ದಿವಾಕರ್  ಕ್ಲಾಸಸ್‌ ಮೋಹನೆ: ವಾರ್ಷಿಕೋತ್ಸವ ಸಂಭ್ರಮ


Team Udayavani, Dec 11, 2018, 4:35 PM IST

2556.jpg

ಡೊಂಬಿವಲಿ: ದಿವಾಕರ್  ಕ್ಲಾಸಸ್‌ ಇದರ ವಾರ್ಷಿಕೋತ್ಸವ ಸಂಭ್ರಮವು ಡಿ. 2ರಂದು ಅಪರಾಹ್ನ 4ರಿಂದ ಅಂಬಿವಲಿ, ಮೋಹನೆಯ ಗಣಪತಿ ಚೌಕ್‌ನ ನಲಂದಾ  ಬುದ್ಧ ವಿಹಾರ್‌ ಸಭಾಗೃಹದಲ್ಲಿ ನಡೆಯಿತು.

ಸಮಾರಂಭವನ್ನು ಬಿಲ್ಲವ ಛೇಂಬರ್‌ ಆಫ್‌ ಕಾಮರ್ಸ್‌ ಆ್ಯಂಡ್‌ ಇಂಡಸ್ಟಿÅà ಇದರ ಕಾರ್ಯಾಧ್ಯಕ್ಷ, ಭಾರತ್‌ ಬ್ಯಾಂಕ್‌ ಇದರ ನಿರ್ದೇಶಕ ಎನ್‌. ಟಿ. ಪೂಜಾರಿ ಇವರು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯವಾಗಿರುತ್ತದೆ. ಆ ಗುರಿಯನ್ನು ತಲುಪುವ ಛಲ, ಪರಿಶ್ರಮವಿದ್ದಾಗ ಮಾತ್ರ ಯಶಸ್ವಿ ಜೀವನ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಗುರು-ಹಿರಿಯರನ್ನು ಗೌರವದಿಂದ ಕಾಣಬೇಕು. ತಾವು ಕಲಿತ ಶಿಕ್ಷಣ ಸಂಸ್ಥೆಯನ್ನು ಸದಾ ನೆನಪಿನಲ್ಲಿಟ್ಟುಕೊಂಡು ಉನ್ನತ ಹುದ್ಧೆಯನ್ನು ಅಲಂಕರಿಸಿ ಸಂಸ್ಥೆಯ ಋಣ ತೀರಿಸುವ ಕಾರ್ಯದಲ್ಲಿ ತೊಡಗಬೇಕು. ಗುರು ಹಿರಿಯರು ಮತ್ತು ಹೆತ್ತವರು ಹಾಗೂ ದೇವರ ಅನುಗ್ರಹವಿದ್ದಲ್ಲಿ ಯಾವುದೇ ಸಾಧನೆಯನ್ನು ಮಾಡಬಹುದು. ಮಕ್ಕಳು ಪರಿಶ್ರಮ, ಏಕಾಗ್ರತೆ,  ಶ್ರದ್ಧೆಯಿಂದ ಕಲಿತು ಜೀವನದಲ್ಲಿ ಸುಸಂಸ್ಕೃತ ವ್ಯಕ್ತಿಗಳಾಗಿ ಬಾಳಬೇಕು ಎಂದು ನುಡಿದರು.

ಮುಖ್ಯ ಅತಿಥಿಯಾಗಿ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಯ ಕಾರ್ಯವೈಖರಿಯನ್ನು ಕಂಡಾಗ ಬಹಳಷ್ಟು ಸಂತೋಷವಾಗುತ್ತಿದೆ. ಸಂಸ್ಥೆಯು ಇನ್ನಷ್ಟು ಸಾಧನೆಗಳನ್ನು ಮಾಡಿ ಬೆಳಗಬೇಕು. ಮಕ್ಕಳ ಉತ್ಸಾಹ, ಪರಿಶ್ರಮವು ಇಂದಿನ ಕಾರ್ಯಕ್ರಮದಿಂದ ತಿಳಿದು ಬರುತ್ತದೆ. ಕೇವಲ ಶಿಕ್ಷಣವನ್ನು ಪಡೆಯುವುದು ಮಾತ್ರವಲ್ಲದೆ ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ವಿದ್ಯಾರ್ಥಿಗಳು ಆದರ್ಶ ಪ್ರಜೆಗಳಾಗಿ ಬಾಳಲು ಸಾಧ್ಯವಾಗುತ್ತದೆ ಎಂದರು.

ಸ್ಥಳೀಯ ಶಾಸಕ ನರೇಂದ್ರ ಪವಾರ್‌ ಅವರು ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳು ದೇಶದ ಸಂಪತ್ತಾಗಿದ್ದು, ಅವರನ್ನು ಆದರ್ಶ ಪ್ರಜೆಗಳನ್ನಾಗಿ ಬೆಳೆಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳಿಗಿದೆ. ಈ ನಿಟ್ಟಿನಲ್ಲಿ ದಿವಾಕರ್‌ ಕ್ಲಾಸಸ್‌ನ
ಕಾರ್ಯವೈಖರಿ ಅಭಿನಂದನೀಯವಾಗಿದೆ ಎಂದು ನುಡಿದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿಶೇಷ ಅತಿಥಿಯಾಗಿ ಆಗಮಿಸಿದ ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರು ಮಾತನಾಡಿ, ಇಂದು ಸಭಾಗೃಹದಲ್ಲಿ ತುಂಬಿ ತುಳುಕುತ್ತಿರುವ ವಿದ್ಯಾರ್ಥಿಗಳು ಹಾಗೂ ಪಾಲಕರ-ಪೋಷಕರನ್ನು ಕಂಡಾಗ ಈ ಸಂಸ್ಥೆಯ ಉತ್ಕೃಷ್ಟ ಸಾಧನೆಯನ್ನು ಪ್ರತಿಬಿಂಬಿಸುವಂತಿದೆ ಎಂದು ನುಡಿದು ಶುಭಹಾರೈಸಿದರು.

ವಿಶೇಷ ಅತಿಥಿಯಾಗಿ ಪಾಲ್ಗೊಂಡ ಭಾರತ್‌ ಬ್ಯಾಂಕಿನ ನಿರ್ದೇಶಕ ಪುರುಷೋತ್ತಮ ಎಸ್‌. ಕೋಟ್ಯಾನ್‌ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮಾತಾಪಿತರು ಹಾಗೂ ಹಿರಿಯರ ಕನಸನ್ನು ನನಸಾಗಿಸುವಲ್ಲಿ ಶ್ರಮಿಸಬೇಕು. ನಾವು ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ಪಡೆದಾಗ ಗುರಿಯನ್ನು ತಲುಪಲು ಸಾಧ್ಯವಿದೆ ಎಂದರು.
ಸಮಾರಂಭದಲ್ಲಿ ಕಳೆದ 15 ವರ್ಷಗಳಿಂದ ಸಂಸ್ಥೆಯ ಪ್ರಬಂಧಕರಾಗಿ ಸೇವೆ ಸಲ್ಲಿಸುತ್ತಿರುವ ಶಶಿಕಲಾ ಜಗದಾಳೆ ಅವರನ್ನು ಸಮ್ಮಾನಿಸಲಾಯಿತು. ಅಲ್ಲದೆ ಶಿಕ್ಷಣ ಸಂಸ್ಥೆಯ ಶಿಕ್ಷಕರನ್ನು ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು, ಸದಸ್ಯರನ್ನು ಗೌರವಿಸಲಾಯಿತು.

ಗೌರವ ಅತಿಥಿಗಳಾಗಿ ಬಿಜೆಪಿ ಮೋಹನೆ-ಟಿಟ್ವಾಲಾ ವಲಯದ ಅಧ್ಯಕ್ಷ ಸುಭಾಶ್‌ ಜಿ. ಪಾಟೀಲ್‌, ನಗರ ಸೇವಕಿ ಸುನಂದಾ ಮುಕುಂದ್‌ ಕೋಟ್‌ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲ ದಿವಾಕರ ಆರ್‌. ಸಾಲ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಅತಿಥಿ-ಗಣ್ಯರು ದೀಪಪ್ರಜ್ವಲಿಸಿ ಉದ್ಘಾಟಿಸಿದರು. ಅತಿಥಿ-ಗಣ್ಯರುಗಳನ್ನು ದಿವಾಕರ ಸಾಲ್ಯಾನ್‌ ಅವರು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಿದರು. ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಸಂಸ್ಥೆಯ ಮಕ್ಕಳಿಂದ ವಿವಿಧ ವಿನೋದಾವಳಿಗಳು ನಡೆದವು. ವಿದ್ಯಾರ್ಥಿ ಹರ್ಷ್‌ ಸಿಂಗ್‌ ಅವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ವಿದ್ಯಾರ್ಥಿಗಳು, ಪಾಲಕ-ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಕಳೆದ ನಲ್ವತ್ತು ವರ್ಷಗಳಿಂದ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ  ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳನ್ನು ಯಶಸ್ವಿ ವ್ಯಕ್ತಿಗಳನ್ನಾಗಿ ಬಿಂಬಿಸಿದ ಹೆಗ್ಗಳಿಕೆಯನ್ನು ಸಂಸ್ಥೆಯು ಹೊಂದಿದೆ. ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಧಾರೆ ಎರೆಯುವುದು ಭಗವಂತನ ಪೂಜೆ ಎಂಬ ದೃಷ್ಟಿಯಿಂದ ಈ ಕಾರ್ಯದಲ್ಲಿ ತೊಡಗಿದ್ದೇನೆ. ನನ್ನ ಕೊನೆಯುಸಿರಿರುವವರೆಗೆ ಶಿಕ್ಷಣವನ್ನು ಧಾರೆಯೆರೆಯುತ್ತೇನೆ. ಯಾವುದೇ ರೀತಿಯ ಭೇದ-ಭಾವ ಇಲ್ಲದೆ ಅಕ್ಷರ ದಾಸೋಹದಲ್ಲಿ ತೊಡಗಿದ್ದೇನೆ. ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣವನ್ನು ನೀಡದರೆ, ಸಂಸ್ಕೃತಿ, ಸಂಸ್ಕಾರಗಳ ಅರಿವನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಸುಸಂಸ್ಕೃತರಾಗಿ ಬೆಳೆದಾಗ ಮಾತ್ರ ಸಂಸ್ಥೆಯ ಉದ್ದೇಶ ಸಾರ್ಥಕತೆಯನ್ನು ಪಡೆಯಲು ಸಾಧ್ಯ. ಸಂಸ್ಥೆಯ ಕಾರ್ಯಕ್ರಮಗಳಿಗೆ ತುಳು-ಕನ್ನಡಿಗರ ಪ್ರೋತ್ಸಾಹ ಸದಾಯಿರಲಿ .
 ದಿವಾಕರ ಆರ್‌. ಸಾಲ್ಯಾನ್‌,  ಪ್ರಾಚಾರ್ಯರು, ದಿವಾಕರ್ ಕ್ಲಾಸಸ್‌ ಮೋಹನೆ 

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.