ಪುಣೆ ಪೊಲೀಸರಿಂದ ನಾಗರಿಕರಿಗೆ ಡಿಜಿಟಲ್‌ ಕ್ಯೂಆರ್‌ ಕೋಡ್‌ ಪಾಸ್‌ ವಿತರಣೆ

Team Udayavani, Mar 31, 2020, 6:39 PM IST

mumbai-tdy

ಪುಣೆ, ಮಾ. 30: ಪುಣೆ ಪೊಲೀಸರು ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಲಾಕ್‌ಡೌನ್‌ ಸಮಯದಲ್ಲಿ ಪ್ರಯಾಣದ ಅಗತ್ಯವಿರುವರಿಗೆ ಡಿಜಿಟಲ್‌ ಕ್ಯೂಆರ್‌ ಕೋಡ್‌ ಪಾಸ್‌ಗಳನ್ನು ನೀಡುತ್ತಿದ್ದಾರೆ.

ಭಾನುವಾರದವರೆಗೆ ಪುಣೆ ಪೊಲೀಸರಿಗೆ ಡಿಜಿಟಲ್‌ ಪಾಸ್‌ಗಳಿಗಾಗಿ 33,234 ಅರ್ಜಿಗಳು ಬಂದಿವೆ. ಇದರಲ್ಲಿ 2,403 ಅಂಗೀಕರಿಸಲ್ಪಟ್ಟಿದ್ದು, 1097 ಅನ್ನು ತಿರಸ್ಕರಿಸಲಾಗಿದೆ ಮತ್ತು ಉಳಿದ ವಿನಂತಿಗಳನ್ನು ಪರಿಗಣಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸ್‌ (ಡಿಸಿಪಿ) ಅಪರಾಧ ವಿಭಾಗದ ಉಪ ಆಯುಕ್ತ ಬಚ್ಚನ್‌ ಸಿಂಗ್‌ ಅವರು ಮಾತನಾಡಿ, ವೈದ್ಯಕೀಯ ತುರ್ತು ಪರಿಸ್ಥಿತಿ ಇದ್ದಲ್ಲಿ ಮಾತ್ರ ಪಾಸ್‌ ಗಾಗಿ ಅರ್ಜಿ ಸಲ್ಲಿಸುವಂತೆ ನಾವು ನಿವಾಸಿಗಳನ್ನು ಕೋರುತ್ತೇವೆ. ನಿವಾಸಿಗಳಿಗೆ ತರಕಾರಿ, ಹಾಲು ಮತ್ತು ದಿನಸಿ ಮುಂತಾದ ಅಗತ್ಯ ವಸ್ತುಗಳನ್ನು ಖರೀದಿಸಲು ಪಾಸ್‌ ಅಗತ್ಯವಿಲ್ಲ ಎಂದಿದ್ದಾರೆ.

ನಿವಾಸಿಗಳು ಈ ಉಪಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ಪೊಲೀಸರು ನೀಡಿದ ಸಹಾಯವು ಅವರ ಕಷ್ಟಗಳನ್ನು ಎದುರಿಸಲು ಸಹಾಯ ಮಾಡಿದೆ ಎಂದು ಹೇಳಿದ್ದಾರೆ. ಆರೋಗ್ಯ ಕ್ಷೀಣಿಸುತ್ತಿರುವುದರಿಂದ ನಮ್ಮ ಸಂಬಂಧಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ನಾವು ಡಿಜಿಟಲ್‌ ಪಾಸ್‌ಗಾಗಿ ಅರ್ಜಿ ಸಲ್ಲಿಸಿದ್ದೇವೆ. ನಾವು ಡಿಜಿಟಲ್‌ ಪಾಸ್‌ ಕೇಳಿದೆವು ಮತ್ತು ಪೊಲೀಸ್‌ ಇಲಾಖೆ ಒಂದು ಗಂಟೆಯೊಳಗೆ ಕ್ಯೂಆರ್‌ ಕೋಡ್‌ ಕಳುಹಿಸಿದೆ. ಪ್ರಯಾಣ ಮಾಡುವಾಗ ನಮಗೆ ಯಾವುದೇ ತೊಂದರೆ ಎದುರಾಗಲಿಲ್ಲ. ನಗರ ಪೊಲೀಸರ ಪ್ರಯತ್ನ ಶ್ಲಾಘನೀಯ ಎಂದು ವಿಮನ್ನಗರ ನಿವಾಸಿ ಸೌರಭ್‌ ದಾಸ್‌ಗುಪ್ತಾ ಹೇಳಿದ್ದಾರೆ.

ಪಾಸ್‌ ಪಡೆಯಲು www.punepolice.in ನಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು. ಅನುಮೋದನೆ ದೊರೆತರೆ, ಕ್ಯೂಆರ್‌ ಕೋಡ್‌ನೊಂದಿಗೆ ಪಾಸ್‌ ಪಡೆಯುತ್ತಾರೆ. ಒಂದು ವೇಳೆ ರಸ್ತೆಯಲ್ಲಿ ನಿಲ್ಲಿಸಿದರೆ ಪೊಲೀಸರಿಗೆ ಅದನ್ನು ತೋರಿಸಬೇಕಾಗುತ್ತದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.