ದೇವಾಡಿಗ ವೆಲ್ಫೇರ್‌ ಅಸೋಸಿಯೇಶನ್‌ ಮುಂಬಯಿ 30ನೇ ವಾರ್ಷಿಕೋತ್ಸವ

Team Udayavani, Jan 31, 2018, 11:48 AM IST

2501mum06.jpg

ಮುಂಬಯಿ: ದೇವಾಡಿಗ ವೆಲ್ಫೇರ್‌ ಅಸೋಸಿಯೇಶನ್‌ ಮುಂಬಯಿ ಇದರ 30ನೇ ವಾರ್ಷಿಕೋತ್ಸವ ಸಮಾರಂಭವು ಜ. 14ರಂದು ವಡಾಲದ ಎನ್‌ಕೆಇಎಸ್‌  ಹೈಸ್ಕೂಲ್‌ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.

ವೇದಿಕೆಯಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪ್ರೊಮೋಸ್‌ ಎಂಜಿನಿಯರ್ಸ್‌ ಪ್ರೈವೇಟ್‌ ಲಿಮಿಟೆಡ್‌ ಇದರ ವ್ಯವಸ್ಥಾಪಕ ನಿರ್ದೇಶಕ ಬಿ. ಬಿ. ಘಟಕಲ, ವಿಶೇಷ ಅತಿಥಿಗಳಾಗಿ ದುಬೈ ದೇವಾಡಿಗ ಸಂಘ ಇದರ ಸಂಸ್ಥಾಪಕ ಹಾಗೂ ಶ್ರೀ  ಏಕನಾಥೇಶ್ವರಿ ದೇವಸ್ಥಾನ ಕಟ್ಟಡ ಸಮಿತಿಯ ಟ್ರಸ್ಟಿ  ಶೀನ ದೇವಾಡಿಗ, ಲೋಟಸ್‌ ಇಂಟರ್‌ ನ್ಯಾಶನಲ್‌ ಪ್ರೈಟ್‌ ಎಕೊÕ$³àರ್ಟ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಆಡಳಿತ ನಿರ್ದೇಶಕ ಮಹಾಬಲ ದೇವಾಡಿಗ, ಸಂಘದ ಗೌರವಾಧ್ಯಕ್ಷ ಸುರೇಶ ಡಿ. ಪಡುಕೋಣೆ, ಅಧ್ಯಕ್ಷರಾದ  ಸುಬ್ಬ ಜಿ. ದೇವಾಡಿಗ, ಗೌರವ  ಉಪಾಧ್ಯಕ್ಷರಾದ ನಾಗರಾಜ ಪಡುಕೋಣೆ, ಉಪಾಧ್ಯಕ್ಷರಾದ ಎನ್‌. ಎನ್‌. ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಬಿ. ಎಂ. ದೇವಾಡಿಗ, ಮಂಜುನಾಥ ದೇವಾಡಿಗ, ಮಹಿಳಾ ವಿಭಾಗದ ಅಧ್ಯಕ್ಷೆ  ಸೀತಾ ಎಂ. ದೇವಾಡಿಗ ಉಪಸ್ಥಿತರಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದ ಅನಂತರ ಸಂಘದ ಮಹಿಳಾ ವಿಭಾಗದವರಿಂದ ಅರಸಿನ ಕುಂಕುಮ ಕಾರ್ಯಕ್ರಮ ನೆರವೇರಿತು.ವಿಮಲಾ ದೇವಾಡಿಗ ಪ್ರಾರ್ಥನೆಗೈದರು. ಹರ್ಷಿತಾ ದೇವಾಡಿಗರ ಪೂಜಾನೃತ್ಯದೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊಂಡಿತು. ಅತಿಥಿ-ಗಣ್ಯರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿ ಬಿ. ಬಿ. ಘಟಕಲ್‌ ಅವರು ಮಾತನಾಡಿ, ದೇವಾಡಿಗ ವೆಲ್ಫೆàರ್‌ ಅಸೋಸಿಯೇಶನ್‌ ಸಮಾಜ ಕಲ್ಯಾಣಕ್ಕಾಗಿ ಸಮರ್ಪಿಸಿಕೊಂಡಿರುವುದು ಪ್ರಶಂಸನೀಯವಾಗಿದೆ. ಇನ್ನು ಮುಂದೆಯೂ ಕೂಡ ಇನ್ನಷ್ಟು ಕಾರ್ಯಕ್ರಮಗಳನ್ನು ನಡೆಸಿ ಕೊಂಡು ಹೋಗುವಂತೆ ತಿಳಿಸಿದರು. ಅಲ್ಲದೆ ಯೋಗದ ಬಗ್ಗೆ ತಿಳಿಸುತ್ತಾ, ಯೋಗಾಭ್ಯಾಸ ಮತ್ತು ಶಿಸ್ತು ಜೀವನದಲ್ಲಿ ಅಳವಡಿಸಿಕೊಂಡರೆ ಕೊನೆತನಕ ಉತ್ತಮ ಹಾಗೂ ಆರೋಗ್ಯಕರ ಜೀವನ ನಡೆಸಬಹುದು ಎಂದರಲ್ಲದೆ, ಆರೋಗ್ಯವೇ ಭಾಗ್ಯ ಎಂಬ ಮಂತ್ರವನ್ನು ಸಭೆಗೆ ತಿಳಿಸಿದರು.

ಅತಿಥಿಯಾಗಿ ಮಹಾಬಲ ದೇವಾಡಿಗ ಮಾತನಾಡಿ, ನಮ್ಮಲ್ಲಿ ಸುಶಿಕ್ಷಿತರು ಕಡಿಮೆ ಎನ್ನುವ ಭಾವನೆಯಿದ್ದು, ಇದೀಗ ನಮ್ಮಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಿತರು, ಉನ್ನತ ಹು¨ªೆಯಲ್ಲಿರುವುದು ತುಂಬಾ ಸಂತೋಷ ಉಂಟುಮಾಡಿದೆ. ನಾವು ಯಾವುದೇ ಕೀಳರಿಮೆ ಇಟ್ಟುಕೊಳ್ಳಬಾರದು. ಯಾವುದೇ ವೃತ್ತಿಯಿರಲಿ ಅದರಲ್ಲಿ ಉತ್ತಮ ತರಬೇತಿ ಪಡೆದು, ಕಠಿನ ಪರಿಶ್ರಮದಿಂದ ಮುಂದುವರಿದರೆ ಖಂಡಿತಾ ಯಶಸ್ಸು ಸಿಗುತ್ತದೆ ಎಂದರು.

ಇನ್ನೋರ್ವ ವಿಶೇಷ ಅತಿಥಿ ಶೀನ ದೇವಾಡಿಗ ದುಬೈ ಮಾತನಾಡಿ, ನಮ್ಮಲ್ಲಿ ಸಾಮಾಜಿಕ ಪ್ರಜ್ಞೆ ಹಾಗೂ ಕಳಕಳಿ ಇರಬೇಕು. ಅಗತ್ಯವಿದ್ದ ನಮ್ಮ ಸಮಾಜ ಬಾಂಧವರಿಗೆ ನಮ್ಮಲ್ಲಿ ಆಗುವಷ್ಟು ಸಹಾಯಹಸ್ತ ಚಾಚಬೇಕು ಎನ್ನುವ 
ಹಿತನುಡಿಯನ್ನು ತಿಳಿಸಿದರು.

ಸಭಾಧ್ಯಕ್ಷ ಸುರೇಶ ಡಿ. ಪಡುಕೋಣೆ ಅವರು ಮಾತನಾಡಿ, ನಮ್ಮ ಸಂಘವು ಸಾಕಷ್ಟು ಸಾಧನೆಗಳನ್ನು ಮಾಡಿದೆ. ಅಧ್ಯಕ್ಷರಾದ ಸುಬ್ಬ ಜಿ. ದೇವಾಡಿಗ ಅವರು ಸುದೀರ್ಘ‌ ಕಾಲದಿಂದ ಸಂಘಕ್ಕೆ ಯೋಗ್ಯ ಹಾಗೂ ಉತ್ಕೃಷ್ಟ ಯೋಗದಾನ ನೀಡುತ್ತಿ¨ªಾರೆ. ನಮ್ಮ ಸಂಘಕ್ಕೆ ಅತೀ ಆವಶ್ಯಕವಾದ ನಮ್ಮದೇ ಆದ ಸಮಾಜ ಭವನ ಸ್ಥಾಪಿಸುವಲ್ಲಿ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಅತಿಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಸಂಘದ ಸಂಸ್ಥಾಪಕ ಸದಸ್ಯರುಗಳಾದ ಎನ್‌. ಎನ್‌. ದೇವಾಡಿಗ, ಎಸ್‌. ವಿ. ದೇವಾಡಿಗ,  ಜಿ. ವಿ. ದೇವಾಡಿಗ ಮತ್ತು ಎ. ಎನ್‌. ದೇವಾಡಿಗ ಇವರುಗಳನ್ನು ಹಾಗೂ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ  ಬಿ. ಎಂ. ದೇವಾಡಿಗ,  ಮಹಿಳಾ ವಿಭಾಗದ ಅಧ್ಯಕ್ಷೆ  ಸೀತಾ ಎಂ. ದೇವಾಡಿಗ ದಂಪತಿಯನ್ನು ಅತಿಥಿಗಣ್ಯರು ಸಮ್ಮಾನಿಸಿದರು. ಕು| ದೀಪಾ ಮಹಾಬಲ ದೇವಾಡಿಗ ಇವರನ್ನು ಗೌರವಿಸಲಾಯಿತು.
ವಾರ್ಷಿಕ ಕ್ರೀಡೋತ್ಸವ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಗೌರಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷದಂತೆ ಸುರೇಶ ಕಂಚೀಕಾನ್‌ ಇವರು ಪ್ರಾಯೋಜಿಸಿದರು. ಬಹುಮಾನ ಪಡೆದವರ ಯಾದಿಯನ್ನು ರವೀಂದ್ರ ದೇವಾಡಿಗ,  ಪ್ರೇಮಾ  ದೇವಾಡಿಗ ವಾಚಿಸಿದರು.

ಬೆಳಗ್ಗೆ ಉಪಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಜಿ. ಎ. ದೇವಾಡಿಗ  ಮತ್ತು ಬಿ. ಎಂ. ದೇವಾಡಿಗ  ಅತಿಥಿಗಳನ್ನು ಪರಿಚಯಿಸಿದರು. ಸಭಾ ಕಾರ್ಯಕ್ರಮವನ್ನು  ಬಿ. ಎಂ. ದೇವಾಡಿಗ ಹಾಗೂ ಅಶೋಕ್‌ ಕೆ. ದೇವಾಡಿಗ ನಿರೂಪಿಸಿದರು.  ಬೆಳಗ್ಗಿನ ಸಾಂಸ್ಕೃತಿಕ  ಕಾರ್ಯಕ್ರಮವನ್ನು ಅಶೋಕ್‌ ಕೆ. ದೇವಾಡಿಗ ನೆರವೇರಿಸಿದರು. ಬೆಳಿಗ್ಗಿನ ಸಾಂಸ್ಕೃತಿಕ  ಸ್ಪರ್ಧೆಗಳ ತೀರ್ಪುಗಾರರಾಗಿ ಶ್ಯಾಮಲಾ ರಾಧೇಶ್‌ ಹಾಗೂ ರೇಶ್ಮಾ ಗಣಪತಿ ಶಂಕರಲಿಂಗ ಸಹಕರಿಸಿದರು. ಇವರನ್ನು ಸಂಘದ ಪರವಾಗಿ ಅಭಿನಂದಿಸಲಾಯಿತು. ಯುವ ವೇದಿಕೆಯ ಅಧ್ಯಕ್ಷ ಉಮೇಶ್‌ ಆರ್‌. ದೇವಾಡಿಗ ವಂದಿಸಿದರು.

ಟಾಪ್ ನ್ಯೂಸ್

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಅಬುಧಾಬಿ ಹಿಂದೂ ಮಂದಿರದಲ್ಲಿ ಪ್ರಥಮ ದೀಪಾವಳಿ ಸಂಭ್ರಮ

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸರಣ ಘಟಕಕ್ಕೆ ಗ್ರಹಣ!

ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.