ಶ್ರೀ ಕ್ಷೇತ್ರ ಘನ್ಸೋಲಿ ಶ್ರೀ ಮೂಕಾಂಬಿಕಾ ಮಂದಿರ: ನವರಾತ್ರಿ
Team Udayavani, Oct 4, 2017, 1:57 PM IST
ನವಿಮುಂಬಯಿ: ಘನ್ಸೋಲಿಯ ಕಾರಣಿಕ ಕ್ಷೇತ್ರ ವಾಗಿರುವ ಶ್ರೀ ಮೂಕಾಂಬಿಕ ದೇವಾಲಯದಲ್ಲಿ 45ನೇ ನವರಾತ್ರಿ ಮಹೋತ್ಸವವು ಅದ್ದೂರಿಯಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸೆ. 28ರಂದು ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಉಷಾಕಾಲ ಪೂಜೆ, ನಿತ್ಯ ಮಹಾಪೂಜೆ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ಮತ್ತು ಶ್ರೀ ಮೂಕಾಂಬಿಕ ಮಹಿಳಾ ಮಂಡಳಿಯವರಿಂದ ಭಜನ ಕಾರ್ಯಕ್ರಮ ಜರಗಿತು.
ಸಂಜೆ ಭರತನಾಟ್ಯ ಕಾರ್ಯಕ್ರಮ, ಭಜನೆ, ಸರ್ವ ಸೇವೆ, ರಂಗಪೂಜೆ, ಮಹಾಪೂಜೆ, ಭಜನೆ ಮಂಗಳ, ಮಂಗಳಾರತಿ, ಅನ್ನಸಂತರ್ಪಣೆ ಜರಗಿತು. ಅನ್ನಸಂತರ್ಪಣೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ನವರಾತ್ರಿ ಸಂದರ್ಭ 10 ದಿನಗಳ ಕಾಲ ಊರಿನಿಂದ ಹೂ ತರಿಸಿ ದೇವಿಗೆ ಅಲಂಕಾರ ಸೇವೆಗೈದ ಭಾರತ್‌ಕೋಚ್‌ನ ಮಾಲಕ ಸದಾಶಿವ ಎಸ್. ಶೆಟ್ಟಿ ದಂಪತಿಯನ್ನು ಇದೇ ಸಂದರ್ಭದಲ್ಲಿ ಪ್ರಸಾದವನ್ನಿತ್ತು ಗೌರವಿಸಲಾಯಿತು.
ದೇವಾಲಯದ ತಂತ್ರಿಗಳಾದ ವಿದ್ವಾನ್ ರಾಮಚಂದ್ರ ಬಾಯಾರ್ ಮತ್ತು ಪ್ರಧಾನ ಅರ್ಚಕ ಗುರುಪ್ರಸಾದ್ ವಿ. ಭಟ್ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಮಂದಿರದ ಅಧ್ಯಕ್ಷ ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ, ಉಪಾಧ್ಯಕ್ಷರಾದ ಜಗದೀಶ್ ಶೆಟ್ಟಿ ನಂದಿಕೂರು, ಕೆ. ಎಂ. ಶೆಟ್ಟಿ, ಗೌರವ ಕಾರ್ಯದರ್ಶಿ ಸುರೇಶ್ ಎಸ್. ಕೋಟ್ಯಾನ್, ಜತೆ ಕಾರ್ಯದರ್ಶಿ ಭಾಸ್ಕರ ಎಂ. ಶೆಟ್ಟಿ, ಗೌರವ ಕೋಶಾಧಿಕಾರಿ ಶೇಖರ ವಿ. ದೇವಾಡಿಗ, ಜತೆ ಕೋಶಾಧಿಕಾರಿ ಚಂದ್ರಹಾಸ ಶೆಟ್ಟಿ ದೆಪ್ಪುಣಿಗುತ್ತು, ಸದಸ್ಯರುಗಳಾದ ರಾಘು ಆರ್. ಕೋಟ್ಯಾನ್, ಕುಟ್ಟಿ ಎ. ಕುಂದರ್, ಸುಧಾಕರ ಸಿ. ಪೂಜಾರಿ, ಶಂಕರ ಮೊಲಿ, ವಿಶ್ವನಾಥ ಎಸ್. ಶೆಟ್ಟಿ, ಅಣ್ಣು ಎಂ. ಶೆಟ್ಟಿ, ಶ್ರೀಧರ ಬಿ. ಪೂಜಾರಿ, ಮಹಾಬಲ ಟಿ. ಶೆಟ್ಟಿ, ಹರೀಶ ಶೆಟ್ಟಿ ಪಡುಬಿದ್ರೆ, ಹರೀಶ್ ಶೆಟ್ಟಿ ಕುರ್ಕಾಲ್, ಹರೀಶ್ ಶೆಟ್ಟಿ ನಲ್ಲೂರು, ಶಕುಂತಳಾ ಎಸ್. ಶೆಟ್ಟಿ ಹಾಗೂ ಮೂಕಾಂಬಿಕಾ ಚಾರಿಟೆಬಲ್ ಮಂಡಳ, ಶ್ರೀ ಮೂಕಾಂಬಿಕಾ ಧರ್ಮಶಾಸ್ತ ಸೇವಾ ಸಂಸ್ಥೆ, ಉಪ ಸಮಿತಿಗಳು, ಮಹಿಳಾ ವಿಭಾಗದವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು.
ಚಿತ್ರ-ವರದಿ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.