ಆದೇಶ ಹಿಂಪಡೆಯಲು ಫಡ್ನವೀಸ್ ಮನವಿ
Team Udayavani, Jul 18, 2020, 5:28 PM IST
ಮುಂಬಯಿ, ಜು. 17: ರಾಜ್ಯದ 14,000 ಗ್ರಾಮ ಪಂಚಾಯಿತಿಗಳಿಗೆ ನಿರ್ವಾಹಕರನ್ನು ನಾಮ ನಿರ್ದೇಶನ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಇತ್ತೀಚೆಗೆ ನೀಡಿರುವ ಆದೇಶವನ್ನು ಹಿಂತೆಗೆದು ಕೊಳ್ಳುವಂತೆ ವಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಕೋರಿದ್ದಾರೆ.
ಕೋವಿಡ್ ಸಂದರ್ಭ ರಾಜಕೀಯವಾಗಿ ಮೇಲುಗೈ ಸಾಧಿಸುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಸುಮಾರುಶೇ. 50ರಷ್ಟು ಗ್ರಾಮ ಪಂ.ಗಳು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲಿದ್ದು, ಈ ವರ್ಷದ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿವೆ. ರಾಜಕೀಯ ಆಡಳಿತಗಾರರ ನಾಮನಿರ್ದೇಶನವು ಹಳ್ಳಿಗಳಲ್ಲಿ ಸ್ಥಳೀಯ ಸ್ವ-ಸರಕಾರದ ಪ್ರಜಾಪ್ರಭುತ್ವ ಸಂಪ್ರದಾಯವನ್ನು ನಾಶಮಾಡುವ ಪ್ರಯತ್ನವಾಗಿದೆ ಎಂದು ಫಡ್ನವೀಸ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಸರಪಂಚರು ಈ ನಿರ್ಧಾರಕ್ಕೆ ವಿರೋಧಿಯಾಗಿದ್ದಾರೆ ಮತ್ತು ಗ್ರಾಮ ಮುಖ್ಯಸ್ಥರ ಸಂಘಟನೆಯಾದ ಅಖೀಲ ಭಾರತೀಯ ಸರಪಂಚ್ ಪರಿಷತ್ ಸರಕಾರದ ನಿರ್ಣಯದ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದ್ದಾರೆ ಎಂದು ಫಡ್ನವೀಸ್ ತಿಳಿಸಿದ್ದಾರೆ.
ಕೋವಿಡ್ ಹಿನ್ನೆಲೆ ರಾಜ್ಯ ಚುನಾವಣ ಆಯೋಗವು ಗ್ರಾಮ ಪಂ.ಗೆ ಚುನಾವಣೆಯನ್ನು ಮುಂದೂಡಿದ್ದು, ಅದರ ನಿಯಮಗಳು ಮಾರ್ಚ್ ಅಥವಾ ನವೆಂಬರ್ ನಡುವೆ ವರ್ಷಾಂತ್ಯಕ್ಕೆ ಕೊನೆಗೊಳ್ಳುತ್ತವೆ. ಮತದಾನದವರೆಗೂ ಈ ಸಂಸ್ಥೆಗಳ ನಿರ್ವಾಹಕರನ್ನು ನೇಮಕ ಮಾಡಲು ಎಸ್ ಇಸಿ ಶಿಫಾರಸು ಮಾಡಿತ್ತು. ಈ ಚುನಾವಣೆಗಳು ಪಕ್ಷದ ಚಿಹ್ನೆಯ ಮೇಲೆ ಸ್ಪರ್ಧಿಸದಿದ್ದರೂ, ಚುನಾಯಿತ ಗ್ರಾಮ ಪಂ.ಗಳು ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಹೊಂದಿವೆ. ಮುಂಬರುವ ಚುನಾವಣೆಯಲ್ಲಿ ಎಂವಿಎ ಪಕ್ಷಗಳು ಪಂ. ಮೇಲೆ ಹಿಡಿತ ಸಾಧಿಸಿ ಬಿಜೆಪಿಯನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ
Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.