ಶಿಕ್ಷಣ ಸ್ವಾವಲಂಬಿ ಬದುಕಿಗೆ ಪ್ರೇರಕ ಶಕ್ತಿ: ಹರೀಶ್ ಸಾಲ್ಯಾನ್
Team Udayavani, Sep 20, 2019, 5:54 PM IST
ಮುಂಬಯಿ, ಸೆ. 19: ಸಂಸ್ಕೃತಿ, ಸಂಸ್ಕಾರಗಳರಭಸದ ಬದಲಾವಣೆಯಲ್ಲೂ ಯಕ್ಷಗಾನ ಸನಾತನ ಧರ್ಮದ ವೇದಿಕೆಯನ್ನು ಕಾಯ್ದು ಕೊಂಡಿದೆ. ಇದು ಸರ್ವ ಸಮಸ್ಯೆಗಳ ಪರಿಹಾರ ಒದಗಿಸುವ ಮಾತೃಸ್ವರೂಪಿಯಾಗಿದೆ. ಸ್ಥಳ ಪುರಾಣಗಳ ಬಯಲಾಟದ ಪ್ರದರ್ಶನದಿಂದ ತುಳುನಾಡಿನ ಪವಿತ್ರ ದೇಗುಲಗಳ ಪೌರಾಣಿಕ ಹಿನ್ನೆಲೆಗಳ ಅರಿವು ನಮಗೆ ಆಗುತ್ತದೆ. ಇದರಿಂದ ಆಯಾಯ ಊರಿನ ಸಂಪ್ರದಾಯ ಶಾಶ್ವತಗೊಳ್ಳುತ್ತದೆ ಎಂದು ಘೋಡ್‌ಬಂದರ್ ರೋಡ್ ಕನ್ನಡ ಅಸೋಸಿಯೇಶನ್ ಥಾಣೆ ಇದರ ಅಧ್ಯಕ್ಷ ಹರೀಶ್ ಡಿ. ಸಾಲ್ಯಾನ್ ಅಭಿಪ್ರಾಯಪಟ್ಟರು.
ಸೆ. 17ರಂದು ಅಪರಾಹ್ನ ಥಾಣೆ ಪಶ್ಚಿಮದ ಘೋಡ್ ಬಂದರ್‌ರೋಡ್ ಕಾಶೀನಾಥ್ ಘಾಣೇಕರ್ ಸಭಾಗೃಹದಲ್ಲಿ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಶನ್ ಥಾಣೆ ಇದರ ಶೈಕ್ಷಣಿಕ ನೆರವು ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾಜದ ಅಮೂಲಾಗ್ರ ಬದಲಾವಣೆಯಲ್ಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದು ಅನಿವಾರ್ಯವಾಗಿದೆ. ಇದು ಸ್ವಾವಲಂಬಿ ಬದುಕಿಗೆ ಪ್ರೇರಕ ಶಕ್ತಿಯಾಗಿದೆ. ಹಲವು ವರ್ಷಗಳಿಂದ ನಮ್ಮ ಸಂಸ್ಥೆಯು ಆರ್ಥಿ ಕವಾಗಿ ಹಿಂದುಳಿದ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದಾನಿಗಳ ಹಾಗೂ ಸದಸ್ಯರ ಸಹಕಾರದಿಂದ ನೆರವು ಒದಗಿಸಿದೆ ಎಂದು ತಿಳಿಸಿದ ಅವರು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸಂಘದ ಧ್ಯೇಯೋದ್ದೇಶಗಳನ್ನು ವಿವರಿಸಿದರು. ಅತಿಥಿ ಯಾಗಿ ಉಪಸ್ಥಿತರಿದ್ದ ಆನಂದ ಬಂಗೇರ ಬಜ್ಪೆ ಶುಭ ಕೋರಿ ಮಾತನಾಡಿದರು. ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ, ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ವ್ಯವಸ್ಥಾಪಕ ರಾಜೇಶ್ ಗುಜರನ್ ಪಾವೂರು, ಸಂಚಾಲಕ ಬಿ. ದಯಾನಂದ ಗುಜರನ್ ಅವರನ್ನು ಗೌರವಿಸಲಾಯಿತು.
ವಿದ್ಯಾರ್ಥಿಗಳ ಪುರಸ್ಕಾರದ ಯಾದಿಯನ್ನು ಶೈಕ್ಷಣಿಕ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮೋಹಿನಿ ಕೊಠಾರಿ ವಾಚಿಸಿದರು. ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸೀಮಾ ಶೆಟ್ಟಿ ವಂದಿಸಿದರು. ಲೇಖಕ ನಿತ್ಯಾನಂದ ಬೆಳ್ವಾಯಿ ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಘೋಡ್ ಬಂದರ್ ರೋಡ್ ಕನ್ನಡ ಅಸೋಸಿಯೇಶನ್ ಗೌರವ ಅಧ್ಯಕ್ಷ ವಿಕ್ರಮಾನಂದ ಶೆಟ್ಟಿ, ಉಪಾಧ್ಯಕ್ಷ ಲಕ್ಷ¾ಣ್ ಮಣಿಯಾಣಿ, ಕೋಶಾಧಿಕಾರಿ ಶ್ರೀನಾಥ್ ಶೆಟ್ಟಿ, ಜತೆ ಕಾರ್ಯದರ್ಶಿ ರವಿ ಕೋಟ್ಯಾನ್, ಜತೆ ಕೋಶಾಧಿಕಾರಿ ಸದಾಶಿವ ಮೊಲಿ, ಸಲಹೆಗಾರ ಪ್ರಶಾಂತ್ ನಾಯಕ್, ಲೆಕ್ಕ ಪರಿಶೋಧಕ ಜಯ ಪೂಜಾರಿ ಯುವ ವಿಭಾಗದ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ, ಪ್ರತಿಭಾ ಶೆಟ್ಟಿ, ಅನುಪಮಾ ರಾವ್ ಮೊದಲಾದವರು ಉಪಸ್ಥಿತರಿದ್ದರು.
ಆಡಳಿತ ಮಂಡಳಿ, ಮಹಿಳಾ ವಿಭಾಗ, ಯುವ ವಿಭಾಗ, ಸರ್ವ ಸದಸ್ಯರು ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಕಲಾವಿದರಿಂದ ಶ್ರೀ ಭಗವತಿ ಕ್ಷೇತ್ರ ಮಹಾತೆ¾ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.
ಚಿತ್ರ-ವರದಿ :ರಮೇಶ್ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.