ಡಾ| ಬಿ. ಎಂ. ಹೆಗ್ಡೆ ಅವರಿಗೆ “ಜಾರ್ಜ್‌ ಫೆರ್ನಾಂಡಿಸ್‌ ಪುರಸ್ಕಾರ ಪ್ರದಾನ


Team Udayavani, Jun 5, 2019, 5:42 PM IST

0406MUM07

ಮುಂಬಯಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನತೆಯ ಪರಿಶ್ರಮ ಮತ್ತು ಒಗ್ಗಟ್ಟು ಮೆಚ್ಚುವಂಥದ್ದು. ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ| ವಿರೇಂದ್ರ ಹೆಗ್ಗಡೆ ಹಾಗೂ ವೈದ್ಯಕೀಯ ಕ್ಷೇತ್ರದ ಡಾ| ಬಿ. ಎಂ. ಹೆಗ್ಡೆ ಅವರು ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ. ಅಸಂಘಟಿತ ಕಾರ್ಮಿ ಕರನ್ನು ಒಗ್ಗೂಡಿಸುವುದರೊಂದಿಗೆ ಬಡವರ ಸೇವೆಯಲ್ಲಿ ನಿರತರಾಗಿದ್ದ ಕೊಂಕಣ ರೈಲ್ವೇಯ ರೂವಾರಿ ಜಾರ್ಜ್‌ ಫೆರ್ನಾಂಡಿಸ್‌ ಅವರ ಸಂಸ್ಮರಣೆಯಲ್ಲಿ ನೀಡುತ್ತಿರುವ ಈ ವಾರ್ಷಿಕ ಪ್ರಶಸ್ತಿಯನ್ನು ಡಾ| ಬಿ. ಎಂ. ಹೆಗ್ಡೆ ಅವರಿಗೆ ಪ್ರದಾನಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಮಹಾರಾಷ್ಟ್ರ ಹಣಕಾಸು ರಾಜ್ಯ ಸಚಿವ ದೀಪಕ್‌ ಕೇಸರRರ್‌ ಹೇಳಿದರು.

ಜೂ. 3ರಂದು ಕುರ್ಲಾ ಪೂರ್ವದ ಬಂಟರ ಭವನದ ಎನೆಕ್ಸ್‌ ಕಟ್ಟಡದ ಸಭಾಗೃಹದಲ್ಲಿ ನಡೆದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಏಕೈಕ ಸರಕಾರೇತರ ಸಂಸ್ಥೆಯಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಮಾಜಿ ರಕ್ಷಣ ಸಚಿವ “ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ-2019′ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು. ಜಾರ್ಜ್‌ ಅವರ ಪರಿಶ್ರಮ, ದೃಢ ನಿಲುವಿನಿಂದಾಗಿ ಕೊಂಕಣ ರೈಲ್ವೇ ವಿಭಾಗವು ಅಭಿವೃದ್ಧಿ ಹೊಂದುವಲ್ಲಿ ಸಹಕಾರಿಯಾಯಿತು ಎಂದರು.

ಮಂಗಳೂರು, ಉಡುಪಿ ಪರಿಸರವು ನನಗೆ ಅತ್ಯಂತ ಪ್ರಿಯವಾದ ಸ್ಥಳವಾಗಿದೆ. ಈ ಪ್ರದೇಶದಲ್ಲಿ ಅನೇಕ ಬಂಧುಗಳು, ಮಿತ್ರರು ನೆಲೆಸಿದ್ದಾರೆ. ಕರ್ನಾಟಕ ವಿಧಾನ ಸಭೆಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು ಇರುವಂತೆ, ಮಹಾರಾಷ್ಟ್ರ ವಿಧಾನ ಸಭೆಯಲ್ಲಿ ನಿಮ್ಮ ಸಹೋದರನಂತೆ ಸದಾ ನಿಮ್ಮ ಕಾರ್ಯಯೋಜನೆಗಳಿಗೆ ಸಹಕರಿಸುತ್ತೇನೆ ಎಂದರು.

ನೇರ ನಡೆನುಡಿಗೆ ಹೆಸರಾದ ಜಾರ್ಜ್‌: ಕೋಟ
ಗೌರವ ಅತಿಥಿಯಾಗಿ ಕರ್ನಾಟಕ ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜಾರ್ಜ್‌ ಫೆರ್ನಾಂಡಿಸ್‌ ಅವರಂತಹ ನಾಯಕರುಗಳಿಂದ ಇಂದು ಪ್ರಜಾಪ್ರಭುತ್ವ ಉಳಿದಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಅವರ ಪ್ರಮಾಣಿಕ ರಾಜಕೀಯ ವ್ಯಕ್ತಿತ್ವ, ನೇರ ನಡೆನುಡಿ, ಯಾವುದೇ ಕೆಲಸವನ್ನು ಗುರಿ ಮುಟ್ಟುವವರೆಗೆ ಕೊಂಡೊಯ್ಯುವ ಗುಣ ಅನುಕರಣೀಯ. ಅಂತಹ ವ್ಯಕ್ತಿತ್ವದ ಮಹಾನ್‌ ನಾಯಕನ ಸಂಸ್ಮರಣೆಯಲ್ಲಿ ನೀಡುವ ಈ ಪ್ರಶಸ್ತಿಯನ್ನು ಸದಾ ಸಮಾಜದೊಂದಿಗೆ ಬೆಳೆದು, ಸಮಾ ಜದ ಕಳಕಳಿಯನ್ನು ಹೊಂದಿರುವ ಡಾ| ಬಿ. ಎಂ. ಹೆಗ್ಡೆ ಇವರಿಗೆ ನೀಡುತ್ತಿರುವುದು ಅಭಿನಂದನೀಯ. ಇಂದು ಪ್ರಾಮಾಣಿಕ ರಾಜ ಕಾರಣಿಗಳು ಬೆರಳೆಣಿಕೆಯ ಸಂಖ್ಯೆಯಲ್ಲಿದ್ದಾರೆ. ನಾನು ಕಂಡಂತಹ ಕೆಲವೇ ಕೆಲವು ಪ್ರಾಮಾಣಿಕ ರಾಜಕಾರಣಿಗಳಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ಒಬ್ಬರಾಗಿದ್ದಾರೆ. ಅವರ ಹೆಸರನ್ನು ಶಾಶ್ವತವಾಗಿ ಇರಿಸುವಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಾಮಾಜಿಕ ಕಳಕಳಿ ಮೆಚ್ಚುವಂಥದ್ದು. ಜಿಲ್ಲೆಯ ಅಭಿವೃದ್ಧಿಗಾಗಿ ಈ ಸಮಿತಿಯು ಸದಾ ಶ್ರಮಿಸುತ್ತಿದ್ದು, ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡದ ಪ್ರಗತಿಯನ್ನು ಹೊಂದಲಿ. ಅದಕ್ಕೆ ಬೇಕಾಗುವ ಸಹಕಾರ ಇದೆ ಎಂದು ನುಡಿದರು.

ಜಾರ್ಜ್‌ ಫೆರ್ನಾಂಡಿಸ್‌ ಅವರ 89ನೇ ಹುಟ್ಟುಹಬ್ಬದ ನಿಮಿತ್ತ ಮಣಿಪಾಲ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಪದ್ಮಭೂಷಣ ಡಾ| ಬಿ. ಎಂ. ಹೆಗ್ಡೆ ಇವರಿಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಚೊಚ್ಚಲ ವಾರ್ಷಿಕ “ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪುರಸ್ಕಾರ-2019” ವನ್ನು ಗಣ್ಯರ ಉಪಸ್ಥಿತಿಯಲ್ಲಿ ಪ್ರಧಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಬಂಟರ ಸಂಘ ಮುಂಬಯಿ ಮಾಜಿ ಅಧ್ಯಕ್ಷ, ಹಿರಿಯ ಕನ್ನಡಿಗ ಎಂ. ಡಿ. ಶೆಟ್ಟಿ ಅವರು ಉಪಸ್ಥಿತರಿದ್ದರು.

ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ ಹಾಗೂ ಬಂಟರ ಸಂಘ ಎಸ್‌ಎಂ ಶೆಟ್ಟಿ ಶಿಕ್ಷಣ ಸಂಕುಲದ ಕಾರ್ಯಾಧ್ಯಕ್ಷ ಸಿಎ ಶಂಕರ್‌ ಬಿ. ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತ ಡಾ| ಬಿ. ಎಂ. ಹೆಗ್ಡೆ ಅವರನ್ನು ಅಭಿನಂದಿಸಿ ಮಾತನಾಡಿ ಶುಭಹಾರೈಸಿದರು. ಸಮಿತಿಯ ಉಪಾಧ್ಯಕ್ಷ ಸಿಎ ಐ. ಆರ್‌. ಶೆಟ್ಟಿ ಅವರು ಸ್ವಾಗತಿಸಿದರು. ದಯಾಸಾಗರ್‌ ಚೌಟ ಮತ್ತು ಆ್ಯಂಟೋನಿ ಸಿಕ್ವೇರ ಅವರು ಅತಿಥಿಗಳನ್ನು ಪರಿಚಯಿಸಿದರು. ಡಾ| ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಡಾ| ಬಿ. ಎಂ. ಹೆಗ್ಡೆ ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿದರು. ಸಮಿತಿಯ ಉಪಾಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರು ಸಮಿತಿಯ ಕಾರ್ಯಚಟುವಟಿಕೆಗಳನ್ನು ವಿವರಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ದಾಸ್‌ ಅವರು ಕಾರ್ಯಕ್ರಮ ನಿರ್ವಹಿಸಿ ದರು. ಕಾರ್ಯದರ್ಶಿ ದೇವದಾಸ್‌ ಎಲ್‌. ಕುಲಾಲ್‌ ವಂದಿಸಿದರು.
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಉಪಾಧ್ಯಕ್ಷರುಗಳಾದ ಪಿ. ಧನಂಜಯ ಶೆಟ್ಟಿ, ನಿತ್ಯಾನಂದ ಡಿ. ಕೋಟ್ಯಾನ್‌, ಸಿಎ ಐ. ಆರ್‌. ಶೆಟ್ಟಿ, ಬಾಲಕೃಷ್ಣ ಭಂಡಾರಿ, ರಾಮಚಂದ್ರ ಗಾಣಿಗ, ಚಂದ್ರಶೇಖರ ಆರ್‌. ಬೆಳ್ಚಡ, ಜಿ. ಟಿ. ಆಚಾರ್ಯ, ಕೆ. ಎಲ್‌. ಬಂಗೇರ, ಆ್ಯಂಟೋನಿ ಸಿಕ್ವೇರಾ, ಫೆಲಿಕ್ಸ್‌ ಡಿಸೋಜಾ, ಗೌರವ ಪ್ರಧಾನ ಕಾರ್ಯದರ್ಶಿ ಹಿರಿಯಡ್ಕ ಮೋಹನ್‌ದಾಸ್‌, ಗೌರವ ಕಾರ್ಯದರ್ಶಿಗಳಾದ ರವಿ ಎಸ್‌. ದೇವಾಡಿಗ, ಹ್ಯಾರಿ ಸಿಕ್ವೇರಾ, ಬಿ. ಮುನಿರಾಜ್‌ ಜೈನ್‌, ದೇವದಾಸ್‌ ಕುಲಾಲ್‌, ಗೌರವ ಪ್ರಧಾನ ಕೋಶಾಧಿಕಾರಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್‌, ಗೌರವ ಜತೆ ಕೋಶಾಧಿಕಾರಿಗಳಾದ ತುಳಸಿದಾಸ್‌ ಅಮೀನ್‌, ತೋನ್ಸೆ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷರಾದ ವಿಶ್ವನಾಥ್‌ ಮ್ಹಾಡಾ, ಸಮಿತಿಯ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಉಪ ಸ್ಥಿತರಿದ್ದರು.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಜನನಾಯಕ, ಸದಾ ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದ್ದ ಮಾನ್ಯ ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಚೊಚ್ಚಲ ಪ್ರಶಸ್ತಿಯನ್ನು ಪ್ರೀತಿಯಿಂದ ಸ್ವೀಕರಿಸುತ್ತಿದ್ದೇನೆ. ಭ್ರಷ್ಟಾಚಾರ ತುಂಬಿದಂತಹ ರಾಜಕೀಯ ವ್ಯವಸ್ಥೆಯಲ್ಲಿ ಜಾರ್ಜ್‌ ಫೆರ್ನಾಂಡಿಸ್‌ ಅವರು ಆಶಾಕಿರಣವಾಗಿ ಮಿಂಚಿದವರು. ಅವರಂತಹ ಜನಪ್ರತಿನಿಧಿಗಳು ನಮಗಿಂದು ಅಗತ್ಯವಿದೆ.
– ಪದ್ಮಭೂಷಣ ಡಾ| ಬಿ. ಎಂ. ಹೆಗ್ಡೆ
ಜಾರ್ಜ್‌ ಫೆರ್ನಾಂಡಿಸ್‌ ಸಂಸ್ಮರಣ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು.

ಜಾರ್ಜ್‌ ಹೆಸರು ಶಾಶ್ವತ ಆಗಿರಬೇಕು: ತೋನ್ಸೆ
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ಮತ್ತು ಅಧ್ಯಕ್ಷ ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅವರು, ಸಮಿತಿಯ ಪ್ರತಿಯೊಂದು ಯೋಜನೆಗಳಿಗೆ ಮುಕ್ತವಾಗಿ ಸಲಹೆ ಸೂಚನೆಗಳನ್ನು ನೀಡುತ್ತಿದ್ದ ಮಾನ್ಯ ಜಾರ್ಜ್‌ ಫೆರ್ನಾಂಡಿಸ್‌ ಅವರ ಹೆಸರು ಶಾಶ್ವತವಾಗಿ ಉಳಿಯಬೇಕು ಎಂಬ ಉದ್ದೇಶದಿಂದ ಸಮಿತಿ ವತಿಯಿಂದ ಪ್ರಶಸ್ತಿಯನ್ನು ಸ್ಥಾಪಿಸಿದ್ದೇವೆ. ಚೊಚ್ಚಲ ಪ್ರಶಸ್ತಿಯನ್ನು ಪದ್ಮಭೂಷಣ ಡಾ| ಬಿ. ಎಂ. ಹೆಗ್ಡೆ ಅವರಿಗೆ ಪ್ರದಾನಿಸಲು ಬಹಳಷ್ಟು ಸಂತೋಷವಾಗುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಶ್ರೇಯೋಭಿವೃದ್ಧಿಗಾಗಿ ಕಳೆದ ಒಂದು ದಶಕಗಳಿಗಿಂತಲೂ ಅಧಿಕ ಕಾಲದಿಂದ ಸಂಸ್ಥೆಯು ಹಗಲಿರುಳು ಶ್ರಮಿಸುತ್ತಿದೆ. ಅವಿಭಜಿತ ಜಿಲ್ಲೆಗಳಲ್ಲಿ ಮಾಲಿನ್ಯ ರಹಿತ ಉದ್ದಿಮೆಗಳಿಗೆ ಸಮಿತಿಯ ಸಹಕಾರ, ಪ್ರೋತ್ಸಾಹ ಸದಾಯಿದೆ. ಸಂಸ್ಥೆಯ ಪ್ರಮುಖ ಸಲಹೆಗಾರರಾಗಿ ಸಮಿತಿಯ ಎಲ್ಲಾ ಅಭಿವೃದ್ಧಿಪರ ಯೋಜನೆಗಳಿಗೆ ಬೆನ್ನಲುಬಾಗಿ ಸಹಕರಿಸಿದ ಜಾರ್ಜ್‌ ಫೆರ್ನಾಂಡಿಸ್‌ ಅವರ ಮಾರ್ಗದರ್ಶನ ನಮಗೆ ಸ್ಫೂರ್ತಿಯಾಗಿದೆ ಎಂದು ನುಡಿದು, ಡಾ| ಬಿ. ಎಂ. ಹೆಗ್ಡೆ ಇವರನ್ನು ಅಭಿನಂದಿಸಿ ಶುಭಹಾರೈಸಿದರು.

ಚಿತ್ರ ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.