ಡೊಂಬಿವಲಿ ಕರ್ನಾಟಕ ಸಂಘ:ಏಕಾಂಕ ನಾಟಕ ಸ್ಪರ್ಧೆ
Team Udayavani, Nov 29, 2017, 4:59 PM IST
ಡೊಂಬಿವಲಿ: ನಾಟಕಗಳು ರಂಗ ಭಾಷೆಯನ್ನು ಉಳಿಸಿಕೊಡುವ ಒಂದು ಆಯಾಮ ವಾಗಿದ್ದು, ನಾಟಕ ರಂಗದಲ್ಲಿ ದೊರೆತ ಸಂತೃಪ್ತಿ ಸಿನೆಮಾ ರಂಗದಲ್ಲಿ ದೊರೆಯುವುದಿಲ್ಲ. ನಾಟಕ ಗಳಲ್ಲಿ ಪ್ರೇಕ್ಷಕರು ಸಾಕ್ಷಾತ್ ದೇವರಾಗಿದ್ದರೆ, ಅವರ ಚಪ್ಪಾಳೆಗಳು ದೇವಾಲಯದ ಗಂಟೆಗಳಿದ್ದಂತೆ ಎಂದು ಹಿರಿಯ ರಂಗಕರ್ಮಿ, ಕಲಾಜಗತ್ತು ತೋನ್ಸೆ ವಿಜಯಕುಮಾರ್ ಶೆಟ್ಟಿ ಅವರು ನುಡಿದರು.
ನ. 26ರಂದು ಡೊಂಬಿವಲಿ ಪೂರ್ವದ ಸಾವಿತ್ರಿ ಭಾಯಿ ಫುಲೆ ಸಭಾಗೃಹದಲ್ಲಿ ಡೊಂಬಿವಲಿ ಕರ್ನಾಟಕ ಸಂಘ ಸುವರ್ಣ ಮಹೋತ್ಸವ ಸಂಭ್ರಮದ ಸರಣಿ ಕಾರ್ಯಕ್ರಮ ನಾಡಹಬÛ ಹಾಗೂ ರಂಗತರಂಗ ಕನ್ನಡ ಏಕಾಂಕ ನಾಟಕ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಪ್ರಸ್ತುತ ಹೊರನಾಡಿನಲ್ಲಿ ಕನ್ನಡ ಭಾಷೆಯನ್ನು ಉಳಿಸಲು ಹರಸಾಹಸ ಪಡಬೇಕಾಗಿದೆ. ಇಂದಿನ ಈ ನಾಟಕ ಸ್ಪರ್ಧೆಗಳು ಹೊರನಾಡಿನಲ್ಲಿ ಕನ್ನಡವನ್ನು ಉಳಿಸಿ-ಬೆಳೆಸುವ ಆಶಾದಾಯಕ ಸಂದೇಶವನ್ನು ನೀಡಿದೆ. ಹೊರನಾಡಿನಲ್ಲಿ ಕನ್ನಡದ ತೇರನ್ನು ಎಳೆಯುತ್ತಿರುವ ಡೊಂಬಿವಲಿ ಕರ್ನಾಟಕ ಸಂಘದಂತಹ ಕನ್ನಡಪರ ಸಂಘಟನೆಗಳ ಕಾರ್ಯ ಅಭಿನಂದನೀಯ. ಡೊಂಬಿವಲಿ ಕರ್ನಾಟಕ ಸಂಘದ ಅವಿನಾಭಾವ ಸಂಬಂಧವನ್ನು ವಿವರಿಸಿ, ತಮ್ಮ ಕಾರ್ಯಾವಧಿಯಲ್ಲಿ ಸಹಕರಿಸಿದ ಮಹ ನೀಯರನ್ನು ಸ್ಮರಿಸುವುದರ ಜತೆಗೆ ಇಂದಿನ ಕಾರ್ಯಕಾರಿ ಮಂಡಳಿ ಕಾರ್ಯವೈಖರಿಯನ್ನು ಅಭಿನಂದಿಸಿದರು.
ಅತಿಥಿಯಾಗಿ ಪಾಲ್ಗೊಂಡ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ದಯಾನಂದ ಪೂಜಾರಿ ಅವರು ಮಾತನಾಡಿ, ಇಂದಿನ ಈ ಕನ್ನಡಮಯ ವರ್ಣರಂಜಿತ ಸುಂದರ ಕಾರ್ಯಕ್ರಮವನ್ನು ಕಂಡು ಒಂದು ಕ್ಷಣ ನನಗೆ ಕರ್ನಾಟಕದಲ್ಲಿ ಇದ್ದಂತೆ ಭಾಸವಾಯಿತು. ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯ ನಿಜವಾಗಿಯೂ ಅಭಿನಂದನೀಯವಾಗಿದೆ. ಸುವರ್ಣ ಮಹೋತ್ಸವ ಆಚರಿಸುತ್ತಿರುವ ಸಂಘ ಭವಿಷ್ಯದಲ್ಲಿ ಶತಮಾನೋತ್ಸವವನ್ನು ಆಚರಿಸುವಂತಾಗಲಿ ಎಂದರು.
ಡೊಂಬಿವಲಿ ಕರ್ನಾಟಕ ಸಂಘದ ನಿಕಟಪೂರ್ವ ಅಧ್ಯಕ್ಷ ವಿಟuಲ್ ಎ. ಶೆಟ್ಟಿ ಅವರು ಮಾತನಾಡಿ, ಐದು ದಶಕಗಳ ಹಿಂದೆ ನೆಟ್ಟ ಸಂಘದ ಸಸಿ ಇಂದು ವಿಶಾಲ ವಟವೃಕ್ಷವಾಗಿ ಬೆಳೆದು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನ ದಾಸೋಹ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ವಿದ್ಯೆಯಂತಹ ಸಂಪತ್ತು ಬೇರೊಂದಿಲ್ಲ. ಆದ್ದರಿಂದ ನಮ್ಮ ಈ ಸಂಸ್ಥೆ ಶಿಕ್ಷಣದ ಆದ್ಯತೆಯನ್ನು ಮೂಲಮಂತ್ರವನ್ನಾಗಿಸಿದೆ ಎಂದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ಅವರು ಮಾತನಾಡಿ, ಇಂದಿನ ನಾಟಕ ಸ್ಪರ್ಧೆಗೆ ದೊರೆತ ಜನಮನ್ನಣೆ ಅಭೂತಪೂರ್ವವಾಗಿದ್ದು, ಭಾಗವಹಿಸಿದ ಎಲ್ಲಾ ತಂಡಗಳು ಅಭಿನಂದನೆಗೆ ಅರ್ಹವಾಗಿದೆ. ಡೊಂಬಿವಲಿ ಕರ್ನಾಟಕ ಸಂಘ ಕನ್ನಡವನ್ನು ಉಳಿಸಿ-ಬೆಳೆಸಿಕೊಂಡು ಬರುವ ಕಾರ್ಯ ನಿರಂತರವಾಗಿ ಮುಂದುವರಿಯಲಿದ್ದು, ಅದಕ್ಕೆ ಸಮಸ್ತ ಕನ್ನಡಿಗರು ಸಹಕರಿಸುವರೆಂಬ ವಿಶ್ವಾಸ ವ್ಯಕ್ತಪಡಿಸಿದರು.
ಡೊಂಬಿವಲಿ ಕರ್ನಾಟಕ ಸಂಘದ ಕಾರ್ಯಾಧ್ಯಕ್ಷ ಸುಕುಮಾರ್ ಎನ್. ಶೆಟ್ಟಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಇಂದು ಡೊಂಬಿವಲಿ ಕರ್ನಾಟಕ ಸಂಘ ಆಯೋಜಿಸಿದ ಏಕಾಂಕ ನಾಟಕ ಸ್ಪರ್ಧೆ ಕೇವಲ ಸ್ಪರ್ಧೆಯಾಗಿರದೆ ಕಲಾವಿದರನ್ನು, ಕಲೆಯನ್ನು ಪ್ರೋತ್ಸಾಹಿಸುವ ವೇದಿಕೆಯಾಗಿದೆ ಎಂದು ನುಡಿದು ಸಂಘದ ಮುಂದಿನ ಯೋಜನೆಗಳನ್ನು ವಿವರಿಸಿ ಎಲ್ಲರ ಸಹಕಾರ ಯಾಚಿಸಿದರು.
ಸಮಾರಂಭದಲ್ಲಿ ಸಂಘದ ಹಿರಿಯ ಸದಸ್ಯ ತೋನ್ಸೆ ವಿಜಯಕುಮಾರ್ ಶೆಟ್ಟಿ, ಡಾ| ಗೋವಿಂದ ಕೋಪರ್ಡೆ, ವಿ. ಆರ್. ಭಟ್, ನ್ಯಾಯವಾದಿ ಕೆ. ಎಸ್. ವಿ. ರಾವ್, ನಾಗಲಿಂಗ ಎಂ. ಅರ್ಕಾಚಾರ್ಯ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಸನತ್ ಕುಮಾರ್ ಜೈನ್ ಅವರು ಸಮ್ಮಾನಿತರನ್ನು ಪರಿಚಯಿಸಿದರು.
ದಿನವೀಡಿ ನಡೆದ ಏಕಾಂಕ ನಾಟಕ ಸ್ಪರ್ಧೆಗಳಲ್ಲಿಗೆ ನಿರ್ಣಾಯಕರಾಗಿ ಆಗಮಿಸಿದ ಕರ್ನಾಟಕದ ಅಣ್ಣಪ್ಪಾ ಒಂಟಿಮಾಳಗಿ, ಸತೀಶ್ ಗಟ್ಟಿ ಹಾಗೂ ಬಿ. ಸಿ. ಚೈತ್ರಾಭಾಯಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ರಂಗನಿರ್ದೇಶಕ, ಕವಿ ಸಾ. ದಯಾ ಅವರು ವಿಜೇತರ ಯಾದಿಯನ್ನು ಘೋಷಿಸಿದರು. ವೇದಿಕೆಯಲ್ಲಿ ಗಣ್ಯರುಗಳಾದ ತೋನ್ಸೆ ವಿಜಯಕುಮಾರ್ ಶೆಟ್ಟಿ, ದಯಾನಂದ ಪೂಜಾರಿ ಡೊಂಬಿವಲಿ, ಕರ್ನಾಟಕ ಸಂಘದ ಪದಾಧಿಕಾರಿಗಳಾದ ಇಂದ್ರಾಳಿ ದಿವಾಕರ ಶೆಟ್ಟಿ, ವಿಟuಲ್ ಶೆಟ್ಟಿ, ಸುಕುಮಾರ್ ಎನ್. ಶೆಟ್ಟಿ, ಉಪಾಧ್ಯಕ್ಷ ಡಾ| ದಿಲೀಪ್ ಕೋಪರ್ಡೆ, ಉಪ ಕಾರ್ಯಾಧ್ಯಕ್ಷ ಡಾ| ವಿ. ಎಂ. ಶೆಟ್ಟಿ, ಕೋಶಾಧಿಕಾರಿ ಲೋಕನಾಥ ಶೆಟ್ಟಿ, ಜತೆ ಕೋಶಾಧಿಕಾರಿ ಚಿತ್ತರಂಜನ್ ಆಳ್ವ, ಲಲಿತ ಕಲಾ ವಿಭಾಗದ ಪ್ರಭಾಕರ ಶೆಟ್ಟಿ, ಸತೀಶ್ ಆಲಗೂರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ. ಶೆಟ್ಟಿ, ಗೌರವ ಕಾರ್ಯದರ್ಶಿ ಮಾಧುರಿಕಾ ಬಂಗೇರ, ಸನತ್ ಕುಮಾರ್ ಜೈನ್, ವಸಂತ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ನಾಡಹಬ್ಬದ ನಿಮಿತ್ತ ಸಂಸ್ಥೆಯ ಸದಸ್ಯ ಬಾಂಧವರಿಂದ ನೃತ್ಯ ವೈವಿಧ್ಯ ನಡೆಯಿತು. ಗುರುದೇವ್ ಭಾಸ್ಕರ್ ಶೆಟ್ಟಿ, ಸುಬ್ಬಯ್ಯ ಶೆಟ್ಟಿ, ಗೋಪಾಲ್ ಶೆಟ್ಟಿ, ಅಶೋಕ್ ಶೆಟ್ಟಿ, ವಸಂತ ಕಲಕೋಟಿ, ರಾಜೀವ ಭಂಡಾರಿ, ವಿಮಲಾ ವಿ. ಶೆಟ್ಟಿ, ಗೀತಾ ಮೆಂಡನ್ ಮೊದಲಾದವರು ಉಪಸ್ಥಿತರಿದ್ದರು. ವಸಂತ ಸುವರ್ಣ ಅವರು ಕಾರ್ಯಕ್ರಮ ನಿರ್ವಹಿಸಿದರು. ಮಾಧುರಿಕಾ ಬಂಗೇರ ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ದೇವದಾಸ್ ಕುಲಾಲ್ ವಂದಿಸಿದರು. ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಚಿತ್ರ : ಸತೀಶ್ ಶೆಟ್ಟಿ,
ವರದಿ : ಗುರುರಾಜ ಪೋತನೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.