ಡೊಂಬಿವಲಿ ಪ. ವಿಭಾಗ ಸಾರ್ವಜನಿಕ ನವರಾತ್ರಿ ಉತ್ಸವ

Team Udayavani, Oct 4, 2017, 1:39 PM IST

02-Mum07b.jpg

ಡೊಂಬಿವಲಿ: ಸುವರ್ಣ ಮಹೋತ್ಸವವನ್ನು ಆಚರಿಸಿದ ತುಳು-ಕನ್ನಡಿಗರ ಪ್ರತಿಷ್ಠಿತ ಡೊಂಬಿವಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳದ 53ನೇ ವಾರ್ಷಿಕ ನವರಾತ್ರಿ ಉತ್ಸವವುಡೊಂಬಿವಲಿ ಪಶ್ಚಿಮದ ಕೇತಿ ಭವನದ ಸಮೀಪದಲ್ಲಿ ಹಾಕಿರುವ ಭವ್ಯ ಮಂಟಪದಲ್ಲಿ ವೇದಮೂರ್ತಿ ಪಂಡಿತ್‌ ಶುಭಕರ ಭಟ್‌ ಅವರ ವೇದ, ಮಂತ್ರ-ಘೋಷಗಳ ಮಧ್ಯೆ ಶ್ರೀ ದೇವಿಯ ಪ್ರಾಣ ಪ್ರತಿಷ್ಠಾಪನೆಯು ಸೆ. 21ರಂದು ನೇರವೇರಿದ್ದು, ಒಂಭತ್ತು ದಿನಗಳ ಕಾಲ ನಿರಂತರವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳು ನಡೆದು, ಸೆ. 30ರಂದು ಸಮಾಪ್ತಿಗೊಂಡಿತು.

ದಿನಂಪ್ರತಿ ಶ್ರೀ ದೇವಿಯ ಪ್ರತಿಮೆಗೆ ವಿವಿಧ ಅಲಂಕಾರಗಳೊಂದಿಗೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಸೆ. 30ರಂದು ಸಂಜೆ ಶ್ರೀದೇವಿಯ ಮೂರ್ತಿಯ ವಿಸರ್ಜನ ಮೆರವಣಿಗೆ ನಡೆಯಿತು. ಪುಷ್ಪಾಲಂಕೃತ ವಾಹನ ದಲ್ಲಿ ವಿವಿಧ ವಾದ್ಯ ಘೋಷಗಳು, ನಾಡಿನ ಸಂಸ್ಕೃತಿ-ಸಂಸ್ಕಾರವನ್ನು ಬಿಂಬಿಸುವ ವೇಷಭೂಷಣಗಳು, ಪ್ರಾತ್ಯಕ್ಷಿಕೆ, ಭಜನೆ, ಸುಡುಮದ್ದುಗಳ ಕಲರವದೊಂದಿಗೆ ಮೆರವಣಿಗೆ  ನಡೆದಿದ್ದು, ಸಾವಿರಾರು ಭಕ್ತಾದಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಮಂಡಳದ ಧರ್ಮದರ್ಶಿ ಅಶೋಕ್‌ ದಾಸು ಶೆಟ್ಟಿ, ಅಧ್ಯಕ್ಷ ಗೋಪಾಲ ಶೆಟ್ಟಿ  ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರ ಉಪಸ್ಥಿತಿಯಲ್ಲಿ ನಡೆದ ವಿಸರ್ಜನ ಮೆರವಣಿಗೆಯಲ್ಲಿ ಮರಾಠಿ ಮಣ್ಣಿನ ಡೋಲು ಕುಣಿತ, ಬೊಂಬೆ ಕುಣಿತ, ಯಕ್ಷಗಾನ ನೃತ್ಯ, ಮುಂಡ್ಕೂರು ಕಲಾಭಿಮಾನಿಗಳ ಬಳಗದ ಹುಲಿವೇಷ, ಹರಿ ಓಂ ಅಯ್ಯಪ್ಪ ಭಕ್ತವೃಂದದಿಂದ ತಾಲೀಮು ಪ್ರದರ್ಶನ, ಮಹಿಳೆಯರಿಂದ ಬಣ್ಣಬಣ್ಣದ ಕೊಡೆಗಳ ಪ್ರದರ್ಶನ, ಕರಾವಳಿಯ ಯುವಕ ವೃಂದದಿಂದ ಕೋಲಾಟ, ಮಹಿಳಾ ವಿಭಾಗದಿಂದ ಭಜನೆ ಇತ್ಯಾದಿ ಕಲಾ ಪ್ರದರ್ಶನಗಳು, ಪ್ರಾತ್ಯಕ್ಷಿಕೆಗಳು ಮೆರವಣಿಗೆಯ ಉದ್ದಕ್ಕೂ ಭಕ್ತಾದಿಗಳನ್ನು ಆಕರ್ಷಿಸಿತ್ತು.

ನಗರದ ವಿವಿಧ ತುಳು-ಕನ್ನಡಪರ, ಜಾತೀಯ ಸಂಘಟನೆಗಳಾದ ಡೊಂಬಿವಲಿ ಕರ್ನಾಟಕ ಸಂಘ, ತುಳುನಾಡ ವೆಲ್ಫೆàರ್‌ಅಸೋಸಿಯೇಶನ್‌, ಬಿಲ್ಲವರ ಅಸೋಸಿಯೇಶನ್‌ ಡೊಂಬಿವಲಿ ಸ್ಥಳೀಯ ಸಮಿತಿ, ಮೊಗವೀರ ಸಂಘ ಡೊಂಬಿವಲಿ ಸ್ಥಳೀಯ ಕಚೇರಿ, ಬಂಟರ ಸಂಘ ಡೊಂಬಿವಲಿ ಪ್ರಾದೇಶಿಕ ಸಮಿತಿ, ಕುಲಾಲ ಸಂಘ ಡೊಂಬಿವಲಿ ಸ್ಥಳೀಯ ಕಚೇರಿ, ರಜಕ ಸಂಘ ಡೊಂಬಿವಲಿ, ಸಮಿತಿ, ದೇವಾಡಿಗ ಸಂಘ ಡೊಂಬಿವಲಿ ಸಮಿತಿ, ಡೊಂಬಿವಲಿ ಹೊಟೇಲ್‌ ಓನರ್ ಅಸೋಸಿಯೇಶನ್‌, ಅಜೆªಪಾಡಾ ಶ್ರೀ ಅಯ್ಯಪ್ಪ ಸೇವಾ ಸಂಸ್ಥೆ ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯ ಬಾಂಧವರು, ತುಳು-ಕನ್ನಡಿಗ ಭಕ್ತಾದಿಗಳು, ಅನ್ಯಭಾಷಿಕ‌ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  

 ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.