಂದಿಸಿದರು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ದೆಹಲಿಯ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
ಇಂಗ್ಲೆಂಡ್‌ನ ರಾದರಮ್ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.