ಆಜ್ದೆಪಾಡಾ ಶ್ರೀ ಅಯ್ಯಪ್ಪ ಮಂದಿರ ಶೈಕ್ಷಣಿಕ ನೆರವು ವಿತರಣೆ
Team Udayavani, Jul 20, 2018, 5:57 PM IST
ಡೊಂಬಿವಲಿ: ಆಜ್ದೆಪಾಡಾ ಶ್ರೀ ಅಯ್ಯಪ್ಪ ಮಂದಿರವು ಕೇವಲ ಧಾರ್ಮಿಕವಾಗಿ ಬೆಳೆಯುತ್ತಿರುವುದಲ್ಲದೆ, ಶೈಕ್ಷಣಿಕವಾಗಿ ಅಪಾರ ಸೇವೆಯನ್ನು ಮಾಡುತ್ತಿದೆ. ಕಳೆದ ಮೂರು ವರ್ಷಗಳಿಂದ ಮಂಡಳಿಯ ವಿದ್ಯಾರ್ಥಿಗಳಿಗೆ ಧರ್ಮಾರ್ಥ ಶಿಕ್ಷಣ ತರಗತಿಗನ್ನು ನಡೆಸುತ್ತಿರುವುದು ಅಭಿನಂದನೀಯ. ವಿದ್ಯಾರ್ಥಿಗಳು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಂ ಅವರ ನಾಲ್ಕು ಮಂತ್ರಗಳನ್ನು ಪಾಲಿಸಿದರೆ ಜೀವನದಲ್ಲಿ ಉತ್ತಮ ವ್ಯಕ್ತಿಯಾಗುವುದರಲ್ಲಿ ಸಂದೇಹವಿಲ್ಲ. ಶಿಕ್ಷಕರು ನಿಸ್ವಾರ್ಥ ಭಾವನೆಯಿಂದ ಶಿಕ್ಷಣ ನೀಡಿ ವಿದ್ಯಾರ್ಥಿಗಳ ಬಾಳನ್ನು ಬೆಳಗುತ್ತಾರೆ. ಅಂತಹ ಶಿಕ್ಷಕರಿಗೆ ವಿದ್ಯಾರ್ಥಿಗಳು ಗೌರವ ನೀಡುವುದು ಆದ್ಯ ಕರ್ತವ್ಯವಾಗಿದೆ. ಶ್ರೀ ಅಯ್ಯಪ್ಪ ದೇವಸ್ಥಾನವನ್ನು ಧಾರ್ಮಿಕತೆಯೊಂದಿಗೆ ಶೈಕ್ಷಣಿಕವಾಗಿ ಬೆಳೆಸುತ್ತಿರುವ ಕಾರ್ಯಕಾರಿಣಿ ಸಮಿತಿ ಅಭಿನಂದನೆಗೆ ಅರ್ಹ. ಇಂತಹ ಉತ್ತಮ ಕಾರ್ಯ ಈ ಮಂಡಳಿಯಿಂದ ಸದಾ ನಡೆಯುತ್ತಿರಲಿ ಎಂದು ಡೊಂಬಿವಲಿ ಕರ್ನಾಟಕ ಸಂಘದ ಅಧ್ಯಕ್ಷ ದಿವಾಕರ ಶೆಟ್ಟಿ ಇಂದ್ರಾಳಿ ನುಡಿದರು.
ಡೊಂಬಿವಲಿ ಆಜೆªಪಾಡಾ ಅಯ್ಯಪ್ಪ ಭಕ್ತಮಂಡಳಿ ಸಂಚಾಲಿತ ಶ್ರೀ ಅಯ್ಯಪ್ಪ ದೇವಸ್ಥಾನದ ವತಿಯಿಂದ ಮಂದಿರದ ಸಭಾಗೃಹದಲ್ಲಿ ನಡೆದ ಗತ ವರ್ಷದಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ವಿದ್ಯಾರ್ಥಿಗಳು ಪಡೆದ ಶೈಕ್ಷಣಿಕ ನೆರವನ್ನು ದೇವರ ಪ್ರಸಾದ ಎಂದು ಸ್ವೀಕರಿಸಿ ಜೀವನದಲ್ಲಿ ಆದರ್ಶ ಪ್ರಜೆಗಳಾಗಿ ಬಾಳಬೇಕು ಎಂದು ಕಿವಿಮಾತು ಹೇಳಿದರು.
ಅತಿಥಿಯಾಗಿ ಪಾಲ್ಗೊಂಡ ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್ ಕುಲಾಲ್ ಅವರು ಮಾತನಾಡಿ, ಪ್ರತಿಯೊಬ್ಬ ಮನುಷ್ಯನ ಬೆಳವಣಿಗೆಗೆ ಶಿಕ್ಷಣ ಅಗತ್ಯವಾಗಿದೆ. ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಪರಿಸರದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ಧೇಶದಿಂದ ಉಚಿತ ಶಿಕ್ಷಣ ತರಗತಿಗಳನ್ನು ನೀಡುತ್ತಿರುವುದು ಅಭಿನಂದನೀಯ. ವಿದ್ಯಾರ್ಥಿಗಳು ತಂದೆ-ತಾಯಿ, ತಾವು ಕಲಿತ ಶಾಲೆ, ಶಿಕ್ಷಕರನ್ನು ಹಾಗೂ ಗುರುಹಿರಿಯರನ್ನು ಎಂದಿಗೂ ಮರೆಯಬಾರದು. ವಿದ್ಯಾರ್ಥಿ ಗಳು ಎಳವೆಯಿಂದಲೇ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡರೆ ಬದುಕು ಸುಂದರವಾಗಿರುವುದರಲ್ಲಿ ಯಾವುದೇ ರೀತಿಯ ಸಂಶಯವಿಲ್ಲ ಎಂದು ಹೇಳಿದರು.
ಇನ್ನೋರ್ವ ಅತಿಥಿ ಉಮೇಶ್ ಪೈ ಅವರು ಮಾತನಾಡಿ, ಮಕ್ಕಳು ಶಿಕ್ಷಣವನ್ನು ಪಡೆದರೆ ಎಂತಹ ಕಷ್ಟದ ಸಂದರ್ಭದಲ್ಲೂ ಸಹಕಾರಿಯಾಗಬಲ್ಲದು. ನಾನು ಉತ್ತಮ ಶಿಕ್ಷಣವನ್ನು ಪಡೆದು ಇಂದು ಈ ಮಟ್ಟಕ್ಕೆ ಬೆಳೆದಿದ್ದೇನೆ. ವಿದ್ಯಾರ್ಥಿಗಳು ಕಠಿನ ಪರಿಶ್ರಮದ ಮೂಲಕ ಅಭ್ಯಾಸಗೈದು ತಮ್ಮ ಗುರಿಯನ್ನು ತಲುಪಬೇಕು. ವಾಟ್ಸಾಪ್, ಫೇಸ್‌ಬುಕ್ ಇನ್ನಿತರ ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಉತ್ತಮ ಗೆಳೆಯರ ಸಂಗ ಮಾಡಿದ್ದಲ್ಲಿ ಜೀವನದಲ್ಲಿ ಯಶಸ್ಸು ಖಂಡಿತ ಎಂದರು.
ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಅಧ್ಯಕ್ಷ ಸದಾನಂದ ಶೆಟ್ಟಿ ಮಾತನಾಡಿ, ಶ್ರೀ ಕ್ಷೇತ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅನ್ನದಾನ ಹಾಗೂ ಕಳೆದ ಮೂರು ವರ್ಷಗಳಿಂದ ಶಿಕ್ಷಣ ದಾನ ಪ್ರಾರಂಭಿಸಿ ಅದರಲ್ಲಿ ಯಶಸ್ಸು ಕಂಡಿದ್ದೇವೆ. ಇಂತಹ ಉತ್ತಮ ಕಾರ್ಯ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯಿಂದ ನಡೆಯುತ್ತಿದೆ ಎನ್ನಲು ಸಂತೋಷವಾಗುತ್ತಿದೆ. ಈ ಎಲ್ಲಾ ಪುಣ್ಯ ಕಾರ್ಯಕ್ರಮಗಳು ದಾನಿಗಳ ಸಹಕಾರ, ಭಕ್ತಮಂಡಳಿಯ ಶ್ರಮದಿಂದ ನಡೆಯುತ್ತಿವೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದ ಉಚಿತ ಶಿಕ್ಷಣ ತರಗತಿಯ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಅದರೊಂದಿಗೆ ಈ ಯೋಜನೆಯ ರೂವಾರಿಗಳಾದ ಮನೋಜ್ ಭಂಡಾರಿ ಹಾಗೂ ಅವರ ಪತ್ನಿ ಕೃತಿಕಾ ಭಂಡಾರಿ, ಶಿಕ್ಷಕ ಚೌಹಾಣ್ ಸರ್ ಅವರನ್ನು ಮಂದಿರದ ವತಿಯಿಂದ ಗೌರವಿಸಲಾಯಿತು. ಕೃತಿಕಾ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಂದಾ ಶೆಟ್ಟಿ ಪ್ರಾರ್ಥನೆಗೈದರು. ಗಣ್ಯರು ದೀಪಪ್ರಜ್ವಲಿಸಿ ಸಮಾರಂಭಕ್ಕೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಸದಾನಂದ ಶೆಟ್ಟಿ, ನಾರಾಯಣ ಶೆಟ್ಟಿ, ಗುರು ಸ್ವಾಮಿ, ದಿವಾಕರ ಶೆಟ್ಟಿ ಇಂದ್ರಾಳಿ, ಉಮೇಶ್ ಪೈ, ಜಯರಾಮ ಶೆಟ್ಟಿ, ಅಜಿತ್ ಶೆಟ್ಟಿ, ರಾಜೀವ ಭಂಡಾರಿ, ಬಾಲಕೃಷ್ಣ ಭಂಡಾರಿ, ದೇವದಾಸ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು. ಹೇಮಂತ್ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿ ಅತಿಥಿಗಳನ್ನು ಪರಿಚಯಿಸಿದರು. ಜಯರಾಮ ಶೆಟ್ಟಿ ಅವರು ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.